ಮಧ್ಯಪ್ರದೇಶ | ಬ್ಯಾಂಕ್‌ನಿಂದ 14 ಕೋಟಿ ರೂ. ಮೌಲ್ಯದ ಚಿನ್ನ, 5 ಲಕ್ಷ ರೂ. ನಗದು ದೋಚಿದ ಖದೀಮರು

Date:

ಸಣ್ಣ ಹಣಕಾಸು ಬ್ಯಾಂಕಿನ ಶಾಖೆಯೊಂದರಿಂದ ಖದೀಮರು 14 ಕೋಟಿ ರೂ. ಮೌಲ್ಯದ ಚಿನ್ನ, 5 ಲಕ್ಷ ರೂ. ನಗದು ದೋಚಿದ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ನಡೆದಿದೆ. ಹೆಲ್ಮೆಟ್ ಧರಿಸಿದ ಐವರು ದರೋಡೆಕೋರರು 20 ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ಈ ದರೋಡೆ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನು ಖಿಟೋಲಾ ಪ್ರದೇಶದ ಶಾಖೆಗೆ ಈ ಕಳ್ಳರು ದಾಳಿ ಮಾಡಿದ ವೇಳೆ ಭದ್ರತಾ ಸಿಬ್ಬಂದಿಯೇ ಬ್ಯಾಂಕ್‌ನಲ್ಲಿ ಇರಲಿಲ್ಲ ಎಂದು ಹೇಳಲಾಗಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಸೆಹೋರ್ ತಹಸಿಲ್‌ನಲ್ಲಿರುವ ಬ್ಯಾಂಕಿನ ಶಾಖೆಯಿಂದ ದರೋಡೆಕೋರರು ಲಾಕರ್‌ನಲ್ಲಿ ಇರಿಸಲಾಗಿದ್ದ 14.875 ಕೆಜಿ ಚಿನ್ನ ಮತ್ತು 5 ಲಕ್ಷ ರೂ. ನಗದನ್ನು ದೋಚಿದ್ದಾರೆ ಎಂದು ಜಬಲ್ಪುರ ಗ್ರಾಮೀಣ ಪ್ರದೇಶದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸೂರ್ಯಕಾಂತ್ ಶರ್ಮಾ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಹೆಚ್ಚಾದ ದರೋಡೆ ಪ್ರಕರಣ; ಪೊಲೀಸ್ ವ್ಯವಸ್ಥೆ ಬಗ್ಗೆ ಅಪರಾಧ ತಜ್ಞರ ಕಳವಳ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಈ ಬಗ್ಗೆ ಅಧಿಕ ಮಾಹಿತಿ ನೀಡಿರುವ ಜಬಲ್ಪುರ ರೇಂಜ್ ಡೆಪ್ಯೂಟಿ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಡಿಐಜಿ) ಅತುಲ್ ಸಿಂಗ್, ಹೆಲ್ಮೆಟ್ ಧರಿಸಿದ ದರೋಡೆಕೋರರು ಎರಡು ಮೋಟಾರ್ ಸೈಕಲ್‌ಗಳಲ್ಲಿ ಬಂದು ಇಎಸ್‌ಎಎಫ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಶಾಖೆಗೆ ನುಗ್ಗಿದ್ದಾರೆ. ಬ್ಯಾಂಕ್ ಶಾಖೆಯಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಘಟನೆ ನಡೆದ ಸಮಯದಲ್ಲಿ ಆರು ಸಿಬ್ಬಂದಿ ಇದ್ದರು” ಎಂದು ಹೇಳಿದ್ದಾರೆ.

“ದರೋಡೆಕೋರರು ಸೋಮವಾರ ಬೆಳಿಗ್ಗೆ 8.50ಕ್ಕೆ ಶಾಖೆಗೆ ಪ್ರವೇಶಿಸಿ 9.08ಕ್ಕೆ ಹೊರಬಂದರು. ಮೋಟಾರ್ ಸೈಕಲ್‌ಗಳಲ್ಲಿ ಪರಾರಿಯಾಗಿದ್ದಾರೆ. ನಾವು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದೇವೆ. ದರೋಡೆಕೋರರ ಕೈಯಲ್ಲಿ ಶಸ್ತ್ರಾಸ್ತ್ರಗಳಿಲ್ಲ. ದರೋಡೆಕೋರರಲ್ಲಿ ಒಬ್ಬನ ಬೆಲ್ಟ್ ಅಡಿಯಲ್ಲಿ ಬಂದೂಕು ಕಂಡುಬಂದಿದೆ” ಎಂದು ಮಾಹಿತಿ ನೀಡಿದ್ದಾರೆ.

ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಘಟನೆಯ 45 ನಿಮಿಷಗಳ ನಂತರ ಬ್ಯಾಂಕ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದರು. ನಮಗೆ ಸಮಯಕ್ಕೆ ಸರಿಯಾಗಿ ಮಾಹಿತಿ ನೀಡಿದ್ದರೆ, ದರೋಡೆಕೋರರು ಸಿಕ್ಕಿಬೀಳುತ್ತಿದ್ದರು. ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...