ಏಳು ಕೋಟಿ ರೂ. ಚೆಕ್ ಬೌನ್ಸ್ ಪ್ರಕರಣ; ವೀರೇಂದ್ರ ಸೆಹ್ವಾಗ್ ಸಹೋದರ ಬಂಧನ

Date:

ಭಾರತ ಕ್ರಿಕೆಟ್ ತಂಡದ ಮಾಜಿ ಬಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಅವರ ಸಹೋದರ ವಿನೋದ್ ಸೆಹ್ವಾಗ್ ಅವರನ್ನು ಏಳು ಕೋಟಿ ರೂಪಾಯಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಚಂಡೀಗಢ ಪೊಲೀಸರು ಬಂಧಿಸಿದ್ದಾರೆ. ಸದ್ಯ ಸ್ಥಳೀಯ ನ್ಯಾಯಾಲಯವು ವಿನೋದ್ ಅವರಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.

ಜಲ್ತ ಫುಡ್ ಆಂಡ್ ಬಿವರೇಜಸ್ ಕಂಪನಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಈ ಸಂಸ್ಥೆಯ ನಿರ್ದೇಶಕರುಗಳಾದ ವಿನೋದ್ ಸೆಹ್ವಾಗ್, ವಿಷ್ಣು ಮಿತ್ತಲ್ ಮತ್ತು ಸುಧೀರ್ ಮಲ್ಹೋತ್ರಾ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿದೆ.

ಇದನ್ನು ಓದಿದ್ದೀರಾ? ಕ್ರಿಕೆಟ್: ವೀರೇಂದ್ರ ಸೆಹ್ವಾಗ್‌ ನಂತರದ ದಾಖಲೆಯ ತ್ರಿಶತಕ ಬಾರಿಸಿದ ಇಂಗ್ಲೆಂಡ್‌ನ ಹ್ಯಾರಿ ಬ್ರೂಕ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಮಾಚಲ ಪ್ರದೇಶದ ಶ್ರೀ ನೈನಾ ಪ್ಲಾಸ್ಟಿಕ್ ಫ್ಯಾಕ್ಟರಿಯ ಮಾಲೀಕ ಕೃಷ್ಣ ಮೋಹನ್ ಚೆಕ್ ಬೌನ್ಸ್ ಪ್ರಕರಣವನ್ನು ದಾಖಲಿಸಿದ್ದಾರೆ. “ದೆಹಲಿಯ ಜಲ್ತ ಫುಡ್ ಆಂಡ್ ಬಿವರೇಜಸ್ ಕಂಪನಿಯು ನಮ್ಮ ಫ್ಯಾಕ್ಟರಿಯಿಂದ ಕೆಲವು ಉತ್ಪನ್ನಗಳನ್ನು ಖರೀದಿಸಿತ್ತು. 7 ಕೋಟಿ ರೂಪಾಯಿಯ ಚೆಕ್ ನೀಡಿತ್ತು. ನಾನು ಬ್ಯಾಂಕ್‌ನಲ್ಲಿ ಈ ಚೆಕ್ ಜಮೆ ಮಾಡಿದಾಗ ಚೆಕ್ ಬೌನ್ಸ್ ಆಗಿದೆ. ನನಗೆ ಸಂಸ್ಥೆ ಪಾವತಿಸಬೇಕಾದ ಹಣ ಪಾವತಿ ಮಾಡದ ಕಾರಣ ನಾನು ದೂರು ನೀಡಿದೆ” ಎಂದು ಕೃಷ್ಣ ಮೋಹನ್ ದೂರಿದ್ದಾರೆ.

ಇನ್ನು 2022ರಲ್ಲಿ ವಿನೋದ್ ಸೆಹ್ವಾಗ್, ವಿಷ್ಣು ಮಿತ್ತಲ್ ಮತ್ತು ಸುಧೀರ್ ಮಲ್ಹೋತ್ರಾ ಅವರನ್ನು ಕೋರ್ಟ್ ಆರ್ಥಿಕ ಅಪರಾಧ ಎಸಗಿ ದೇಶದಿಂದ ಪರಾರಿಯಾದವರು (fugitives) ಎಂದು ಘೋಷಿಸಿದೆ. ಮೂವರೂ ಕೂಡಾ ಯಾವುದೇ ವಿಚಾರಣೆಗೆ ಹಾಜರಾಗದೆ ಇದ್ದಾಗ ದೂರು ದಾಖಲಿಸುವಂತೆ 2023ರ ಡಿಸೆಂಬರ್‌ನಲ್ಲಿ ಪೊಲೀಸರಿಗೆ ಕೋರ್ಟ್ ಆದೇಶಿಸಿದೆ.

ಸದ್ಯ ವಿನೋದ್ ಸೆಹ್ವಾಗ್ ಬಂಧನ ಮಾಡಲಾಗಿದೆ. ವಿನೋದ್ ಜಾಮೀನು ಅರ್ಜಿ ಸಲ್ಲಿಸಿದ್ದು ಅದರ ವಿಚಾರಣೆ ಮಾರ್ಚ್ 10ರಂದು ನಡೆಯಲಿದೆ. ಈಗಾಗಲೇ ವಿನೋದ್ ವಿರುದ್ಧ 174 ಚೆಕ್ ಬೌನ್ಸ್ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ. ಈ ಪೈಕಿ 138 ಪ್ರಕರಣದಲ್ಲಿ ವಿನೋದ್ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...