ಮಣಿಪುರದಲ್ಲಿ ಇಂಟರ್‌ನೆಟ್‌ ಪುನರಾರಂಭ: ಸಿಎಂ ಬಿರೇನ್ ಸಿಂಗ್

Date:

ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಸ್ಫೋಟಗೊಂಡ ನಂತರ ಸ್ಥಗಿತಗೊಂಡಿದ್ದ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಶನಿವಾರದಿಂದ ಮತ್ತೆ ಆರಂಭಿಸುವುದಾಗಿ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ನಕಲಿ ಸುದ್ದಿ, ಪ್ರಚಾರ ಮತ್ತು ದ್ವೇಷ ಭಾಷಣಗಳ ಹರಡುವಿಕೆಯನ್ನು ತಡೆಯಲು ಮೇ 3ರಂದು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಪರಿಸ್ಥಿತಿ ಸುಧಾರಣೆಯಾಗಿದೆ. ಹೀಗಾಗಿ, ಇಂದಿನಿಂದಲೇ (ಶನಿವಾರ) ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಪುನಃಸ್ಥಾಪಿಸಲಾಗುತ್ತದೆ” ಎಂದು ಹೇಳಿದ್ದಾರೆ.

“ಭಾರತ-ಮ್ಯಾನ್ಮಾರ್‌ ಗಡಿಯಲ್ಲಿ ಅಕ್ರಮ ವಲಸಿಗರ ನುಸುಳುವಿಕೆಯನ್ನು ತಡೆಯಲು ಸರ್ಕಾರವು ಪ್ರಯತ್ನವನ್ನು ಮುಂದುವರೆಸುತ್ತದೆ. ಗಡಿಗೆ ಸಂಪೂರ್ಣ ಬೇಲಿ ಹಾಕುವ ಅಗತ್ಯವಿದೆ. ಮಣಿಪುರದ ಅಂತಾರಾಷ್ಟ್ರೀಯ ಗಡಿಯ 60 ಕಿ.ಮೀ.ಗೆ ಬೇಲಿ ಹಾಕಲು ಕೇಂದ್ರ ಗೃಹ ಸಚಿವಾಲಯ ಕ್ರಮ ಕೈಗೊಂಡಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ರಾಜ್ಯದಲ್ಲಿನ ನೈಜ ಸಮಸ್ಯೆಗಳತ್ತ ಗಮನಹರಿಸಬೇಕು. ಅಕ್ರಮ ವಲಸಿಗರ ಒಳಹರಿವು, ಆಂತರಿಕವಾಗಿ ಸ್ಥಳಾಂತರಗೊಂಡ ಜನರ ಕಲ್ಯಾಣಕ್ಕಾಗಿ ಕ್ರಮಗಳನ್ನು ತೆಗೆದುಕೊಳ್ಳುವುದು ಹಾಗೂ ಬೃಹತ್ ಗಸಗಸೆ ಕೃಷಿಯ ವಿರುದ್ಧ ಹೋರಾಡುವುದು ನಮ್ಮ ಆಧ್ಯತೆ” ಎಂದು ಅವರು ಹೇಳಿದರು.

ಮಣಿಪುರ ಬಹುಸಂಖ್ಯಾತ ಮತ್ತು ಪ್ರಬಲ ಮೈತೇಯಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡಬಹುದು ಎಂದು ಅಲ್ಲಿನ ಹೈಕೋರ್ಟ್‌ ಹೇಳಿದ ಬಳಿಕ ಬುಡಕಟ್ಟು ಕುಕಿ ಸಮುದಾಯ ಪ್ರತಿಭಟನೆ ಆರಂಭಿಸಿತ್ತು. ಆದರೆ, ಪ್ರತಿಭಟನೆ ಸಮಯದಲ್ಲಿ ನಡೆದ ದಾಳಿಯಿಂದಾಗಿ ಹಿಂಸಾಚಾರ ಆರಂಭವಾಗಿತ್ತು. ಇಬ್ಬರು ಕುಕಿ ಸಮುದಾಯದ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಅವರ ಮೇಲಿನ ಸಾಮೂಹಿಕ ಅತ್ಯಾಚಾರದ ದುರ್ಘಟನೆಯು ದೇಶದ ಮನಕಲಕಿತ್ತು. ಮಣಿಪುರದಲ್ಲಿ ಶಾಂತಿ ನೆಲೆಸುವಂತೆ ಮಾಡಲು ದೇಶಾದ್ಯಂತ ಹೋರಾಟಗಳು ನಡೆದಿದ್ದವು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...