ರಸ್ತೆ ಅಪಘಾತ | 5 ವರ್ಷಗಳಲ್ಲಿ 1.5 ಲಕ್ಷ ಪಾದಚಾರಿಗಳು ಸಾವು

Date:

ರಸ್ತೆ ಬದಿ ನಡೆದು ಹೋಗುವಾಗ, ರಸ್ತೆ ದಾಟುವಾಗ ಅಪಘಾತಕ್ಕೆ ಸಿಲುಕಿ ಐದು ವರ್ಷಗಳಲ್ಲಿ 1.5 ಲಕ್ಷ ಜನರು ಜೀವ ಕಳೆದುಕೊಂಡಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ.

ಸಾರಿಗೆ ಸಂಶೋಧನೆ, ಗಾಯ ತಡೆ ಕೇಂದ್ರ ಹಾಗೂ ದೆಹಲಿ ಐಐಟಿ ಜಂಟಿಯಾಗಿ ಅಧ್ಯಯನ ನಡೆಸಿದೆ. ಅಧ್ಯಯನದಲ್ಲಿ ರಸ್ತೆಗಳ ಅಗಲ, ಫುಟ್‌ಪಾತ್‌ ಲಭ್ಯತೆ ಹಾಗೂ ಪಾದಚಾರಿಗಳ ಸಾವಿನ ಬಗ್ಗೆ ವಿಶ್ಲೇಷಣೆ ಮಾಡಲಾಗಿದ್ದು, ವರದಿ ಪ್ರಕಟಿಸಿದೆ. ವರದಿ ಪ್ರಕಾರ, 2019ರ ಜನವರಿಯಿಂದ 2023ರ ಅಂತ್ಯದ ಅವರೆಗೆ ರಸ್ತೆ ಅಪಘಾತಗಳಿಗೆ 1.5 ಲಕ್ಷ ಮಂದಿ ಪಾದಚಾರಿಗಳು ಬಲಿಯಾಗಿದ್ದಾರೆ.

ಅಂದಹಾಗೆ, ಇದೇ ವಾರ, ಭಾರತೀಯ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಪಾದಚಾರಿಗಳಿಗೆ ರಸ್ತೆ ಬಳಕೆಯ ಹಕ್ಕನ್ನು ಖಾತರಿಪಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಅಲ್ಲದೆ, ರಸ್ತೆಯಲ್ಲಿ ಪಾದಚಾರಿಗಳಿಗೇ ಮೊದಲ ಹಕ್ಕು ಇದೆ ಎಂದು ಕಾನೂನುಗಳು ಹೇಳುತ್ತವೆ. ಆದರೆ, ರಸ್ತೆ ಮೇಲೆ ನಡೆಯುವ ಕಾರಣಕ್ಕಾಗಿಯೇ ಲಕ್ಷಾಂತರ ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2019 ಮತ್ತು 2013ರ ನಡುವೆ ರಸ್ತೆ ಅಪಘಾತಗಳಲ್ಲಿ ಒಟ್ಟು 7.9 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ. ಅವರಲ್ಲಿ, 1.5 ಲಕ್ಷ ಮಂದಿ ಪಾದಚಾರಿಗಳು. ಉಳಿದವರು ದ್ವಿಚಕ್ರ ವಾಹ, ಕಾರು, ಬಸ್‌ ಹಾಗೂ ಭಾರೀ ವಾಹನಗಳಲ್ಲಿ ಪ್ರಯಾಣಿಸುವಾಗ ಮತ್ತು ಚಲಾಯಿಸುವಾಗ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ ಎಂದು ವರದಿ ಹೇಳಿದೆ.

ಈ ವರದಿ ಓದಿದ್ದೀರಾ?: ‘ತಿರಂಗಾ ಯಾತ್ರೆ’ ಯಾರಿಗಾಗಿ? ದೇಶಕ್ಕೋ-ಮೋದಿಗೋ?

“ಭಾರತದ ಎಲ್ಲ ರಾಜ್ಯಗಳ ಪೈಕಿ ಕೆಲವು ರಾಜ್ಯಗಳಲ್ಲಿನ ಒಟ್ಟು ರಸ್ತೆಯ ಪೈಕಿ 3% ರಸ್ತೆಗಳು ಮಾತ್ರವೇ ಫುಟ್‌ಪಾತ್ ಹೊಂದಿವೆ. ಹಲವು ರಾಜ್ಯಗಳು 19% ಫುಟ್‌ಪಾತ್‌ಗಳನ್ನು ಹೊಂದಿದ್ದರೆ, ಕೆಲವು ರಾಜ್ಯಗಳಲ್ಲಿ ಗರಿಷ್ಠವೆಂದರೆ 73% ರಸ್ತೆಗಳು ಫುಟ್‌ಪಾತ್ ಹೊಂದಿವೆ ಎಂದು ವರದಿಯು ಹೇಳಿದೆ.

ಈ ಪೈಕಿ, ಮಹಾರಾಷ್ಟ್ರವು ಅತ್ಯಧಿಕ ಪ್ರಮಾಣದ ಫುಟ್‌ಪಾತ್‌ಗಳನ್ನು ಹೊಂದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು ರಸ್ತೆಯ ಪೈಕಿ ಕೇವಲ 3% ರಸ್ತೆಗಳು ಮಾತ್ರವೇ ಫಟ್‌ಪಾತ್‌ಗಳನ್ನು ಹೊಂದಿವೆ. ಪುದುಚೇರಿ 5% ಫುಟ್‌ಪಾತ್‌ಗಳನ್ನು ಒಳಗೊಂಡಿದೆ.

ವಿಶ್ವ ಆರೋಗ್ಯ ಸಂಸ್ಥೆ ಹೇಳುವಂತೆ, ಜಾಗತಿಕವಾಗಿ ಒಟ್ಟು ರಸ್ತೆ ಅಪಘಾತಗಳಲ್ಲಿ ಸಾವನ್ನುವ ಸಂಖ್ಯೆಯಲ್ಲಿ 21% ಮಂದಿ ಪಾದಚಾರಿಗಳಾಗಿದ್ದಾರೆ ಎಂದು ಹೇಳಿದೆ. ಹೀಗಾಗಿ, ಎಲ್ಲ ರಾಷ್ಟ್ರಗಳು ಉತ್ತಮ ಪಾದಚಾರಿ ಮಾರ್ಗಗಳನ್ನು ನಿರ್ಮಾಣ ಮಾಡಬೇಕು ಎಂದು ವಿಶ್ವಸಂಸ್ಥೆ ಸೂಚಿಸಿದೆ. ಆದಾಗ್ಯೂ, ರಸ್ತೆ ಅಪಘಾತಗಳಿಗೆ ಬಲಿಯಾಗುವ ಪಾದಚಾರಿಗಳ ಸಂಖ್ಯೆ ಕಡಿಮೆಯಾಗಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...