ಅವಿವಾಹಿತರಾಗಿದ್ದ ರತನ್; ಟಾಟಾ ಸಮೂಹಕ್ಕೆ ಉತ್ತರಾಧಿಕಾರಿ ಯಾರು?

Date:

ವಯೋಸಹಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಉದ್ಯಮಿ ರತನ್‌ ಟಾಟಾ ಅವರು ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ರಾಜ್ಯಕಾರಣಗಳು, ನಟ-ನಟಿಯರು, ಉದ್ಯಮಿಗಳು ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಮದುವೆಯಾಗದೆ, ಅವಿವಾಹಿತ ಜೀವನ ನಡೆಸುತ್ತಿದ್ದ ಟಾಟಾ ಅವರು ನಿಧನರಾದ ಬೆನ್ನಲ್ಲೇ, ಅವರ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.

ರತನ್ ಟಾಟಾ ಅವರ ತಂದೆ ನವಲ್ ಟಾಟಾ ಅವರಿಗೆ ಇಬ್ಬರು ಪತ್ನಿಯರಿದ್ದರು. ಅವರಲ್ಲಿ, ಮೊದಲ ಪತ್ನಿಯ ಮಕ್ಕಳು ರತನ್ ಟಾಟಾ ಮತ್ತು ಜಿಮ್ಮಿ ಟಾಟಾ ಹಾಗೂ ಎರಡನೇ ಪತ್ನಿಯ ಮಕ್ಕಳು ನೋಹಲ್ ಟಾಟಾ. ಹೀಗಾಗಿ, ರತನ್ ಟಾಟಾ ಅವರ ಉದ್ಯಮವನ್ನು ಜಿಮ್ಮಿ ಟಾಟಾ ಅಥವಾ ನೋಯಲ್ ಟಾಟಾ ಅವರ ಮಕ್ಕಳು ಮುನ್ನಡೆಸಬೇಕು ಎಂಬ ಪ್ರಸ್ತಾವಿದೆ ಎಂದು ತಿಳಿದುಬಂದಿದೆ.

ಆದರೆ, ಜಿಮ್ಮಿ ಟಾಟಾ ಅವರಿಗೆ ಉದ್ಯಮದಲ್ಲಿ ಆಸಕ್ತಿ ಇಲ್ಲದ ಕಾರಣ, ನೋಯಲ್ ಟಾಟಾ ಅವರ ಮಕ್ಕಳು ಟಾಟಾ ಉದ್ಯಮವನ್ನು ಮುನ್ನಡೆಸಬಹುದು. ಆಥವಾ ಟಾಟಾ ಅವರು ಕಟ್ಟಿದ್ದ ‘ಟ್ರಸ್ಟ್‌’ ಟಾಟಾ ಉದ್ಯಮವನ್ನು ಮುನ್ನಡೆಸಬಹುದು ಎಂದೂ ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಮಧ್ಯಮ ವರ್ಗದವರ ಕನಸು ನನಸು – ಮುಚ್ಚುವಂತಹ ಸ್ಥಿತಿಯಲ್ಲಿದ್ದ ಸಂಸ್ಥೆ ಲಾಭದೆಡೆಗೆ; ರತನ್‌ ಟಾಟಾ ವಿಶಿಷ್ಟ ಸಾಧನೆಗಳು

ನೋಯೆಲ್ ಟಾಟಾ ಅವರ ಮಕ್ಕಳಲ್ಲಿ ಹಿರಿಯರಾದ ಲೇಹ್‌ ಟಾಟಾ ಅವರು ಟಾಟಾ ಸಮೂಹದ ‘ತಾಜ್‌ ಹೋಟೆಲ್ಸ್‌ ರೆಸಾರ್ಟ್ಸ್‌ ಅಂಡ್‌ ಪ್ಯಾಲೆಸ್‌’ನ ಸಹಾಯಕ ಮಾರಾಟ ವ್ಯವಸ್ಥಾಪಕರಾಗಿದ್ದಾರೆ. ಜೊತೆಗೆ ‘ದಿ ಇಂಡಿಯನ್ ಹೋಟೆಲ್ಸ್‌ ಕಂಪನಿ ಲಿಮಿಟೆಡ್’ (ಐಎಚ್‌ಸಿಎಲ್‌) ಉಪಾಧ್ಯಕ್ಷರೂ ಆಗಿದ್ದಾರೆ.

ಕಿರಿಯ ಪುತ್ರಿ ಮಾಯಾ ಅವರು ಟಾಟಾ ಸಮೂಹದ ಹಣಕಾಸು ಸೇವಾ ಕಂಪನಿ ‘ಟಾಟಾ ಕ್ಯಾಪಿಟಲ್ಸ್‌’ನಲ್ಲಿ ವಿಶ್ಲೇಷಕರಾಗಿದ್ದಾರೆ. ಅವರ ಪುತ್ರ ನೆವಿಲ್ಲೆ ಟಾಟಾ ಸಮೂಹದ ರೀಟೆಲ್‌ ವ್ಯವಹಾರದ ಕಂಪನಿ ‘ಟ್ರೆಂಟ್‌’ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...