ಅಪರೂಪದ ಘಟನೆ | ವೃದ್ಧನ ಪಿತ್ತಕೋಶದಿಂದ 8,125 ಕಲ್ಲುಗಳನ್ನು ಹೊರತೆಗೆದ ವೈದ್ಯರು

Date:

ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ಬಂದಿದ್ದ 70 ವರ್ಷದ ವೃದ್ಧರೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಿ, ಪಿತ್ತಕೋಶದಿಂದ ಬರೋಬ್ಬರಿ 8,000ಕ್ಕೂ ಹೆಚ್ಚು ಕಲ್ಲುಗಳನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಅಪರೂಪದ ಪ್ರಕರಣವು ದೆಹಲಿಯ ಗುರುಗ್ರಾಮದ ಪೋರ್ಟಿಸ್‌ ಸ್ಮಾರಕ ಸಂಶೋಧನಾ ಸಂಸ್ಥೆಯಲ್ಲಿ ಘಟಿಸಿದೆ.

ರೋಗಿಯು ಸುಮಾರು 5 ವರ್ಷಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ನೋಟು ತಾಳಲಾರದೆ ಗುರುಗ್ರಾಮದ ಆಸ್ಪತ್ರೆಗೆ ಬಂದಿದ್ದರು. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಅವರ ಹೊಟ್ಟೆಯಲ್ಲಿ ಕಲ್ಲುಗಳು ಇರುವುದು ಪತ್ತೆಯಾಗಿತ್ತು. ಅವರಿಗೆ ಆಂಕೊಲಾಜಿ ವಿಭಾಗದ ಹಿರಿಯ ನಿರ್ದೇಶಕ ಡಾ. ಅಮಿತ್ ಜಾವೇದ್ ಮತ್ತು ಬೇರಿಯಾಟ್ರಿಕ್ ವಿಭಾಗದ ಪ್ರಧಾನ ಸಲಹೆಗಾರ ಡಾ. ನರೋಲಾ ಯಾಂಗರ್ ನೇತೃತ್ವದಲ್ಲಿ ವೈದ್ಯರ ತಂಡವು 1 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದೆ. ಅವರ ಪಿತ್ತಕೋಶದ ಬಳಿಯಿದ್ದ 8,125 ಕಲ್ಲುಗಳನ್ನು ಹೊರತೆಗೆದಿದೆ.

“ರೋಗಿಯ ಪಿತ್ತಕೋಶವು ಊದಿಕೊಂಡಿತ್ತು. ಅದರಲ್ಲಿ ಕಲ್ಲುಗಳು ತುಂಬಿಕೊಂಡಿದ್ದವು. ಚಿತ್ತಕೋಶವು ಹೊಡೆದು ಛಿದ್ರವಾಗುವ ಹಂತಕ್ಕೆ ಬಂದಿತ್ತು. ನಾವು ಎಚ್ಚರಿಕೆಯಿಂದ ಶಸ್ತ್ರಚಿಕಿತ್ಸೆ ನಡೆಸಿದ್ದೇವೆ. ಕಲ್ಲುಗಳನ್ನು ಹೊರತೆಗೆದಿದ್ದೇವೆ. ರೋಗಿಯ ಆರೋಗ್ಯ ಸುಧಾರಿಸುತ್ತಿದೆ” ಎಂದು ಡಾ. ಜಾವೇದ್ ಮತ್ತು ಡಾ. ಯಾಂಗರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡ ಬಳಿಕ, ಹೊಟ್ಟೆಯ ಅಲ್ಟ್ರಾಸೌಂಡ್ ಪರೀಕ್ಷೆಗೆ ಒಳಪಡಿಸಲಾಯಿತು. ಪರೀಕ್ಷೆಯಲ್ಲಿ ಪಿತ್ತಕೋಶವು ಊದಿಕೊಂಡಿರುವುದು ಗೊತ್ತಾಯಿತು. ತಕ್ಷಣವೇ ಶಸ್ತ್ರಚಕಿತ್ಸೆ ನಡೆಸಿದ್ದೇವೆ” ಎಂದು ಡಾ. ಜಾವೇದ್ ಹೇಳಿದ್ದಾರೆ.

“ಈ ಪ್ರಕರಣ ಅಪರೂಪದ್ದಾಗಿದೆ. ಚಿಕಿತ್ಸೆ ಪಡೆಯುವುದನ್ನು ವರ್ಷಗಟ್ಟಲೆ ನಿರ್ಲಕ್ಷ್ಯಿಸಿರುವ ಕಾರಣ, ಕಲ್ಲುಗಳ ಸಂಖ್ಯೆ ಹೆಚ್ಚಾಗಿದೆ. ಶಸ್ತ್ರಚಿಕಿತ್ಸೆಯನ್ನು ಇನ್ನಷ್ಟು ವಿಳಂಬ ಮಾಡಿದ್ದರೆ, ಪಿತ್ತಕೋಶದ ಸೋಂಕು, ಹೊಟ್ಟೆ ನೋವು ಸೇರಿದಂತೆ ಗಂಭೀರ ಸಮಸ್ಯೆಗಳು ಎದುರಾಗುತ್ತಿದ್ದವು” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...