6 ತಿಂಗಳು ಕಳೆದರೂ ಆರ್‌ಜಿ ಕರ್ ಸಂತ್ರಸ್ತೆಯ ಪೋಷಕರಿಗೆ ಲಭಿಸಿಲ್ಲ ಮರಣ ಪ್ರಮಾಣಪತ್ರ

Date:

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದು ಆರು ತಿಂಗಳು ಕಳೆದರೂ ಕೂಡಾ ಸಂತ್ರಸ್ತೆಯ ಪೋಷಕರಿಗೆ ಇನ್ನೂ ಕೂಡಾ ಆಕೆಯ ಮರಣ ಪ್ರಮಾಣಪತ್ರದ ಪ್ರತಿ ಲಭಿಸಿಲ್ಲ ಎಂದು ವರದಿಯಾಗಿದೆ.

ಕಳೆದ ವರ್ಷ ಆಗಸ್ಟ್ 9ರಂದು ಸರ್ಕಾರಿ ಸ್ವಾಮ್ಯದ ಸಂಸ್ಥೆಯ ಆವರಣದಲ್ಲಿರುವ ಸೆಮಿನಾರ್ ಹಾಲ್‌ನಲ್ಲಿ ಸಂತ್ರಸ್ತೆಯ ಶವ ಪತ್ತೆಯಾಗಿದೆ. ಆದರೆ ಈವರೆಗೂ ಕುಟುಂಬಕ್ಕೆ ಮರಣ ಪ್ರಮಾಣಪತ್ರ ಲಭಿಸಿಲ್ಲ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಆರ್‌ಜಿ ಕರ್ ಅತ್ಯಾಚಾರ ಪ್ರಕರಣ: ಆರೋಪಿಗೆ ಮರಣ ದಂಡನೆ ಶಿಕ್ಷೆ ಕೋರಿ ಹೈಕೋರ್ಟ್‌ಗೆ ಪಶ್ಚಿಮ ಬಂಗಾಳ ಸರ್ಕಾರ ಅರ್ಜಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಜಿ ಕರ್ ಮತ್ತು ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ (ಕೆಎಂಸಿ) ಅಧಿಕಾರಿಗಳು ಪರಸ್ಪರ ಜವಾಬ್ದಾರಿಯನ್ನು ವರ್ಗಾಯಿಸುತ್ತಿರುವುದರಿಂದ ಇಲ್ಲಿಯವರೆಗೆ ಮರಣ ಪ್ರಮಾಣಪತ್ರವನ್ನು ಪಡೆಯಲು ಸಾಧ್ಯವಾಗಿಲ್ಲ ಎಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ.

ಸಾವು ನಡೆದ ಸ್ಥಳ ಆರ್‌ಜಿ ಕರ್ ಆಗಿರುವುದರಿಂದ, ಮರಣ ಪ್ರಮಾಣಪತ್ರವನ್ನು ಒದಗಿಸುವುದು ಆಸ್ಪತ್ರೆ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಕೆಎಂಸಿ ಅಧಿಕಾರಿಗಳು ಹೇಳುತ್ತಿದ್ದಾರೆ. ಮತ್ತೊಂದೆಡೆ, ಆಸ್ಪತ್ರೆ ಆವರಣದೊಳಗೆ ರೋಗಿ ಸತ್ತರೆ ಮರಣ ಪ್ರಮಾಣಪತ್ರವನ್ನು ಕೆಎಂಸಿ ಅಧಿಕಾರಿಗಳು ಒದಗಿಸಬೇಕಾಗುತ್ತದೆ ಎಂದು ಆರ್‌ಜಿ ಕರ್ ಅಧಿಕಾರಿಗಳು ಹೇಳುತ್ತಿದ್ದಾರೆ ಎಂದು ಪೋಷಕರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಆರ್‌ಜಿ ಕರ್ ​ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ ಪ್ರಕಟ

ಆರ್‌ಜಿ ಕರ್‌ಗೆ ಲಗತ್ತಿಸಲಾದ ವೈದ್ಯಕೀಯ ಅಧಿಕಾರಿಯ ಹೇಳಿಕೆಯ ಪ್ರಕಾರ, ಮರಣ ಪ್ರಮಾಣಪತ್ರದ ಪ್ರತಿಯನ್ನು ನ್ಯಾಯಾಲಯದ ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ. ನ್ಯಾಯಾಲಯದ ದಾಖಲೆಗಳಲ್ಲಿ ಮರಣ ಪ್ರಮಾಣಪತ್ರವನ್ನು ಉಲ್ಲೇಖಿಸಿದ್ದರೆ, ನಮಗೆ ಈವರೆಗೂ ಯಾಕೆ ನೀಡಲಾಗಿಲ್ಲ ಎಂದು ಸಂತ್ರಸ್ತೆಯ ಪೋಷಕರು ಪ್ರಶ್ನಿಸಿದ್ದಾರೆ.

ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂಜಯ್ ರಾಯ್ ಅವರನ್ನು ಅಪರಾಧಿ ಎಂದು ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ಫೆಬ್ರವರಿ 24ರಂದು ಈ ಪ್ರಕರಣದ ತನಿಖೆಯ ಕುರಿತು ಹೊಸ ಪ್ರಗತಿ ವರದಿಯನ್ನು ಸಲ್ಲಿಸುವಂತೆ ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ಸೂಚಿಸಿದೆ.

ವಿಶೇಷ ನ್ಯಾಯಾಲಯವು ಈಗಾಗಲೇ ಅತ್ಯಾಚಾರ ಮತ್ತು ಕೊಲೆಯ ಪ್ರಮುಖ ಅಪರಾಧಿಗೆ ಶಿಕ್ಷೆಯನ್ನು ಘೋಷಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...