ಡಾಲರ್‌ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ: 93 ರೂ. ಗಡಿ ದಾಟಿದ ಭಾರತೀಯ ಕರೆನ್ಸಿ

Date:

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸುತ್ತಿರುವ ಬಿಕ್ಕಟ್ಟು ಹಾಗೂ ಕಚ್ಚಾ ತೈಲ ಬೆಲೆಯಲ್ಲಿನ ಹಠಾತ್ ಏರಿಕೆಯ ಪರಿಣಾಮವಾಗಿ ಭಾರತದ ರೂಪಾಯಿ ಮೌಲ್ಯವು ಶುಕ್ರವಾರ ಸಾರ್ವಕಾಲಿಕ ಕುಸಿತ ಕಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಅಮೆರಿಕದ ಡಾಲರ್‌ ಎದುರು 93 ರೂ. ಗಡಿ ದಾಟಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಗಲ್ಫ್ ರಾಷ್ಟ್ರಗಳಲ್ಲಿ ತೀವ್ರಗೊಳ್ಳುತ್ತಿರುವ ಸಂಘರ್ಷವು ಜಾಗತಿಕ ಇಂಧನ ಮೂಲ ಸೌಕರ್ಯಗಳಿಗೆ ಅಡ್ಡಿಯುಂಟುಮಾಡಿದ್ದು, ತೈಲ ಬೆಲೆಯನ್ನು ತೀವ್ರವಾಗಿ ಹೆಚ್ಚಿಸಿದೆ. ಮಾರುಕಟ್ಟೆಯ ಮೇಲಿನ ಈ ಒತ್ತಡಕ್ಕೆ ಹೂಡಿಕೆದಾರರು ಪ್ರತಿಕ್ರಿಯಿಸಿದ ಪರಿಣಾಮ, ಆರಂಭಿಕ ವಹಿವಾಟಿನಲ್ಲಿ ರೂಪಾಯಿ ಮೌಲ್ಯವು ಡಾಲರ್‌ ಎದುರು 93.15 ರೂ.ಗೆ ಕುಸಿದಿದೆ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 100 ಡಾಲರ್‌ ದಾಟಿದೆ. ಭಾರತವು ತನ್ನ ಬಳಕೆಗೆ ಅಗತ್ಯವಿರುವ ಬಹುಪಾಲು ತೈಲವನ್ನು ವಿದೇಶಗಳಿಂದಲೇ ಖರೀದಿಸುತ್ತದೆ. ಹೀಗೆ ತೈಲವನ್ನು ಖರೀದಿಸಲು ನಾವು ಅಮೆರಿಕದ ಡಾಲರ್‌ ರೂಪದಲ್ಲೇ ಹಣ ಪಾವತಿಸಬೇಕು. ತೈಲ ದುಬಾರಿಯಾದಾಗ, ಅದನ್ನು ಖರೀದಿಸಲು ನಮಗೆ ಹೆಚ್ಚಿನ ಡಾಲರ್‌ಗಳು ಬೇಕಾಗುತ್ತವೆ. ಇದು ಸಹಜವಾಗಿಯೇ ಅಮೆರಿಕನ್ ಡಾಲರ್‌ಗಳಿಗೆ ಬೇಡಿಕೆ ಸೃಷ್ಟಿಸಿ, ರೂಪಾಯಿ ಮೌಲ್ಯ ಮತ್ತಷ್ಟು ಕುಸಿಯುವಂತೆ ಮಾಡುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೌಗೋಳಿಕ-ರಾಜಕೀಯ ಅನಿಶ್ಚಿತತೆಗಳು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದ್ದು, ಹೂಡಿಕೆದಾರರು ಅಮೆರಿಕದ ಡಾಲರ್‌ನಂತಹ ‘ಸುರಕ್ಷಿತ ತಾಣ’ಗಳತ್ತ ಮುಖ ಮಾಡುತ್ತಿದ್ದಾರೆ. ಇದು ಡಾಲರ್ ಅನ್ನು ಬಲಪಡಿಸಿದ್ದು, ಉದಯೋನ್ಮುಖ ಮಾರುಕಟ್ಟೆಗಳ ಕರೆನ್ಸಿಗಳ ಮೇಲೆ ತೀವ್ರ ಒತ್ತಡ ಹೇರಿದೆ. ಇದೇ ವೇಳೆ, ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಅನಿಶ್ಚಿತತೆಯ ಕಾರಣದಿಂದಾಗಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ತಮ್ಮ ಬಂಡವಾಳವನ್ನು ಹಿಂಪಡೆಯುತ್ತಿದ್ದಾರೆ. ಹೀಗೆ ಜಾಗತಿಕ ನಿಧಿಗಳು ಹೊರಹೋಗುವಾಗ ರೂಪಾಯಿಯನ್ನು ಡಾಲರ್‌ಗೆ ಪರಿವರ್ತಿಸುವುದರಿಂದ ರೂಪಾಯಿ ಕುಸಿತದ ವೇಗ ಇನ್ನಷ್ಟು ಹೆಚ್ಚಾಗಿದೆ.

ಇದನ್ನು ಓದಿದ್ದೀರಾ? ಟ್ರಂಪ್‌ಗೆ ಚಿತ್ತಭ್ರಮೆಯೇ?; ಅಮೆರಿಕ ಅಧ್ಯಕ್ಷರ ಮಾನಸಿಕ ಆರೋಗ್ಯದ ಸುತ್ತ ಅನುಮಾನದ ಹುತ್ತ

ಅಮೆರಿಕದ ಕೇಂದ್ರ ಬ್ಯಾಂಕ್ ‘ಫೆಡರಲ್ ರಿಸರ್ವ್‌’ನ ಎಚ್ಚರಿಕೆಯ ನಿಲುವು ಕೂಡ ರೂಪಾಯಿ ಮೇಲಿನ ಒತ್ತಡವನ್ನು ಹೆಚ್ಚಿಸಿದೆ. ಬಡ್ಡಿದರ ಕಡಿತಕ್ಕೆ ಸೀಮಿತ ಅವಕಾಶಗಳಿರುವುದು ಮತ್ತು ಹಣದುಬ್ಬರದ ಭೀತಿ ಇನ್ನೂ ಜೀವಂತವಾಗಿರುವುದರಿಂದ ಡಾಲರ್ ಮೌಲ್ಯವು ಪ್ರಬಲವಾಗಿಯೇ ಉಳಿದಿದೆ. ಇದರಿಂದಾಗಿ ಜಾಗತಿಕ ಮಟ್ಟದಲ್ಲಿ ಹಣಕಾಸಿನ ಹರಿವು ಬಿಗಿಯಾಗಿದ್ದು, ಉದಯೋನ್ಮುಖ ಮಾರುಕಟ್ಟೆಗಳ ಆಕರ್ಷಣೆ ಕಡಿಮೆಯಾಗಿದೆ.

ಭಾರತದ ಪಾಲಿಗೆ ಇದು ಕೇವಲ ಕರೆನ್ಸಿ ಮಾರುಕಟ್ಟೆಯ ಸಮಸ್ಯೆಯಾಗಿ ಉಳಿದಿಲ್ಲ. ದುರ್ಬಲ ರೂಪಾಯಿ ಹಾಗೂ ದುಬಾರಿ ಕಚ್ಚಾ ತೈಲದ ಸಂಯೋಜನೆಯು ದೇಶದಲ್ಲಿ ‘ಆಮದು ಹಣದುಬ್ಬರ’ವನ್ನು ಹೆಚ್ಚಿಸುವ ಆಪಾಯವಿದೆ. ಇದರಿಂದಾಗಿ ಇಂಧನ ಹಾಗೂ ಇತರ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗಿ, ಉದ್ದಿಮೆಗಳು ಮತ್ತು ಗ್ರಾಹಕರಿಗೆ ಆರ್ಥಿಕ ಹೊರೆಯಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...