ದಲಿತ ಬಾಲಕಿ ಮೇಲೆ ಅತ್ಯಾಚಾರ: 13 ವರ್ಷಗಳ ಬಳಿಕ ಅಪರಾಧಿಗೆ ಜೀವಾವಧಿ ಶಿಕ್ಷೆ

Date:

ದಲಿತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಬರೋಬ್ಬರಿ 13 ವರ್ಷಗಳ ಬಳಿಕ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 32,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಉತ್ತರ ಪ್ರದೇಶದ ಜಹಾಂಗೀರ್‌ಗಂಜ್ ಪ್ರದೇಶದ ಅಂಬೇಡ್ಕರ್‌ ನಗರದಲ್ಲಿ 2012ರ ಏಪ್ರಿಲ್ 25ರಂದು ಘಟನೆ ನಡೆದಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿರುವ ಪೋಕ್ಸೋ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ವಿಶೇಷ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.

ಕೃತ್ಯ ನಡೆದಿದ್ದ ದಿನ ಸಂತ್ರಸ್ತ ಬಾಲಕಿಯ ತಂದೆ ಇದ್ದಕ್ಕಿದ್ದಂತೆ ಮೂರ್ಛೆ ಹೋಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದು ರಾತ್ರಿ, ಬಾಲಕಿಯನ್ನು ಗ್ರಾಮದ ತೌಫಿಕ್ ಮತ್ತು ಮೊಹಮ್ಮದ್ ಶಮಿ ಎಂಬವರು ಅಪಹರಿಸಿದ್ದರು. ಸಂತ್ರಸ್ತೆಯು ಕುಟುಂಬವು ಬಾಲಕಿಗಾಗಿ ಹುಡುಕಾಟ ನಡೆಸಿತ್ತು. ಇದೇ ವೇಳೆ, ಸಂತ್ರಸ್ತೆಯ ಮನೆಯಲ್ಲಿ ತೌಫಿಕ್ ಮೊಬೈಲ್ ಪತ್ತೆಯಾಗಿತ್ತು. ಆರೋಪಿ ತೌಫಿಕ್‌ನನ್ನು ಬಾಲಕಿ ಬಗ್ಗೆ ವಿಚಾರಿಸಿದಾಗ, ಆತನ ಸಂತ್ರಸ್ತೆಯ ಕುಟುಂಬಸ್ಥರಿಗೆ ಬೆದರಿಕೆ ಹಾಕಿದ್ದನೆಂದು ಆರೋಪಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ, ಬಾಲಕಿಯ ಕುಟುಂಬವು ಪ್ರಮುಖ ಆರೋಪಿ (ಅಪರಾಧಿ) ತೌಫಿಕ್, ಶಮಿ ಹಾಗೂ ರೌಫ್ ವಿರುದ್ಧ ದೂರು ನೀಡಿದ್ದರು. ಅವರ ದೂರಿನ ಆಧಾರದ ಮೇಲೆ ಜಹಾಂಗೀರ್‌ಗಂಜ್ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ವೇಳೆ ಆರೋಪಿ ತೌಫಿಕ್ ತನ್ನ ಸ್ಬೇಹಿತ ಅಯೋಧ್ಯಾ ಪ್ರಸಾದ್ ಎಂಬಾತ ಸಹಾಯದಿಂದ ಬಾಲಕಿಯನ್ನು ಮುಂಬೈಗೆ ಕರೆದೊಯ್ದು, ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ ಎಂಬುದು ತಿಳಿದುಬಂಂದಿತ್ತು. ಪೊಲೀಸರು ತೌಫಿಕ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮ್ ವಿಲಾಸ್ ಸಿಂಗ್ ಅವರು ಪ್ರಮುಖ ಆರೋಪಿ ತೌಫಿಕ್‌ನನ್ನು ಅಪರಾಧಿ ಎಂದು ಘೋಷಿಸಿದ್ದಾರೆ. ಆತನಿಗೆ ಜೀವಾವಧಿ ಶಿಕ್ಷೆ ಮತ್ತು 32,000 ರೂ. ದಂಡ ವಿಧಿಸಿದ್ದಾರೆ. ಇತರ ಆರೋಪಿಗಳಾದ ಶಮಿ ಮತ್ತು ಅಯೋಧ್ಯಾ ಪ್ರಸಾದ್ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...