ಜಾರ್ಖಂಡ್ ಪೊಲೀಸ್ ಠಾಣೆಯಲ್ಲಿದ್ದ 9 ಕೆಜಿ ಗಾಂಜಾ, 10 ಕೆಜಿ ಭಾಂಗ್ ನಾಶ; ಇಲಿಗಳ ಮೇಲೆ ಆರೋಪ!

Date:

ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಜಪ್ತಿ ಮಾಡಿ ಇರಿಸಲಾಗಿದ್ದ 10 ಕೆಜಿ ಭಾಂಗ್ ಮತ್ತು ಒಂಬತ್ತು ಕೆಜಿ ಗಾಂಜಾವನ್ನು ನಾಶಮಾಡಿದ ಆರೋಪವನ್ನು ಇಲಿಗಳ ಮೇಲೆ ಹೊರೆಸಲಾಗಿದೆ!

ಇಲಿಗಳೇ ಗಾಂಜಾ ನಾಶ ಮಾಡಿದೆ ಎಂಬ ವಿಷಯವನ್ನು ಪೊಲೀಸರು ಜಿಲ್ಲೆಯ ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಪ್ರಕರಣಕ್ಕೆ ಸಂಬಂಧಿಸಿದ ವಕೀಲರು ಭಾನುವಾರ ತಿಳಿಸಿದ್ದಾರೆ.

ಆರು ವರ್ಷಗಳ ಹಿಂದೆ ವಶಪಡಿಸಿಕೊಂಡ ಭಾಂಗ್ ಮತ್ತು ಗಾಂಜಾವನ್ನು ನ್ಯಾಯಾಲಯದಲ್ಲಿ ಪ್ರಸ್ತುತಪಡಿಸುವಂತೆ ರಾಜ್‌ಗಂಜ್ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿಗೆ ನ್ಯಾಯಾಲಯ ಸೂಚಿಸಿದೆ. ಅದಾದ ಬಳಿಕ ಪೊಲೀಸರು ಈ ಕುರಿತಾಗಿ ಶನಿವಾರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಮ್ ಶರ್ಮಾ ಅವರಿಗೆ ವರದಿಯನ್ನು ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?    ಬೆಂಗಳೂರು | ವಿದ್ಯುತ್ ಅವಘಡಕ್ಕೆ ಇಲಿ ಕಾರಣ; ತನಿಖೆಗೆ 4 ಸಮಿತಿ ರಚನೆ

ಪೊಲೀಸ್ ಠಾಣೆಯ ಗೋದಾಮಿನಲ್ಲಿ ಸಂಗ್ರಹವಾಗಿದ್ದ ಮಾದಕ ವಸ್ತುಗಳನ್ನು ಇಲಿಗಳು ಸಂಪೂರ್ಣವಾಗಿ ನಾಶಪಡಿಸಿವೆ ಎಂದು ಅಧಿಕಾರಿ ತಮ್ಮ ವರದಿಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ವರದಿ ಕೂಡ ದಾಖಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಡಿಸೆಂಬರ್ 14, 2018 ರಂದು, ರಾಜಗಂಜ್ ಪೊಲೀಸರು 10 ಕೆಜಿ ಭಾಂಗ್ ಮತ್ತು ಒಂಬತ್ತು ಕೆಜಿ ಗಾಂಜಾದೊಂದಿಗೆ ಶಂಭು ಪ್ರಸಾದ್ ಅಗರ್ವಾಲ್ ಎಂಬ ವ್ಯಕ್ತಿ ಮತ್ತು ಆತನ ಪುತ್ರನನ್ನು ಬಂಧಿಸಿದ್ದರು. ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಾಗಿತ್ತು.

ವಿಚಾರಣೆ ವೇಳೆ ನ್ಯಾಯಾಲಯವು ಪ್ರಕರಣದ ತನಿಖಾಧಿಕಾರಿ ಜಯಪ್ರಕಾಶ್ ಪ್ರಸಾದ್ ಅವರಿಗೆ ಜಪ್ತಿ ಮಾಡಿದ ಭಾಂಗ್ ಮತ್ತು ಗಾಂಜಾವನ್ನು ಏಪ್ರಿಲ್ 6 ರಂದು ನ್ಯಾಯಾಲಯಕ್ಕೆ ಸಾಕ್ಷಿಯಾಗಿ ನೀಡುವಂತೆ ಆದೇಶಿಸಿತ್ತು.

ಇದನ್ನು ಓದಿದ್ದೀರಾ?  ಐಕಿಯಾ ಬೆಂಗಳೂರು: ಊಟ ಮಾಡುತ್ತಿರುವಾಗ ದಿಢೀರನೆ ತಟ್ಟೆ ಮೇಲೆ ಬಿದ್ದ ಸತ್ತ ಇಲಿ!

ಆದರೆ ವಶಪಡಿಸಿಕೊಂಡ ಎಲ್ಲಾ ವಸ್ತುಗಳನ್ನು ಇಲಿಗಳು ನಾಶಪಡಿಸಿವೆ ಎಂದು ರಾಜ್‌ಗಂಜ್ ಪೊಲೀಸ್ ಠಾಣಾಧಿಕಾರಿಯ ಅರ್ಜಿಯೊಂದಿಗೆ ಪ್ರಸಾದ್ ಶನಿವಾರ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ ಎಂದು ಪ್ರಕರಣದ ಪರ ವಕೀಲ ಅಭಯ್ ಭಟ್ ಪಿಟಿಐಗೆ ತಿಳಿಸಿದರು. ಹಾಗೆಯೇ ಪೊಲೀಸರು ವಶಪಡಿಸಿಕೊಂಡ ವಸ್ತುಗಳನ್ನು ಸಾಕ್ಷಿಯಾಗಿ ನೀಡಲು ಸಾಧ್ಯವಾಗದ ಕಾರಣ ತನ್ನ ಕಕ್ಷಿದಾರನನ್ನು ಸುಳ್ಳು ಪ್ರಕರಣಗಳಲ್ಲಿ ಬಂಧಿಸಲಾಗಿದೆ ಎಂದು ಭಟ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...