ಮಧ್ಯ ಪ್ರದೇಶದ ನಂತರ ಬಿಹಾರದಲ್ಲೊಂದು ವಿವಾದಿತ ಯೋಜನೆ; 100 ಕೋಟಿ ರೂ. ವೆಚ್ಚದಲ್ಲಿ ಮರಗಳನ್ನು ಹಾಗೇ ಬಿಟ್ಟು ರಸ್ತೆ ನಿರ್ಮಾಣ

Date:

ಮಧ್ಯ ಪ್ರದೇಶದ ಬಿಜೆಪಿ ಸರ್ಕಾರ 90 ಡಿಗ್ರಿ ಕೋನದಲ್ಲಿ ಸೇತುವೆ ನಿರ್ಮಿಸಿ ವಿವಾದಕ್ಕೀಡಾಗಿತ್ತು. ಈಗ ಬಿಹಾರದ ಎನ್‌ಡಿಎ ಸರ್ಕಾರ ಮರಗಳನ್ನು ಹಾಗೇ ಬಿಟ್ಟು 100 ಕೋಟಿ ರೂ. ವೆಚ್ಚದಲ್ಲಿ ರಸ್ತೆ ವಿಸ್ತರಣೆಗೊಳಿಸಿದೆ.

ಬಿಹಾರದ ರಾಜಧಾನಿ ಪಾಟ್ನಾದಿಂದ 50 ಕಿ.ಮೀ ದೂರದಲ್ಲಿರುವ ಜೆಹಾನಾಬಾದ್‌ ನಲ್ಲಿನ ವಾಹನ ಚಾಲಕರಿಗೆ ವಿಚಿತ್ರ ಅನುಭವವಾಗಿದೆ. 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ರಸ್ತೆ ವಿಸ್ತರಣೆ ಯೋಜನೆಯು ಇದೀಗ ವಿವಾದಕ್ಕೆ ಗುರಿಯಾಗಿದೆ.

ಪಾಟ್ನಾ-ಗಯಾ ಮುಖ್ಯ ರಸ್ತೆಯಲ್ಲಿರುವ ಜೆಹಾನಾಬಾದ್‌ನಲ್ಲಿ, 7.48 ಕಿ.ಮೀ ಉದ್ದದ ರಸ್ತೆಯ ಮಧ್ಯದಲ್ಲಿ ಮರಗಳು ಎತ್ತರವಾಗಿ ನಿಂತಿದ್ದು, ಅಪಘಾತಗಳಿಗೆ ಎಡೆಮಾಡುವಂತೆ ಇದೆ. ಹಾಗಂತ ಈ ಮರಗಳು ರಾತ್ರೋರಾತ್ರಿ ಬೆಳೆದಿದ್ದಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನಾಗರಹೊಳೆ ಬುಡಕಟ್ಟು ಜನಾಂಗಕ್ಕೆ ಸಿಗಲಿ ನ್ಯಾಯ

ಜಿಲ್ಲಾಡಳಿತ 100 ಕೋಟಿ ರೂ. ವೆಚ್ಚದ ರಸ್ತೆ ವಿಸ್ತರಣೆ ಯೋಜನೆಯನ್ನು ಕೈಗೆತ್ತಿಕೊಂಡಾಗ, ಮರಗಳನ್ನು ಕಡಿದುಹಾಕಲು ಅನುಮತಿ ಕೋರಿ ಅರಣ್ಯ ಇಲಾಖೆಯನ್ನು ಸಂಪರ್ಕಿಸಿತ್ತು. ಆದರೆ ಜಿಲ್ಲಾಡಳಿತದ ಬೇಡಿಕೆಯನ್ನು ಅರಣ್ಯ ಇಲಾಖೆ ತಿರಸ್ಕರಿಸಿದ್ದು, ರಸ್ತೆ ವಿಸ್ತರಣೆಗೆ ಬೇಕಿದ್ದ 14 ಹೆಕ್ಟೇರ್ ಅರಣ್ಯ ಭೂಮಿಗೆ ಪರಿಹಾರವನ್ನು ನೀಡುವಂತೆ ಅರಣ್ಯ ಇಲಾಖೆ ಕೋರಿತು. ಆದರೆ, ಜಿಲ್ಲಾಡಳಿತಕ್ಕೆ ವಿನಂತಿಯನ್ನು ಪೂರೈಸಲು ಸಾಧ್ಯವಾಗಲಿಲ್ಲ. ಅದಾಗ್ಯೂ, ರಸ್ತೆ ವಿಸ್ತರಣೆ ಯೋಜನೆಯನ್ನು ಜಿಲ್ಲಾಡಳಿತವು ಪೂರ್ಣಗೊಳಿಸಿ ಅವಾಂತರ ಸೃಷ್ಟಿಸಿದೆ.

ಮರಗಳು ರಸ್ತೆಯ ಮಧ್ಯದಲ್ಲಿ ಇರುವಂತೆಯೇ ರಸ್ತೆಯನ್ನು ಅಗಲೀಕರಿಸಿದ್ದು, ಹೊಸದಾಗಿ ವಿಸ್ತರಣೆಯಾದ ಮಾರ್ಗ ಮಧ್ಯೆಯೇ ಮರಗಳನ್ನು ಹಾಗೆಯೇ ಉಳಿಸಲಾಗಿದೆ. ಇದರಿಂದಾಗಿ ಇಲ್ಲಿ ರಸ್ತೆ ಅಪಘಾತಗಳೂ ನಡೆದಿದೆ ಎಂದು ಸಾರ್ವಜನಿಕರೊಬ್ಬರು ತಿಳಿಸಿದ್ದಾರೆ.

ಸರ್ಕಾರದ ಬೇರೆ ಬೇರೆ ಇಲಾಖೆಗಳ ಸಮನ್ವಯ ಕೊರತೆಯಿಂದಾಗಿ 100 ಕೋಟಿ ರೂ. ಮೌಲ್ಯದ ಯೋಜನೆಯೊಂದು ಅಸಂಬದ್ಧವಾಗಿ ಪೂರ್ಣಗೊಂಡಿದ್ದು, ನಾಗರಿಕರ ತೆರಿಗೆ ಹಣ ಪೋಲಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...