ವಿಪಕ್ಷ ನಾಯಕರ ಫೋನ್ ಹ್ಯಾಕಿಂಗ್ ಯತ್ನ; ಸರ್ಕಾರದ ವಿರುದ್ಧ ‘ಇಂಡಿಯಾ’ ನಾಯಕರ ವಾಗ್ದಾಳಿ

Date:

ಸರ್ಕಾರಿ ಪ್ರಾಯೋಜಿತ ಹ್ಯಾಕರ್‌ಗಳು ತಮ್ಮ ಫೋನ್‌ಗಳನ್ನು ಹ್ಯಾಕ್‌ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ವಿಪಕ್ಷಗಳ ಒಕ್ಕೂಟ ಇಂಡಿಯಾ ನಾಯಕರು ಆರೋಪಿಸಿದ್ದಾರೆ.

ಕಾಂಗ್ರೆಸ್ ಸಂಸದರಾದ ಶಶಿ ತರೂರ್‌, ಪವನ್‌ ಖೇರಾ, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ, ಶಿವಸೇನಾ (ಯುಬಿಟಿ) ಬಣದ ನಾಯಕಿ ಪ್ರಿಯಾಂಕಾ ಚತುರ್ವೇದಿ, ಎಎಪಿ ರಾಜ್ಯಸಭೆ ಸದಸ್ಯ ರಾಘವ್ ಛೆಡ್ಡಾ ಸೇರಿದಂತೆ ಇಂಡಿಯಾ ಒಕ್ಕೂಟದ ಹಲವಾರು ವಿರೋಧ ಪಕ್ಷದ ನಾಯಕರು ತಮ್ಮ ಆ್ಯಪಲ್ ಫೋನ್‌ಗಳಿಗೆ ರಾಜ್ಯ ಪ್ರಾಯೋಜಿತ ಸೈಬರ್‌ ದಾಳಿಕೋರರು ನಿಮ್ಮ ಮೊಬೈಲ್‌ ಫೋನ್‌ಅನ್ನು ದಾಳಿ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಸಂದೇಶಗಳನ್ನು ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್‌, ನನ್ನ ಆಪಲ್‌ ಫೋನ್‌ನಿಂದ ಸಂದೇಶ ಸ್ವೀಕರಿಸಲಾಗಿದೆ. ಹ್ಯಾಕ್‌ ಮಾಡುವ ಉದ್ದೇಶ ದೃಢಪಟ್ಟಿದೆ. ನನ್ನಂತಹ ತೆರಿಗೆದಾರರ ವೆಚ್ಚದಲ್ಲಿ ನಿರುದ್ಯೋಗಿ ಅಧಿಕಾರಿಗಳನ್ನು ಕಾರ್ಯನಿರತವಾಗಿರಿಸಲು ಸಂತೋಷವಾಗಿದೆ! ಮಾಡಲು ಹೆಚ್ಚು ಮುಖ್ಯವಾದುದೇನೂ ಇಲ್ಲವೇ? ಎಂದು ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಾಟ್ಸಾಪ್‌ನಲ್ಲಿ ಹೊಸ ಫೀಚರ್ ಪ್ರಕಟ: ಏಕ ಕಾಲದಲ್ಲಿ ಎರಡು ಮೊಬೈಲ್ ನಂಬರ್ ಅಕೌಂಟ್ ಬಳಸುವ ಆಯ್ಕೆ

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, “ನನ್ನ ಫೋನ್ ಮತ್ತು ಇಮೇಲ್‌ಗೆ ಸರ್ಕಾರವು ಹ್ಯಾಕ್ ಮಾಡಲು ಪ್ರಯತ್ನಿಸುತ್ತಿದೆ ಎಂದು ಆಪಲ್‌ನಿಂದ ಸಂದೇಶ ಮತ್ತು ಇಮೇಲ್ ಸ್ವೀಕರಿಸಿದ್ದೇನೆ. ಬೆದರಿಕೆಯೊಡ್ಡುವ ಅದಾನಿ ಹಾಗೂ ಪಿಎಂಒ ಅವರೆ ನಿಮ್ಮ ಭಯವು ನನಗೆ ನಿಮ್ಮ ಮೇಲೆ ಕರುಣೆಯುಂಟುಮಾಡುತ್ತದೆ” ಎಂದು ಕೇಂದ್ರ ಗೃಹ ಸಚಿವಾಯಕ್ಕೆ ಟ್ಯಾಗ್‌ ಮಾಡಿದ್ದಾರೆ.

ರಾಜ್ಯಸಭೆ ಸದಸ್ಯೆ, ಪ್ರಿಯಾಂಕಾ ಚತುರ್ವೇದಿ ಸಹ ಎಚ್ಚರಿಕೆ ಸಂದೇಶಗಳ ಸ್ಕ್ರೀನ್ ಶಾಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಕಳೆದ ರಾತ್ರಿ ನಾನು ಎಚ್ಚರಿಕೆ ಸ್ವೀಕರಿಸಿದ್ದೇನೆ. ಇದು ಕೇಂದ್ರ ಸರ್ಕಾರದ ಪ್ರಾಯೋಜಿತ ಕಾರ್ಯವಾಗಿದೆ. ನಾನು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಾಗಿದೆ ಎಂದು ತೋರಿಸುತ್ತದೆ, ಈ ದಾಳಿಗಳು ರಾಜ್ಯ ಪ್ರಾಯೋಜಿತ ಎಂದು ಎಚ್ಚರಿಕೆ ಸ್ಪಷ್ಟವಾಗಿ ಹೇಳುತ್ತದೆ. ವಿರೋಧ ಪಕ್ಷದ ನಾಯಕರಿಗೆ ಮಾತ್ರ ಇಂತಹ ಸಂದೇಶಗಳು ಏಕೆ ಬರುತ್ತಿವೆ? ನಮ್ಮ ಮೇಲೆ ದೊಡ್ಡ ಮಟ್ಟದ ಕಣ್ಗಾವಲು ನಡೆಯುತ್ತಿದೆ ಎಂಬುದನ್ನು ಇದು ತೋರಿಸುತ್ತದೆ. ಈ ಬಗ್ಗೆ ತನಿಖೆ ನಡೆಸಬೇಕು ಹಾಗೂ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸಂದೇಶದಲ್ಲಿರುವುದೇನು?

‘ರಾಜ್ಯ ಪ್ರಾಯೋಜಿತ ದಾಳಿಕೋರರು ನಿಮ್ಮ ಐಫೋನ್‌ಅನ್ನು ಗುರಿಯಾಗಿಸಬಹುದು’ ಎಂದು ಎಚ್ಚರಿಕೆ ನೀಡಲಾಗಿದೆ. ನಿಮ್ಮ ಆ್ಯಪಲ್ ಐಡಿಯೊಂದಿಗೆ ಸಂಯೋಜಿತವಾಗಿರುವ ಐಫೋನ್‌ಅನ್ನು ದೂರದಿಂದಲೇ ರಾಜಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವ ರಾಜ್ಯ ಪ್ರಾಯೋಜಿತ ದಾಳಿಕೋರರಿಂದ ನೀವು ಗುರಿಯಾಗಿದ್ದೀರಿ ಎಂದು ಆ್ಯಪಲ್ ಭಾವಿಸುತ್ತದೆ. ನೀವು ಯಾರು ಅಥವಾ ನೀವು ಏನು ಮಾಡುತ್ತಿದ್ದೀರಿ ಎಂಬ ಕಾರಣದಿಂದ ಈ ದಾಳಿಕೋರರು ನಿಮ್ಮನ್ನು ವೈಯಕ್ತಿಕವಾಗಿ ಗುರಿಪಡಿಸುತ್ತಿರಬಹುದು. ನಿಮ್ಮ ಸಾಧನವು ರಾಜ್ಯ ಪ್ರಾಯೋಜಿತ ದಾಳಿಕೋರರಿಂದ ರಾಜಿ ಮಾಡಿಕೊಂಡರೆ, ಅವರು ನಮ್ಮ ಸೂಕ್ಷ್ಮ ಡೇಟಾ, ಸಂವಹನಗಳು ಅಥವಾ ಕ್ಯಾಮರಾ ಮತ್ತು ಮೈಕ್ರೋಫೋನ್‌ ಅನ್ನು ದೂರದಿಂದಲೇ ಪ್ರವೇಶಿಸಲು ಸಾಧ್ಯವಾಗುತ್ತದೆ. ಇದು ತಪ್ಪು ಎಚ್ಚರಿಕೆ ಆಗಿರುವ ಸಾಧ್ಯತೆಯಿದ್ದರೂ, ದಯವಿಟ್ಟು ಈ ಎಚ್ಚರಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳಿ” ಎಂದು ಸಂದೇಶದಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...