ಕಾರ್ಮಿಕನಿಗೆ 232 ಕೋಟಿ ರೂ. ತೆರಿಗೆ ನೋಟಿಸ್!

Date:

ಕಸೂತಿ ಕಾರ್ಮಿಕರೊಬ್ಬರ ದಾಖಲೆಗಳನ್ನು ಬಳಸಿಕೊಂಡು ವಂಚಕರು ನಕಲಿ ರಫ್ತು ಘಟಕವನ್ನು ಸ್ಥಾಪಿಸಿಕೊಂಡಿದ್ದಾರೆ. ರಫ್ತು ಘಟಕದ ಹೆಸರಿನಲ್ಲಿ ಕಾರ್ಮಿಕನಿಗೆ 232 ಕೋಟಿ ರೂ.ಗಳ ವಹಿವಾಟಿಗೆ ತೆರಿಗೆ ನೋಟಿಸ್ ಬಂದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದ ಬರೇಲಿಯ ಕಾರ್ಮಿಕ ಫೂಲ್ ಮಿಯಾನ್ ಎಂಬಾತನಿಗೆ ತೆರಿಗೆ ನೋಟಿಸ್ ಬಂದಿದೆ. ಆತನಿಗೆ ವಂಚಕರು ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಆತನ ದಾಖಲೆಗಳನ್ನು ಪಡೆದುಕೊಂಡಿದ್ದಾರೆ. ಆ ದಾಖಲೆಗಳನ್ನು ಬಳಿಕೊಂಡು ದೆಹಲಿಯಲ್ಲಿ ನಕಲಿ ರಫ್ತು ಘಟಕವನ್ನು ಸ್ಥಾಪಿಸಿದ್ದಾರೆ. ಜೊತೆಗೆ, 232 ಕೋಟಿ ರೂಪಾಯಿ ಮೌಲ್ಯದ ವಹಿವಾಟನ್ನೂ ನಡೆಸಿದ್ದಾರೆ. ಆ ವಹಿವಾಟಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯು ಕಾರ್ಮಿಕ ಮಿಯಾನ್‌ಗೆ ನೋಟಿಸ್‌ ಕಳಿಸಿದೆ. ನಂತರ, ಪ್ರಕರಣ ಬೆಳಕಿಗೆ ಬಂದಿದೆ.

ನೋಟಿಸ್ ಬಂದ ಹಿನ್ನೆಲೆ ಕಾರ್ಮಿಕ ಫೂಲ್ ಮಿಯಾನ್‌, ತಮಗೆ ವಂಚಕರು ವಂಚಿಸಿದ್ದಾರೆ. ತನ್ನ ಹೆಸರಿನಲ್ಲಿ ರಫ್ತು ಘಟಕ ತೆರೆದಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕಾರ್ಮಿಕ

ದೂರು ದಾಖಲಿಸಿರುವ ವಿಯಾನ್, “ತಾನು ಕಸೂತಿ ಕೆಲಸ ಮಾಡುತ್ತಿದ್ದೇನೆ. ನನಗೆ ಒಳ್ಳೆಯ ಸಂಬಳ ಬರುವ ಕೆಲಸ ಕೊಡಿಸುವುದಾಗಿ ಗುಡ್ಡು ಸುಂದರ್ ಅಲಿಯಾಸ್ ಉವೈಸ್, ಸುಹೈಲ್ ಮತ್ತು ಆಸಿಫ್ ಖಾನ್ ಎಂಬವರು ಭರವಸೆ ನೀಡಿದ್ದರು. ನನ್ನ ಆಧಾರ್ ಕಾರ್ಡ್, ಪಾನ್‌ ಕಾರ್ಡ್, ಫೋಟೊ ಮತ್ತು ಇತರ ದಾಖಲೆಗಳನ್ನು ಪಡೆದುಕೊಂಡಿದ್ದರು. ಆದರೆ, ಕೊರೊನಾ ಸಮಯದಲ್ಲಿ ಲಾಕ್‌ಡೌನ್‌ ಆದ ಕಾರಣ ವಿಳಂಬವಾಗುತ್ತಿದೆ ಎಂಬ ನೆಪವೊಡ್ಡಿ ಉದ್ಯೋಗ ಕೊಡಿಸಿರಲಿಲ್ಲ. ಇದೀಗ, ರಫ್ತು ಘಟಕದ ಹೆಸರಿನಲ್ಲಿ ನೋಟಿಸ್‌ ಬಂದಿದೆ. ವಂಚಕರು ನನ್ನ ದಾಖಲೆಗಳನ್ನು ಬಳಿಸಿಕೊಂಡು ನಕಲಿ ರಫ್ತು ಘಟಕ ತೆರೆದಿದ್ದಾರೆ” ಎಂದು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...