‘ಹೆಲ್ತ್ ಡ್ರಿಂಕ್ಸ್‌’ ಪಟ್ಟಿಯಿಂದ ಬೋರ್ನ್‌ವಿಟಾ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಆದೇಶ

Date:

ಮಹತ್ವದ ಬೆಳವಣಿಗೆಯೊಂದರಲ್ಲಿ ಮಕ್ಕಳ ಪೇಯವಾಗಿ ಗುರುತಿಸಿಕೊಂಡಿದ್ದ ಕ್ಯಾಡ್‌ಬರಿ ಕಂಪನಿಯ ಬೋರ್ನ್‌ವಿಟಾ (Bourn Vita)ವನ್ನು ‘ಹೆಲ್ತ್ ಡ್ರಿಂಕ್ಸ್‌’ ಪಟ್ಟಿಯಿಂದ ತೆಗೆದು ಹಾಕುವಂತೆ ಆದೇಶ ಹೊರಡಿಸಿದೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಈ ಸೂಚನೆ ನೀಡಿದ್ದು, ಅವರ ಪೋರ್ಟಲ್ ಮತ್ತು ಪ್ಲಾಟ್‌ಫಾರ್ಮ್‌ಗಳಲ್ಲಿ ಬೋರ್ನ್‌ವಿಟಾ ಸೇರಿದಂತೆ ಎಲ್ಲಾ ಪಾನೀಯಗಳನ್ನು ‘ಹೆಲ್ತ್ ಡ್ರಿಂಕ್ಸ್’ ವರ್ಗದಿಂದ ತೆಗೆದು ಹಾಕುವಂತೆ ನಿರ್ದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎನ್‌ಸಿಪಿಸಿಆರ್‌ನ ತನಿಖೆಯಲ್ಲಿ ಬೋರ್ನ್‌ವಿಟಾದಲ್ಲಿ ನಿಯಮಗಳಿಗಿಂತ ಹೆಚ್ಚು ಸಕ್ಕರೆ ಮಟ್ಟವನ್ನು ಹೊಂದಿದೆ. ಇದು ಸ್ವೀಕಾರಾರ್ಹ ಮಿತಿಗಳಿಗಿಂತ ಹೆಚ್ಚು ಎಂದು ಕಂಡುಹಿಡಿದಿದೆ. ಈ ಹಿಂದೆ, ಸುರಕ್ಷತಾ ಮಾನದಂಡಗಳು ಮತ್ತು ಮಾರ್ಗಸೂಚಿಗಳನ್ನು ಪೂರೈಸಲು ವಿಫಲವಾದ ಮತ್ತು ಪವರ್ ಸಪ್ಲಿಮೆಂಟ್‌ಗಳನ್ನು ‘ಆರೋಗ್ಯ ಪಾನೀಯಗಳು’ ಎಂದು ಬಿಂಬಿಸುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲು ‘ನ್ಯಾಷನಲ್ ಕಮಿಷನ್ ಫಾರ್ ಪ್ರೊಟೆಕ್ಷನ್ ಆಫ್ ಚೈಲ್ಡ್ ರೈಟ್ಸ್’ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI)ಗೆ ಸೂಚಿಸಿತ್ತು.

ಡೈರಿ ಆಧಾರಿತ ಅಥವಾ ಮಾಲ್ಟ್ ಆಧಾರಿತ ಪಾನೀಯಗಳನ್ನು ‘ಆರೋಗ್ಯ ಪಾನೀಯಗಳು’ ಎಂದು ಲೇಬಲ್ ಮಾಡುವುದರ ವಿರುದ್ಧ ಇ-ಕಾಮರ್ಸ್ ಪೋರ್ಟಲ್‌ಗಳಿಗೆ ಸೂಚನೆ ನೀಡಿತ್ತು.

ಯೂಟ್ಯೂಬರ್ ಒಬ್ಬ ತನ್ನ ವೀಡಿಯೊದಲ್ಲಿ ಪೌಡರ್ ಸಪ್ಲಿಮೆಂಟ್ ಕುರಿತು ವಿಡಿಯೋ ಮಾಡಿದಾಗ ಬೋರ್ನ್‌ವಿಟಾದ ‘ಅನಾರೋಗ್ಯಕರ’ ಸ್ವಭಾವದ ಬಗ್ಗೆ ವಿವಾದವು ಮೊದಲು ಹುಟ್ಟಿಕೊಂಡಿತ್ತು. ಆತ ತಾನು ನಡೆಸಿದ ಲ್ಯಾಬ್‌ ಟೆಸ್ಟ್‌ನಲ್ಲಿ ಬೋರ್ನ್ ವಿಟಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಕ್ಕರೆ ಅಂಶ ಇದೆ ಎಂದು ತಿಳಿಸಿದ್ದ. ಅಲ್ಲದೆ, ಅದರಲ್ಲಿರುವ ಅತಿಯಾದ ಸಕ್ಕರೆ, ಕೋಕೋ ಮತ್ತು ಹಾನಿಕಾರಕ ಕೃತಕ ಬಣ್ಣಗಳು ಕ್ಯಾನ್ಸರ್ ಸೇರಿದಂತೆ ಮಕ್ಕಳಲ್ಲಿ ಗಂಭೀರವಾದ ಆರೋಗ್ಯದ ಅಪಾಯಗಳಿಗೆ ಕಾರಣವಾಗಬಹುದು ಎಂದು ಆರೋಪಿಸಿದ್ದನು.

ಇದನ್ನು ಓದಿದ್ದೀರಾ? ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವಕ್ಕಿಂತ, ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ: ಡಿ ಕೆ ಶಿವಕುಮಾರ್

ಈ ವಿಡಿಯೋ ವ್ಯಾಪಕ ವೈರಲ್ ಆಗಿ ಸಂಸ್ಥೆಯ ವಿರುದ್ಧ ತನಿಖೆ ನಡೆಸುವಂತೆ ಒತ್ತಾಯ ಹೆಚ್ಚಾಗಿತ್ತು. ಇದೀಗ ಬೌರ್ನ್‌ವಿಟಾ ಪೇಯವನ್ನು ‘ಆರೋಗ್ಯ ಪಾನೀಯ’ ಪಟ್ಟಿಯಿಂದ ಕೈ ಬಿಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...