ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್‌ಗೆ ಎದೆಯುರಿ, ಆಸ್ಪತ್ರೆಗೆ ದಾಖಲು

Date:

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಎದೆಯುರಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು (ನ.26) ಬೆಳಿಗ್ಗೆ ಚೆನ್ನೈನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದಾಸ್ ಅವರು ಸೋಮವಾರ ಕಾರ್ಯನಿಮಿತ್ಯ ಚೆನ್ನೈಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಎದೆಯುರಿ ಕಂಡುಬಂದಿದ್ದು, ಅವರನ್ನು ಸನಿಹದ ಚೆನ್ನೈನಲ್ಲಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಶೀಘ್ರವೇ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆರ್‌ಬಿಐ ವಕ್ತಾರರು ತಿಳಿಸಿದ್ದಾರೆ.

ಶಕ್ತಿಕಾಂತ್​ ದಾಸ್​ ಅವರನ್ನು ಆರ್‌ಬಿಐ ಗವರ್ನರ್‌ ಆಗಿ ಮೂರು ವರ್ಷದ ಅವಧಿಗೆ ಕೇಂದ್ರ ಸರ್ಕಾರ 2021ರಲ್ಲಿ ಮರು ನೇಮಕ ಮಾಡಿತ್ತು. ಶಕ್ತಿಕಾಂತ್‌ ದಾಸ್‌ರವರನ್ನು ಡಿಸೆಂಬರ್ 10, 2021ರಿಂದ ಡಿಸೆಂಬರ್ 10,2024ರವರೆಗೆ ಮೂರು ವರ್ಷಗಳ ಅವಧಿಗೆ ನೇಮಿಸಲಾಗಿತ್ತು.ಶಕ್ತಿಕಾಂತ ದಾಸ್‌ರವರು 2018ರ ಡಿಸೆಂಬರ್‌ನಲ್ಲಿ ಆರ್‌ಬಿಐ ಗವರ್ನರ್‌ ಆಗಿ ನೇಮಕಗೊಂಡಿದ್ದರು. ಇದೇ ಡಿಸೆಂಬರ್‌ಗೆ ಅವರ ಅಧಿಕಾರವಧಿ ಮುಕ್ತಾಯವಾಗಲಿದ್ದ ಹಿನ್ನೆಲೆಯಲ್ಲಿ ಅವರನ್ನು ಮರುನೇಮಕ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎನ್‌ಡಿಎ ಸರ್ಕಾರದಲ್ಲಿ ಎರಡನೇ ಬಾರಿಗೆ ಆರ್‌ಬಿಐ ಗವರ್ನರ್‌ ಆಗಿ ನೇಮಕಗೊಂಡ ಮೊದಲ ವ್ಯಕ್ತಿ ಶಕ್ತಿಕಾಂತ ದಾಸ್ ಆಗಿದ್ದಾರೆ. ಈ ಮೊದಲಿದ್ದ ಗವರ್ನರ್​ ಊರ್ಜಿತ್ ಪಟೇಲ್‌ರವರು ಸರ್ಕಾರದೊಂದಿಗಿನ ಭಿನ್ನಾಭಿಪ್ರಾಯದ ಕಾರಣಕ್ಕಾಗಿ ಈ ಹುದ್ದೆಗೆ ರಾಜೀನಾಮೆ ನೀಡಿ ಹೊರಬಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...