ರೆಪೋ ದರ ಶೇ. 5.5 ಕ್ಕೆ ಸ್ಥಿರವಾಗಿರಿಸಿದ ಆರ್‌ಬಿಐ; ಸತತ ಎರಡನೇ ಬಾರಿಯೂ ಯಥಾಸ್ಥಿತಿ

Date:

ಶೇ.5.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಇಂದು ಘೋಷಿಸಿದೆ. ಆದರೆ ಈ ಬಾರಿಯೂ ಆರ್‌ಬಿಐ ರೆಪೋ ದರ ಇಳಿಕೆ ಮಾಡುವುದಾಗಿ ನಿರೀಕ್ಷಿಸಲಾಗಿತ್ತು.

ಈಗಾಗಲೇ ಸಾಲದ ಮೇಲಿನ ಕಡಿತ ಮಾಡಿರುವ ಬಡ್ಡಿ ದರ ಹಾಗೂ ಇತ್ತೀಚೆಗೆ ಕೇಂದ್ರ ಸರ್ಕಾರ ಜಿಎಸ್‌ಟಿ ತೆರಿಗೆ ಕಡಿತಗೊಳಿಸಿರುವುದು, ಜಾಗತಿಕ ವ್ಯಾಪಾರ ಅನಿಶ್ಚಿತತೆಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆರ್‌ಬಿಐ ತಿಳಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತನ್ನ ಮೂರು ದಿನಗಳ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯನ್ನು ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ನೇತೃತ್ವದಲ್ಲಿ ನಡೆದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯ ನಂತರ ಮಾತನಾಡಿದ ಸಂಜಯ್ ಮಲ್ಹೋತ್ರಾ, ಅನುಕೂಲಕರ ಮುಂಗಾರು ಮಳೆ, ಆರೋಗ್ಯಕರ ಬಿತ್ತನೆ, ಉತ್ತಮ ಜಲಾಶಯ ಮಟ್ಟಗಳು ಮತ್ತು ಸಾಕಷ್ಟು ಆಹಾರ ಧಾನ್ಯ ಸಂಗ್ರಹಗಳು ಆಹಾರ ಬೆಲೆಗಳನ್ನು ನಿಯಂತ್ರಣದಲ್ಲಿಡಲಿವೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತೇಲುತ್ತಿರುವ ಉತ್ತರ ಕರ್ನಾಟಕ; ಹಾರಾಡುತ್ತಿರುವ ಅಧಿಕಾರಸ್ಥರು

2025ರ ಮೊದಲ ಆರು ತಿಂಗಳಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ ರೆಪೋ ದರದಲ್ಲಿ ಒಟ್ಟು 100 ಬೇಸಿಸ್‌ ಪಾಯಿಂಟ್ಸ್‌ ಗಳಷ್ಟು ಇಳಿಕೆ ಮಾಡಿತ್ತು. ಆದರೆ ಆಗಸ್ಟ್‌ ತಿಂಗಳಿನ ಆರ್‌ಬಿಐನ ಹಣಕಾಸು ನೀತಿ ಸಮಿತಿ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧಾರ ತೆಗೆದುಕೊಂಡಿತ್ತು.

ಅಮೆರಿಕದಿಂದ ಹೆಚ್ಚಿನ ಸುಂಕ, ರೂಪಾಯಿ ಮೌಲ್ಯ ಕುಸಿತ ಮತ್ತು ಜಾಗತಿಕ ವ್ಯಾಪಾರದ ಅನಿಶ್ಚಿತತೆಗಳಂತಹ ಬಾಹ್ಯ ಅಪಾಯಗಳನ್ನು ಗವರ್ನರ್ ಮಲ್ಹೋತ್ರಾ ಈ ಸಂದರ್ಭದಲ್ಲಿ ಎತ್ತಿ ತೋರಿಸಿದರು. ಈ ಅಂಶಗಳು ರಫ್ತು ಮತ್ತು ಬಂಡವಾಳದ ಹರಿವಿನ ದೃಷ್ಟಿಕೋನಕ್ಕೆ ಅಪಾಯಗಳನ್ನು ತಂದಿವೆ. ಈ ಅಪಾಯಗಳ ಹೊರತಾಗಿಯೂ, ಉತ್ತಮ ದೇಶೀಯ ಬೇಡಿಕೆ, ಉತ್ತಮ ಕೃಷಿ ಮತ್ತು ಸರ್ಕಾರದ ವೆಚ್ಚದಿಂದ ದೇಶದ ಆರ್ಥಿಕತೆಯು ಆಘಾತಗಳನ್ನು ತಡೆದುಕೊಳ್ಳಲು ಸನ್ನದ್ಧವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...