ಬ್ಯಾಂಕ್‌ಗಳಿಗೆ 20 ಸಾವಿರ ಕೋಟಿ ರೂ. ವಂಚನೆ: ಏಮ್‌ಟೆಕ್ ಗ್ರೂಪ್ ಕಚೇರಿಗಳ ಮೇಲೆ ಇ.ಡಿ ದಾಳಿ

Date:

.ಡಿಸಾಲ ಪಡೆದು ಬ್ಯಾಂಕ್‌ಗಳಿಗೆ ಇಪ್ಪತ್ತು ಸಾವಿರ ಕೋಟಿ ರೂ.ಗೂ ಅಧಿಕ ಹಣವನ್ನು ವಂಚಿಸಿದ ಆರೋಪದ ಮೇಲೆ ಏಮ್‌ಟೆಕ್‌ ಗ್ರೂಪ್ ಸಂಸ್ಥೆಗಳು ಹಾಗೂ ಅವರ ಪ್ರವರ್ತಕ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಸಂಸ್ಥೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ದೆಹಲಿ-ಎನ್‌ಸಿಆರ್‌, ಮುಂಬೈ, ನಾಗ್ಪುರದ 35 ಕಚೇರಿಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೋಧನೆಯಲ್ಲಿ ತೊಡಗಿದ್ದಾರೆ.

ಏಮ್‌ಟೆಕ್‌ ಗ್ರೂಪಿನ ನಿರ್ದೇಶಕರಾದ ಅರವಿಂದ್ ಧಾಮ್‌, ಗೌತಮ್‌ ಮಲ್ಹೋತ್ರಾ ಹಾಗೂ ಇತರರ ನಿವಾಸದ ಮೇಲೆಯೂ ದಾಳಿ ನಡೆಸಲಾಗಿದೆ. ಸಂಸ್ಥೆಯ ದೆಹಲಿ, ಗುರುಗ್ರಾಮ, ನೋಯ್ಡಾ, ಮುಂಬೈ ಹಾಗೂ ನಾಗ್ಪುರದ ವಾಣಿಜ್ಯ ಹಾಗೂ ವಸತಿ ಆವರಣಗಳ ಮೇಲೆ ಇಂದು ಬೆಳಿಗ್ಗೆಯಿಂದಲೇ ದಾಳಿ ನಡೆಸಲಾಗಿದೆ.

ಏಮ್‌ಟೆಕ್‌-ಎಸಿಐಎಲ್‌ ಸಂಸ್ಥೆ ಸಾಲ ಪಡೆದು ಬ್ಯಾಂಕ್‌ಗಳಿಗೆ 20 ಸಾವಿರ ಕೋಟಿ ರೂ. ವಂಚಿಸಿದ  ನಂತರ ಸಿಬಿಐ ತನಿಖೆ ಕೈಗೊಂಡು ಎಫ್‌ಐಆರ್‌ ದಾಖಲಿಸಿತ್ತು. ನಂತರದಲ್ಲಿ ರಾಷ್ಟ್ರೀಯ ಕಂಪನಿಗಳ ಕಾನೂನು ಪ್ರಾಧಿಕಾರ ವಿಚಾರಣೆ ನಡೆಸಿ ಕೆಲವು ಕಂಪನಿಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಬಿಎಂಪಿಗೆ ಬೇಕಿರುವುದು ವಿಭಜನೆಗೂ ಮುಖ್ಯವಾಗಿ ಚುನಾವಣೆ

ಸುಪ್ರೀಂ ಕೋರ್ಟ್ ಕೂಡ ಇ.ಡಿ ತನಿಖೆ ನಡೆಸುವಂತೆ ಸೂಚನೆ ನೀಡಿದೆ. ಜಾರಿ ನಿರ್ದೇಶನಾಲಯಗಳ ಪ್ರಕಾರ ಏಮ್‌ಟೆಕ್‌ ಸಂಸ್ಥೆಗಳ ಬೊಕ್ಕಸಕ್ಕೆ 10 ರಿಂದ 15 ಸಾವಿರ ಕೋಟಿ ರೂ. ನಷ್ಟ ಉಂಟಾಗಿದೆ.

ಏಮ್‌ಟೆಕ್‌ ಕಂಪನಿಯು ರಿಯಲ್‌ ಎಸ್ಟೇಟ್‌, ವಿದೇಶಿ ಹೂಡಿಕೆ ಹಾಗೂ ನೂತನ ಕಂಪನಿಗಳಲ್ಲಿ ಹೂಡಿಕೆ ಮಾಡಲು ಸಾಲದ ಹಣವನ್ನು ತೊಡಗಿಸಿಕೊಂಡಿದೆ ಎಂದು ಇ.ಡಿ ಶಂಕಿಸಿದೆ.

ಏಮ್‌ಟೆಕ್‌ ಸಂಸ್ಥೆಯು ಅದೇ ರೀತಿ ಹುಸಿ ಮಾರಾಟ, ಆಸ್ತಿ ಗಳಿಕೆ, ಸಾಲ ತೀರಿಕೆ ಹಾಗೂ ಲಾಭ ಗಳಿಸಲು ಸಾಲದ ಹಣವನ್ನು ಬಳಸಿಕೊಂಡಿದೆ. ಅಲ್ಲದೆ ಸಾವಿರಾರು ಕೋಟಿ ಆಸ್ತಿಗಳನ್ನು ನಕಲಿ ಕಂಪನಿಗಳು, ವಿದೇಶಿ ಹೂಡಿಕೆ ಹಾಗೂ ನಿರ್ದೇಶಕರು ಹಾಗೂ ಷೇರುದಾರರ ಮೂಲಕ ಬೇನಾಮಿ ಹೆಸರಿನಲ್ಲಿ ತೊಡಗಿಸಿದೆ ಎಂದು ಇ.ಡಿ ಆರೋಪಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...