ಮಣಿಪುರದ ಮೊದಲ ಸಿಎಂ ಮನೆ ಗುರಿಯಾಗಿಸಿ ರಾಕೆಟ್ ದಾಳಿ; ‘ಸಾರ್ವಜನಿಕ ತುರ್ತು ಪರಿಸ್ಥಿತಿ’ ಘೋಷಣೆ

Date:

ಶಂಕಿತ ಬುಡಕಟ್ಟು ಉಗ್ರರು ಶುಕ್ರವಾರ ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಮಣಿಪುರದ ಮೊದಲ ಮುಖ್ಯಮಂತ್ರಿ ಮೈರೆಂಬಮ್ ಕೊಯಿರೆಂಗ್ ಮನೆಯನ್ನು ಗುರಿಯಾಗಿಸಿ ರಾಕೆಟ್ ದಾಳಿ ನಡೆಸಿದ್ದು, ಮೈತೇಯಿ ಸಮುದಾಯದ ಉನ್ನತ ಸಂಸ್ಥೆಯಾದ ಮಣಿಪುರ ಸಮಗ್ರತೆಯ ಸಮನ್ವಯ ಸಮಿತಿ (ಕೊಕೊಮಿ) ‘ಸಾರ್ವಜನಿಕ ತುರ್ತು ಪರಿಸ್ಥಿತಿ’ ಘೋಷಿಸಿದೆ.

ಈ ರಾಕೆಟ್ ದಾಳಿಯಿಂದಾಗಿ 70 ವರ್ಷದ ಅರ್ಚಕ ಆರ್‌ಕೆ ರಾಬೆ ಮೃತಪಟ್ಟರೆ ಅಪ್ರಾಪ್ತ ಬಾಲಕಿ ಸೇರಿದಂತೆ ಐವರು ಗಾಯಗೊಂಡಿದ್ದಾರೆ.

1944ರಲ್ಲಿ ಲೆಫ್ಟಿನೆಂಟ್ ಕರ್ನಲ್ ಶೌಕತ್ ಅಲಿ ಅವರು ಭಾರತದಲ್ಲಿ ಮೊದಲ ಬಾರಿಗೆ ತ್ರಿವರ್ಣ ಧ್ವಜವನ್ನು ಹಾರಿಸಿದ ನೆಲದಲ್ಲಿರುವ ಭಾರತೀಯ ರಾಷ್ಟ್ರೀಯ ಸೇನೆಯ (ಐಎನ್‌ಎ) ಪ್ರಧಾನ ಕಚೇರಿಯಿಂದ ಕೇವಲ 100 ಮೀಟರ್ ದೂರದಲ್ಲಿ ಮಾಜಿ ಸಿಎಂ ಅವರ ಮನೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಣಿಪುರ ಹಿಂಸಾಚಾರ | ಗುಂಡಿನ ದಾಳಿಗೆ ಐವರು ಬಲಿ

ಮೊಯಿರಾಂಗ್ ಫೀವಾಂಗ್‌ಬಾಮ್ ಲೈಕೈಯ ಅರ್ಚಕ ಆರ್‌ಕೆ ರಾಬೆ ಅವರು ಮಾಜಿ ಸಿಎಂ ನಿವಾಸದಲ್ಲಿ ಧಾರ್ಮಿಕ ಸಮಾರಂಭಕ್ಕೆ ತಯಾರಿ ನಡೆಸುತ್ತಿದ್ದಾಗ ನಡೆದ ರಾಕೆಟ್‌ ದಾಳಿಯಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಶೆರಿನಾ ಮೈರೆನ್‌ಬಾಮ್ (13), ಕೊಂಜೆನ್‌ಬಾಮ್ ಜುಗೆಂಡ್ರೊ (51), ರಾಜೀವ್ ಅಲಿಯಾಸ್ ಬೊಬೊ (58), ಸಲಾಮ್ ನಾನೋ (40) ಮತ್ತು ನ್ಗಾಂಗೊಮ್ ಇಬೋಬಿ (62) ರಾಕೆಟ್ ದಾಳಿಯಿಂದ ಗಾಯಗೊಂಡಿದ್ದಾರೆ.

ಕಳೆದ ವರ್ಷ ಮೇ ತಿಂಗಳಲ್ಲಿ ಮಣಿಪುರದಲ್ಲಿ ಹಿಂಸಾಚಾರ ಆರಂಭವಾಗಿದ್ದು, ಈವರೆಗೆ ಹಿಂಸಾಚಾರ ನಿಂತಿಲ್ಲ. ಈಗಾಗಲೇ 200ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ನಿನ್ನೆ ತಡರಾತ್ರಿಯಷ್ಟೆ ಗುಂಡಿನ ದಾಳಿಯಿಂದ ಐವರು ಸಾವನ್ನಪ್ಪಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...