ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

Date:

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.

ತ್ರಿಪಾಠಿ ಅವರು ಪ್ರಸ್ತುತ ವೈಸ್ ಅಡ್ಮಿರಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಾಲಿ ನೌಖಾಪಡೆಯ ಮುಖ್ಯಸ್ಥರಾಗಿರುವ ಅಡ್ಮರಲ್ ಆರ್ ಹರಿ ಕುಮಾರ್ ಅವರು ಏ.30 ರಂದು ನಿವೃತ್ತಿಯಾಗಲಿದ್ದು, ಅದೇ ದಿನದಂದು ಡಿ ಕೆ ತ್ರಿಪಾಠಿ ಅಧಿಕಾರ ಸ್ವೀಕರಿಸಲಿದ್ದಾರೆ.

ಮೇ 15, 1964 ರಂದು ಜನಿಸಿದ ತ್ರಿಪಾಠಿ, ಖಡಕ್ವಾಸ್ಲಾದ ಸೈನಿಕ್ ಶಾಲೆಯಲ್ಲಿ ಮತ್ತು ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಶಿಕ್ಷಣ ಪಡೆದುಕೊಂಡರು. 1985 ರಲ್ಲಿ ಭಾರತೀಯ ನೌಕಾಪಡೆ ಸೇರ್ಪಡೆಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ವಿಷಯವಾದ ’ಸಂವಿಧಾನ’ ಮತ್ತು ಮೋದಿ ಮಾತಿನ ಬೂಟಾಟಿಕೆ

ತ್ರಿಪಾಠಿ ಅವರು ಆರಂಭದಲ್ಲಿ ನೌಕಾಪಡೆಯ ಮುಂಚೂಣಿ ಯುದ್ಧ ನೌಕೆಗಳಲ್ಲಿ ಸಿಗ್ನಲ್ ಸಂವಹನ ಅಧಿಕಾರಿ ಮತ್ತು ಎಲೆಕ್ಟ್ರಾನಿಕ್ ವಾರ್‌ಫೇರ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು. ನಂತರ ಕ್ಷಿಪಣಿ ವಿಧ್ವಂಸಕ ಐಎನ್‌ಎಸ್ ಮುಂಬೈನ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪ್ರಧಾನ ಯುದ್ಧ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು.

ಸುಮಾರು 39 ವರ್ಷಗಳ ಕಾಲ ಅವರ ಸುದೀರ್ಘ ಸೇವೆಯಲ್ಲಿ, ಮುಂಬೈನ ವೆಸ್ಟರ್ನ್ ಫ್ಲೀಟ್‌ನ ಫ್ಲೀಟ್ ಕಾರ್ಯನಿರ್ವಹಣೆಯ ಅಧಿಕಾರಿ, ನೌಕಾ ಕಾರ್ಯಾಚರಣೆಗಳ ನಿರ್ದೇಶಕ, ಪ್ರಧಾನ ನಿರ್ದೇಶಕ ನೆಟ್ವರ್ಕ್ ಸೆಂಟ್ರಿಕ್ ಕಾರ್ಯಾಚರಣೆಗಳು ಮತ್ತು ನೌಕಾ ಯೋಜನೆಗಳ ಪ್ರಧಾನ ನಿರ್ದೇಶಕ ಸೇರಿದಂತೆ ವಿವಿಧ ಪ್ರಮುಖ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ.

ತ್ರಿಪಾಠಿ ಅವರ ಸೇವೆಗೆ ಕೇಂದ್ರ ಸರ್ಕಾರವು ಪರಮ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ ಮತ್ತು ನವೋ ಸೇನಾ ಪದಕಗಳನ್ನು ನೀಡಿ ಗೌರವಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...