450 ಕೋಟಿ ರೂ. ಹಗರಣ | ಟೀಮ್‌ ಇಂಡಿಯಾ ಆಟಗಾರ ಶುಭ​ಮನ್ ಗಿಲ್‌ಗೆ ಸಿಐಡಿ ಸಮನ್ಸ್‌

Date:

ಬರೋಬ್ಬರಿ 450 ಕೋಟಿ ರೂ. ಹಗರಣವೊಂದಕ್ಕೆ ಸಂಬಂಧಿಸಿದಂತೆ ಟೀಮ್‌ ಇಂಡಿಯಾದ ಬೇಡಿಕೆಯ ಬ್ಯಾಟರ್‌ ಶುಭಮನ್ ಗಿಲ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಗುಜರಾತ್‌ ಸಿಐಡಿ ಸಮನ್ಸ್‌ ಜಾರಿ ಮಾಡಿದೆ.

ಪ್ರಸ್ತುತ ಗಿಲ್‌ ಅವರು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟ್ರೋಫಿಯ ಟೆಸ್ಟ್‌ ಕ್ರಿಕೆಟ್‌ನಲ್ಲಿ ಆಟವಾಡುತ್ತಿದ್ದು, ಆಸ್ಟ್ರೇಲಿಯಾದಲ್ಲಿದ್ದಾರೆ. ಅವರಿಗೆ ಸಿಬಿಐ ಸಮನ್ಸ್‌ ಜಾರಿ ಮಾಡಿದೆ. ಗಿಲ್ ಮಾತ್ರವಲ್ಲದೆ, ಐಪಿಎಲ್‌ನ ಗುಜರಾತ್ ಟೈಟಾನ್ಸ್‌ ತಂಡದ ಆಟಗಾರರಾದ ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ ಹಾಗೂ ಮೋಹಿತ್ ಶರ್ಮಾ ಅವರಿಗೂ ಸಮನ್ಸ್‌ ನೀಡಲಾಗಿದೆ.

ಭೂಪೇಂದರ್ ಸಿಂಗ್ ಝಾಲಾ ಎಂಬವರ ನೇತೃತ್ವದಲ್ಲಿ ‘BZ ಫೈನಾನ್ಶಿಯಲ್ ಸರ್ವಿಸಸ್’ ಎಂಬ ಫೈನಾನ್ಸ್‌ ಕಂಪನಿಯನ್ನು ನಡೆಸಲಾಗುತ್ತಿದೆ. ಈ ಕಂಪನಿಯಲ್ಲಿ ಗಿಲ್ ಮತ್ತು ಇತರ ಮೂವರು ಕ್ರಿಕೆಟಿಕೆಗರು ಹೂಡಿಕೆ ಮಾಡಿದ್ದಾರೆ. ಗಿಲ್ 1.95 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದರೆ, ಇತರ ಆಟಗಾರರು ಸಣ್ಣ ಮೊತ್ತವನ್ನು ಹೂಡಿಕೆ ಮಾಡಿದ್ದಾರೆ. ಈ ಕಂಪನಿಯಲ್ಲಿ ಬ್ಯಾಂಕುಗಳಿಗಿಂತ ಹೆಚ್ಚಿನ ಬಡ್ಡಿ ದರ ನೀಡುವುದಾಗಿ ಹೂಡಿಕೆದಾರರಿಂದ ಹಣ ಹೂಡಿಕೆ ಮಾಡಿಸಿ, ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಕೆಪಿಎಸ್‌ಸಿ ಕರ್ಮಕಾಂಡ | ಮರುಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲೂ ಎಡವಟ್ಟು: ಬೇಜವಾಬ್ದಾರಿ ಅಧಿಕಾರಿಗಳ ತಲೆದಂಡವೇ ಸೂಕ್ತ ಕ್ರಮ?

ಹೂಡಿಕೆದಾರರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಪ್ರಕರಣದಲ್ಲಿ ಈಗಾಗಲೇ ಕಂಪನಿಯ ಮುಖ್ಯಸ್ಥ ಭೂಪೇಂದರ್ ಸಿಂಗ್ ಝಾಲಾ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

“ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಪರವಾಗಿ ಆಟವಾಡುವ ಶುಭ್​ಮನ್​ ಗಿಲ್, ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ ಹಾಗೂ ಮೋಹಿತ್ ಶರ್ಮಾ ಪೊಂಜಿ ಅವರು ಕಂಪನಿಯಲ್ಲಿ ಹೂಡಿಕೆ ಮಾಡಿದ್ದಾರೆ. ಈ ನಾಲ್ವರಿಗೂ ಕೂಡ ಹೆಚ್ಚಿನ ಬಡ್ಡಿಯನ್ನು ಕಂಪನಿ ಪಾವತಿಸಿಲ್ಲವೆಂದು ಆರೋಪಿ ಭೂಪೇಂದರ್ ಹೇಳಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...