ಪರಿಷ್ಕೃತ ನೀಟ್-ಯುಜಿ ಫಲಿತಾಂಶ ಪ್ರಕಟ: ಟಾಪರ್‌ಗಳ ಸಂಖ್ಯೆ 61ರಿಂದ 17ಕ್ಕೆ ಇಳಿಕೆ

Date:

ಸುಪ್ರೀಂ ಕೋರ್ಟ್ ನಿರ್ದೇಶನದ ನಂತರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಶುಕ್ರವಾರ ಪರಿಷ್ಕೃತ ನೀಟ್-ಯುಜಿ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಪರಿಷ್ಕೃತ ಫಲಿತಾಂಶದಲ್ಲಿ ಟಾಪರ್‌ಗಳ ಸಂಖ್ಯೆಯು 61ರಿಂದ 17ಕ್ಕೆ ಇಳಿಕೆಯಾಗಿದೆ.

ಆರಂಭದಲ್ಲಿ ಟಾಪರ್‌ಗಳೆಂದು ಘೋಷಿಸಲ್ಪಟ್ಟ 67 ಅಭ್ಯರ್ಥಿಗಳಲ್ಲಿ ಒಟ್ಟಾಗಿ 44 ಅಭ್ಯರ್ಥಿಗಳು ಸಂಪೂರ್ಣ ಅಂಕವನ್ನು ಪಡೆದಿದ್ದರು. ನಿರ್ದಿಷ್ಟ ಭೌತಶಾಸ್ತ್ರ ವಿಷಯಕ್ಕೆ ಗ್ರೇಸ್ ಅಂಕ ನೀಡಿದ್ದರಿಂದ ಪೂರ್ಣ ಅಂಕಗಳನ್ನು ಈ ಅಭ್ಯರ್ಥಿಗಳು ಗಳಿಸಿದ್ದರು.

ಬಳಿಕ ಕೆಲವು ಕೇಂದ್ರಗಳಲ್ಲಿ ಸಮಯ ವ್ಯರ್ಥವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್‌ ಅಂಕಗಳನ್ನು ಹಿಂಪಡೆಯಲಾಗಿದ್ದು, ಟಾಪರ್‌ಗಳ ಸಂಖ್ಯೆಯು 67ರಿಂದ 61ಕ್ಕೆ ಇಳಿಕೆಯಾಗಿತ್ತು. ಇದೀಗ ಪರಿಷ್ಕೃತ ನೀಟ್-ಯುಜಿ ಫಲಿತಾಂಶ ಪ್ರಕಟವಾದ ಬಳಿಕ ಟಾಪರ್‌ಗಳ ಸಂಖ್ಯೆ 61ರಿಂದ 17ಕ್ಕೆ ಇಳಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ನೀಟ್-ಯುಜಿ ಅಂತಿಮ ಫಲಿತಾಂಶ ಎರಡು ದಿನಗಳಲ್ಲಿ ಪ್ರಕಟ: ಧರ್ಮೇಂದ್ರ ಪ್ರಧಾನ್

ಫಲಿತಾಂಶದ ಪ್ರಕಾರ ಟಾಪ್ ಸ್ಕೋರರ್‌ಗಳು 99.9992714 ಪ್ರತಿಶತದೊಂದಿಗೆ ಪರಿಪೂರ್ಣ 720 ಅಂಕಗಳನ್ನು ಸಾಧಿಸಿದ್ದಾರೆ. ಪ್ರತಿ ಪ್ರಶ್ನೆಗೆ ಒಂದೇ ಒಂದು ನಿಖರವಾದ ಉತ್ತರವನ್ನು ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನಿಂದಾಗಿ ಪರಿಷ್ಕೃತ ಫಲಿತಾಂಶದಲ್ಲಿ ಬದಲಾವಣೆ ಕಂಡುಬಂದಿದೆ.

ಇದರ ಪರಿಣಾಮವಾಗಿ ಈ ಹಿಂದೆ 720ಕ್ಕೆ 715 ಅಂಕ ಪಡೆದಿದ್ದ 44 ವಿದ್ಯಾರ್ಥಿಗಳು 720 ಅಂಕ ಪಡೆದವರ ಮತ್ತು 720ಕ್ಕೆ 716 ಅಂಕ ಪಡೆದ 70 ವಿದ್ಯಾರ್ಥಿಗಳ ನಂತರದ ಸ್ಥಾನವನ್ನು ಪಡೆದಿದ್ದಾರೆ.

ಮೇ 5ರಂದು ನಡೆಸಿದ ನೀಟ್‌-ಯುಜಿ ಪರೀಕ್ಷೆಯು 14 ಅಂತರಾಷ್ಟ್ರೀಯ ಸ್ಥಳಗಳನ್ನು ಒಳಗೊಂಡಂತೆ 571 ನಗರಗಳಲ್ಲಿ 4,750 ಕೇಂದ್ರಗಳಲ್ಲಿ ನಡೆಸಲಾಗಿದೆ. ಆದರೆ ಪರೀಕ್ಷೆಯ ವೇಳೆ ಸಮಯದ ನಿರ್ಬಂಧ ಎದುರಿಸಿದ 1,563 ಅಭ್ಯರ್ಥಿಗಳಿಗೆ ಜೂನ್ 23ರಂದು ಮರು-ಪರೀಕ್ಷೆ ಮಾಡಲಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...