2ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ; ಖಾಸಗಿ ಶಾಲೆಯ ಮಾಲೀಕನ ಬಂಧನ

Date:

ಮಧ್ಯಪ್ರದೇಶದ ಶಾಲೆಯ ಹಾಸ್ಟೆಲ್‌ನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಭೋಪಾಲ್‌ನ ಖಾಸಗಿ ಶಾಲೆಯ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ದೂರು ನೀಡದಂತೆ ಸಂತ್ರಸ್ತ ಬಾಲಕಿಯ ತಾಯಿಗೆ ಒತ್ತಡ ಹಾಕಿ, ಅಮಾನತುಗೊಂಡಿದ್ದ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ನನ್ನೂ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂತ್ರಸ್ತೆಯ ತಾಯಿ ಏಪ್ರಿಲ್ 30ರಂದು ಅತ್ಯಾಚಾರ ಪ್ರಕರಣದ ದೂರು ದಾಖಲಿಸಿದ್ದರು. ಪೊಲೀಸರು ಮೂವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣ ದಾಖಲಾಗಿ ಎರಡು ವಾರಗಳ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

“ಅತ್ಯಾಚಾರ ಆರೋಪದ ಮೇಲೆ ಮಂಗಳವಾರ ಶಾಲಾ ಮಾಲೀಕರನ್ನು ಬಂಧಿಸಲಾಗಿದೆ. ಇನ್ನಿಬ್ಬರು ಸಹ ಆರೋಪಿಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ” ಎಂದು ಪೊಲೀಸ್ ಉಪ ಆಯುಕ್ತ (ಡಿಸಿಪಿ) ಶ್ರದ್ಧಾ ತಿವಾರಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೂರು ದಾಖಲಿಸದಂತೆ ಸಂತ್ರಸ್ತೆಯ ತಾಯಿಗೆ ಒತ್ತಡ ಹೇರಿದ್ದಕ್ಕಾಗಿ ಸಬ್ ಇನ್ಸ್‌ಪೆಕ್ಟರ್ ಪ್ರಕಾಶ್ ಸಿಂಗ್ ರಜಪೂತ್ ಅವರನ್ನು ಅಮಾನತುಗೊಳಿಸಲಾಗಿತ್ತು. ಈಗ, ಅವರನ್ನೂ ಬಂಧಿಸಲಾಗಿದೆ” ಎಂದು ತಿವಾರಿ ಹೇಳಿದ್ದಾರೆ.

ಘಟನೆ ಸುದ್ದಿಯಾದ ಬಳಿಕ, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ, ತನಿಖೆಗೆ ಆದೇಶಿಸಿದ್ದರು.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು ಪೋಕ್ಸೊ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...