ರಿಪೋದರ 0.25 ಇಳಿಸಿದ ಆರ್‌ಬಿಐ: ಐದು ವರ್ಷಗಳ ಬಳಿಕ ಮೊದಲ ಬಾರಿ ಇಳಿಕೆ

Date:

ಭಾರತೀಯ ರಿಸರ್ವ್ ಬ್ಯಾಂಕ್​ನ(ಆರ್‌ಬಿಐ) ಮಾನಿಟರಿ ಪಾಲಿಸಿ ಕಮಿಟಿ ರಿಪೋದರವನ್ನು ಶೇ. 0.25 ರಷ್ಟು ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ. ಎರಡು ದಿನಗಳಿಂದ ನಡೆಯುತ್ತಿರುವ ಎಂಪಿಸಿ ಸಭೆಯ ಬಳಿಕ ಇಂದು ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

0.25 ಇಳಿಕೆಯಿಂದ ಶೇ. 6.50ರಷ್ಟಿದ್ದ ಬಡ್ಡಿದರ ಶೇ. 6.25ಕ್ಕೆ ಕಡಿತಗೊಳ್ಳುತ್ತದೆ. 2020ರ ಬಳಿಕ ಮೊದಲ ಬಾರಿಗೆ ಆರ್​ಬಿಐನ ರಿಪೋ ದರ ಇಳಿಕೆ ಆಗಿದೆ. ಈ ಬಾರಿ 25 ಮೂಲಾಂಕಗಳಷ್ಟು ಇಳಿಕೆ ಆಗುತ್ತದೆ ಎಂದು ಬಹುತೇಕ ಆರ್ಥಿಕ ತಜ್ಞರು ನಿರೀಕ್ಷಿಸಿದ್ದರು. ಎಂಪಿಸಿಯಲ್ಲಿರುವ ಎಲ್ಲ ಆರು ಸದಸ್ಯರು ಸರ್ವಾನುಮತದಿಂದ 25 ಮೂಲಾಂಕಗಳಷ್ಟು ಬಡ್ಡಿದರ ಇಳಿಸಲು ನಿರ್ಧರಿಸಿದ್ದಾರೆ.

ಹಣದುಬ್ಬರ ನಿಯಂತ್ರಣಕ್ಕೆ ಬರುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಹಣಕಾಸು ನೀತಿ ಸಮಿತಿಯು ರಿಪೋ ದರ ಇಳಿಸುವ ನಿರ್ಧಾರ ತೆಗೆದುಕೊಂಡಿದೆ. ಈ ರಿಪೋ ದರ ಇಳಿಕೆಯಿಂದ ಬ್ಯಾಂಕುಗಳ ಸಾಲದರಗಳು ಕಡಿಮೆಗೊಳ್ಳುವ ಸಾಧ್ಯತೆ ಇದೆ. ಅದಾದಲ್ಲಿ ಸಾಲದ ಇಎಂಐ ಮೊತ್ತ ತುಸು ಕಡಿಮೆ ಆಗಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ರಿಪೋ ದರ?
ರಿಪೋ ಎಂದರೆ ರೀ ಪರ್ಚೇಸಿಂಗ್​ನ ಸಂಕ್ಷಿಪ್ತ ರೂಪ. ಇದು ಆರ್​ಬಿಐನ ಬಡ್ಡಿದರವಾಗಿದೆ. ಕಮರ್ಷಿಯಲ್ ಬ್ಯಾಂಕುಗಳು ಆರ್​ಬಿಐನಿಂದ ಪಡೆಯುವ ಸಾಲಕ್ಕೆ ವಿಧಿಸಲಾಗುವ ಬಡ್ಡಿದರ ಇದಾಗಿದೆ. ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಬಡ್ಡಿದರ ನಿಗದಿ ಮಾಡಲು ಈ ರಿಪೋ ದರ ಆಧಾರವಾಗಿರಬಹುದು.

ರಿವರ್ಸ್ ರಿಪೋ ಎಂದರೆ, ಕಮರ್ಷಿಯಲ್ ಬ್ಯಾಂಕುಗಳು ತಮ್ಮಲ್ಲಿರುವ ಫಂಡ್ ಅನ್ನು ಆರ್​ಬಿಐನಲ್ಲಿ ಇರಿಸಿದರೆ ಸಿಗುವ ಬಡ್ಡಿ. ಇದೂ ಕೂಡ ಬ್ಯಾಂಕುಗಳ ಠೇವಣಿ ದರಗಳಿಗೆ ಆಧಾರವಾಗಬಹುದು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುರಹಂಕಾರಿ ದೊಡ್ಡಣ್ಣನ ಎದುರು ಮಂಡಿಯೂರಿದ ಮೋದಿ

2023ರ ಫೆಬ್ರುವರಿಯಿಂದ, ಅಂದರೆ ಎರಡು ವರ್ಷದಿಂದ ರಿಪೋ ದರ ಶೇ. 6.50ರಲ್ಲೇ ಇತ್ತು. 2020ರ ಮೇ ಬಳಿಕ ಆರ್​ಬಿಐ ತನ್ನ ದರಗಳನ್ನು ಇಳಿಸಿದ್ದೇ ಇಲ್ಲ. ನಾಲ್ಕರಿಂದ ಐದು ವರ್ಷದ ಬಳಿಕ ಆರ್​ಬಿಐ ಮೊದಲ ಬಾರಿಗೆ ರಿಪೋ ದರ ಇಳಿಸಿದಂತಾಗಿದೆ.

ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರಿಗೆ ಇದು ಮೊದಲ ಎಂಪಿಸಿ ಸಭೆ. ಕಳೆದ ತಿಂಗಳಷ್ಟೇ ಅವರು ಆರ್​ಬಿಐನ 26ನೇ ಗವರ್ನರ್ ಆಗಿ ನೇಮಕಗೊಂಡಿದ್ದರು. ಆರ್​ಬಿಐನ ಎಂಪಿಸಿಯಲ್ಲಿ ಆರು ಸದಸ್ಯರಿದ್ದಾರೆ. ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಈ ಸಮಿತಿಯ ಮುಖ್ಯಸ್ಥರು. ಈ ಸಮಿತಿಯಲ್ಲಿ ಗವರ್ನರ್ ಅವರನ್ನೂ ಸೇರಿ ಮೂವರು ಸದಸ್ಯರು ಆರ್​ಬಿಐನ ಅಧಿಕಾರಿಗಳೇ ಆಗಿದ್ದಾರೆ. ಇನ್ನುಳಿದ ಮೂವರು ಸ್ವತಂತ್ರ ಸದಸ್ಯರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...