ರಾಜಸ್ಥಾನ | 8 ವರ್ಷದ ಬಾಲಕಿ ಮೇಲೆ ಅತ್ಯಾಚಾರದ ವಿರುದ್ಧ ಆಕ್ರೋಶ: ಬಸ್‌, ಪೊಲೀಸ್‌ ವಾಹನಗಳು ಧ್ವಂಸ

Date:

ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ನಡೆದಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಮಾಯಿಸಿದ ಗ್ರಾಮಸ್ಥರು ಬಸ್‌ಗಳು ಮತ್ತು ಪೊಲೀಸ್ ಮತ್ತು ಜಿಲ್ಲಾಡಳಿತದ ಹಲವು ವಾಹನಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಪ್ರದೇಶದಲ್ಲಿ ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ, ಮೂರು ಪೊಲೀಸ್ ಠಾಣೆಗಳ ಸಿಬ್ಬಂದಿಯನ್ನು ಅಲ್ಲಿಗೆ ಕರೆಸಿ ಪರಿಸ್ಥಿತಿ ನಿಯಂತ್ರಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಗರ್ಭಿಣಿ ಮೇಲೆ ಅತ್ಯಾಚಾರ – ಹತ್ಯೆ; ಉದ್ವಿಗ್ನಗೊಂಡ ಗ್ರಾಮ ತೊರೆದ ಪುರುಷರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ, “ಭಾನುವಾರ ಸಂಜೆ ಸುಮಾರು 7.30ರ ಸುಮಾರಿಗೆ ಬಾಲಕಿ ಹೊಲಕ್ಕೆ ಹೋಗಿದ್ದಳು. ನಂತರ ಆರೋಪಿ ಬಾಲಕಿಯನ್ನು ಬಲವಂತವಾಗಿ ಹತ್ತಿರದ ಪೊದೆಗೆ ಕರೆದೊಯ್ದು ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ” ಎಂದು ತಿಳಿಸಿದ್ದಾರೆ.

“ಬಾಲಕಿ ಮನೆಗೆ ಹಿಂತಿರುಗಿ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ನಂತರ ಕುಟುಂಬಸ್ಥರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಆರೋಪಿಯನ್ನು ರಾಮ್‌ಲಾಲ್ ಎಂದು ಗುರುತಿಸಲಾಗಿದ್ದು, ಆರಂಭದಲ್ಲಿ ಪರಾರಿಯಾಗಿದ್ದನು. ಬಳಿಕ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆತನನ್ನು ಸೋಮವಾರ ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಈ ಅತ್ಯಾಚಾರ ಘಟನೆ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿದ್ದು, ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ನೆರೆದಿದ್ದ ಗ್ರಾಮಸ್ಥರೊಂದಿಗೆ ಶಾಂತಿಯುತ ಚರ್ಚೆ ನಡೆಯುತ್ತಿದ್ದಾಗ, ಚಿಕಿತ್ಸೆ ವೇಳೆ ಬಾಲಕಿ ಮೃತಪಟ್ಟಿದ್ದಾಳೆ ಎಂಬ ವದಂತಿ ಹರಡಿದೆ. ಈ ವೇಳೆ ಆಕ್ರೋಶಗೊಂಡ ಗ್ರಾಮಸ್ಥರು ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದರು. ಸುಮಾರು 10 ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದರು. ಬಸ್‌ಗಳನ್ನು ಧ್ವಂಸಗೊಳಿಸಲು ಪ್ರಾರಂಭಿಸಿತು. ರಸ್ತೆ ತಡೆ ನಡೆಸಿದರು ಎಂದು ವರದಿಯಾಗಿದೆ.

ಸಮೀಪದ ಇತರ ಪೊಲೀಸ್ ಠಾಣೆಗಳಿಂದ ಹೆಚ್ಚುವರಿ ಪೊಲೀಸ್ ಪಡೆಗಳನ್ನು ಪ್ರದೇಶದಲ್ಲಿ ನಿಯೋಜಿಸಲಾಗಿದೆ. ಈ ಘಟನೆ ಸಂಬಂಧ ಪೊಲೀಸರು 38 ಮಂದಿಯನ್ನು ಬಂಧಿಸಿದ್ದಾರೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...