ನಾನು ಹಿಂದೆಯೂ, ಈಗಲೂ ಆರ್‌ಎಸ್‌ಎಸ್‌ ಸದಸ್ಯ: ನಿವೃತ್ತ ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ

Date:

ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಚಿತ್ತ ರಂಜನ್‌ ದಶ್ ಮಂಗಳವಾರ(ಮೇ.20) ನಿವೃತ್ತರಾದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಷ್ಟ್ರೀಯ ಸ್ವಯಂ ಸೇವಾ ಸಂಘ(ಆರ್‌ಎಸ್‌ಎಸ್‌) ನನ್ನ ವ್ಯಕ್ತಿತ್ವ ಬದಲಾಗಲು ಹಾಗೂ ದೇಶಭಕ್ತಿಯ ಬಗ್ಗೆ ದೈರ್ಯ ತುಂಬಲು ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ.

ಬೀಳ್ಗೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು,” ನಾನು ಚಿಕ್ಕಂದಿನಿಂದಲೂ ಆರ್‌ಎಸ್‌ಎಸ್‌ ಜೊತೆ ನಂಟು ಹೊಂದಿದ್ದೇನೆ. ನಾನು ನನ್ನ ನಿಜ ಸ್ವರೂಪವನ್ನು ಬಿಚ್ಚಿಡಬೇಕು.ನಾನು ಒಂದು ಸಂಸ್ಥೆಗೆ ಹೆಚ್ಚು ಚಿರಋಣಿಯಾಗಿದ್ದೇನೆ. ನಾನು ಚಿಕ್ಕಂದಿನಿಂದ ಯುವಕನಾಗುವವರೆಗೂ ಆರ್‌ಎಸ್‌ಎಸ್‌ನಲ್ಲಿದ್ದೆ. ನಾನು ಅಲ್ಲಿಂದ ಧೈರ್ಯ, ಪ್ರಾಮಾಣಿಕತೆ, ಪರರ ಬಗ್ಗೆ ಸಮಾನ ಭಾವನೆಗಳು ಹಾಗೂ ದೇಶಭಕ್ತಿಯ ಭಾವನೆ, ಎಲ್ಲಿ ಕೆಲಸ ಮಾಡಿದರೂ ಭದ್ಧತೆಯಿಂದಿರುವುದನ್ನು ಕಲಿತ್ತಿದ್ದೇನೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ಆಟ, ಹುಚ್ಚಾಟ, ಜೂಜಾಟ ಮತ್ತು ಧೋನಿಯ ದುಗುಡ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಆರ್‌ಎಸ್‌ಎಸ್‌ನಲ್ಲಿ ಆಗಲು ಇದ್ದೆ, ಈಗಲೂ ಇದ್ದೇನೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ನ್ಯಾಯಾಧೀಶರಾದ ಬಳಿಕ ಕೆಲಸದ ನಿಮಿತ್ತ ಕಳೆದ 37 ವರ್ಷಗಳಿಂದ ನಾನು ಆರ್‌ಎಸ್‌ಎಸ್‌ನಿಂದ ಅಂತರವನ್ನು ಕಾಯ್ದುಕೊಂಡಿದ್ದೆ. ನನ್ನ ವೃತ್ತಿ ಜೀವನದ ಏಳಿಕೆಯಲ್ಲಿ ಆರ್‌ಎಸ್‌ಎಸ್‌ ಸದಸ್ಯತ್ವವನ್ನು ಬಳಸಿಕೊಳ್ಳಲಿಲ್ಲ. ಏಕೆಂದರೆ ಅದು ನನ್ನ ತತ್ವಗಳಿಗೆ ವಿರುದ್ಧವಾಗಿತ್ತು” ಎಂದು ಹೇಳಿದರು.

“ತೀರ್ಪು ನೀಡುವಾಗ ನಾನು ಪಕ್ಷತೀತವಾಗಿ ಕಾರ್ಯನಿರ್ವಹಿಸಿದ್ದೇನೆ. ಬಿಜೆಪಿ, ಕಾಂಗ್ರೆಸ್, ಕಮ್ಯೂನಿಸ್ಟ್ ಹಾಗೂ ಟಿಎಂಸಿ ಯಾರೆ ಇರಲಿ ಎಲ್ಲರಿಗೂ ಸಮಾನವಾಗಿ ಪರಿಗಣಿಸಿದ್ದೇನೆ. ನಾನು ಯಾರ ವಿರುದ್ಧವಾಗಿ ಇರಲಿಲ್ಲ.ನನಗೆ ಎಲ್ಲರೂ ಸಮಾನರು. ನಾನು ನ್ಯಾಯ ನೀಡುವಾಗ ಎರಡು ತತ್ವಗಳನ್ನು ಅನುಸರಿಸುತ್ತಿದ್ದೆ. ಮೊದಲನೆಯದು ಸಹಾನುಭೂತಿ, ಎರಡನೆಯದು ನ್ಯಾಯಕ್ಕಾಗಿ ಕಾನೂನನ್ನು ಬಗ್ಗಿಸಬಹುದು ಆದರೆ ಕಾನೂನಿಗಾಗಿ ನ್ಯಾಯವನ್ನು ಬಗ್ಗಿಸಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ಒಡಿಶಾ ಮೂಲದವರಾದ ದಶ್ ಒಡಿಶಾ ಹಾಗೂ ಕಲ್ಕತ್ತಾ ಹೈಕೋರ್ಟ್‌ಗಳಲ್ಲಿ ನ್ಯಾಯಧೀಶರಾಗಿ ಕಾರ್ಯನಿರ್ವಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...