ರಷ್ಯಾ ಅಧ್ಯಕ್ಷ ಪುಟಿನ್‌ ಔತಣಕೂಟಕ್ಕೆ ರಾಹುಲ್ ಗಾಂಧಿ – ಖರ್ಗೆ ಕಡೆಗಣನೆ, ಶಶಿ ತರೂರ್‌ಗೆ ಆಹ್ವಾನ: ಕಾಂಗ್ರೆಸ್ ಆಕ್ರೋಶ

Date:

ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ ರಾತ್ರಿ ಏರ್ಪಡಿಸಿದ್ದ ಔತಣಕೂಟಕ್ಕೆ ಶಶಿ ತರೂರ್‌ ಅವರಿಗೆ ಮಾತ್ರ ಆಹ್ವಾನ ನೀಡಿರುವುದಕ್ಕೆ ಕಾಂಗ್ರೆಸ್‌ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ.

ಪಕ್ಷದ ಹಿರಿಯ ನಾಯಕರಾದ ರಾಹುಲ್‌ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡದೇ ಶಶಿ ತರೂರ್‌ ಅವರಿಗೆ ಆಹ್ವಾನ ನೀಡಿರುವುದು, ಮತ್ತು ಅದನ್ನು ಅವರು ಸ್ವೀಕರಿಸಿರುವುದು ಪಕ್ಷದೊಳಗಿನ ಅಸಮಾಧಾನವನ್ನು ಹೆಚ್ಚಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್‌ ವಕ್ತಾರ ಪವನ್‌ ಖೇರಾ, ತರೂರ್‌ ಅವರನ್ನು ಉಲ್ಲೇಖಿಸಿ ಟೀಕಿಸಿದ್ದು, “ನಮ್ಮ ನಾಯಕರನ್ನು ಆಹ್ವಾನಿಸದೇ, ತರೂರ್‌ ಅವರಿಗೆ ಮಾತ್ರ ಆಹ್ವಾನ ಕಳುಹಿಸಿರುವುದು ಆಶ್ಚರ್ಯದ ಸಂಗತಿ. ಯಾವ ಆಟ ನಡೆಯುತ್ತಿದೆ, ಯಾರು ಆಟಗಾರರು ಇದು ಎಲ್ಲರಿಗೂ ಸ್ಪಷ್ಟವಾಗಬೇಕು,” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತರೂರ್‌ ಅವರು ಮಾತ್ರ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡು, “ನನಗೆ ಬಂದ ಆಹ್ವಾನವನ್ನು ನಿರಾಕರಿಸುವ ಪ್ರಶ್ನೆಯೇ ಇಲ್ಲ. ಆದರೆ ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸದಿರುವುದು ಸರಿಯಲ್ಲ,” ಎಂದು ಸ್ಪಷ್ಟಪಡಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೋಮುವಾದಿಗಳ ಅಜೆಂಡಾ ಅರ್ಥ ಮಾಡಿಕೊಳ್ಳದ ಕಾಂಗ್ರೆಸ್‌; ಪುಂಡಾಟಕ್ಕೆ ಕಡಿವಾಣ ಯಾವಾಗ?

ಇದರ ನಡುವೆ, ಖರ್ಗೆ ಹಾಗೂ ರಾಹುಲ್‌ ಗಾಂಧಿ ಅವರನ್ನು ಭೋಜನಕೂಟಕ್ಕೆ ಆಹ್ವಾನಿಸಿಲ್ಲ ಎಂಬುದನ್ನು ಕಾಂಗ್ರೆಸ್ ಮೂಲಗಳು ಬೆಳಿಗ್ಗೆ ದೃಢಪಡಿಸಿದ್ದು, ನಂತರ ಪಕ್ಷದ ಸಂಸದ ಜೈರಾಮ್‌ ರಮೇಶ್‌ ಅವರು X ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವಿದೇಶಿ ನಿಯೋಗಗಳನ್ನು ಭೇಟಿ ಮಾಡಲು ವಿರೋಧ ಪಕ್ಷದ ನಾಯಕರಿಗೆ ಆಹ್ವಾನ ನೀಡುವ ಸಂಪ್ರದಾಯವನ್ನು ಕಡೆಗಣಿಸಿದೆ ಎಂದು ರಾಹುಲ್‌ ಗಾಂಧಿ ಮಾಡಿದ ಆರೋಪದ ಬಳಿಕ ಈ ಬೆಳವಣಿಗೆ ಸಂಭವಿಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಆದರೆ ಸರ್ಕಾರದ ಮೂಲಗಳು ಈ ಆರೋಪವನ್ನು ತಳ್ಳಿಹಾಕುತ್ತಾ, ವಿರೋಧ ಪಕ್ಷದ ನಾಯಕನಾಗಿ ರಾಹುಲ್‌ ಗಾಂಧಿ ಈಗಾಗಲೇ ಕನಿಷ್ಠ ನಾಲ್ಕು ವಿದೇಶಿ ನಾಯಕರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಿವೆ.

ಈ ವರ್ಷ ತರೂರ್‌ ಈಗಾಗಲೇ ಅನೇಕ ಸಂದರ್ಭಗಳಲ್ಲಿ ಪಕ್ಷದ ಆಂತರಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದ್ದಾರೆ. ‘ಆಪರೇಷನ್‌ ಸಿಂಧೂರ್‌’ ವೇಳೆ ಭಾರತೀಯ ನಿಯೋಗದ ಭಾಗವಾಗಿದ್ದಕ್ಕಾಗಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಲಾರ್ಡ್‌ ಮೆಕಾಲೇ ಭಾಷಣಕ್ಕೆ ಹಾಜರಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಕ್ಕಾಗಿ ಪಕ್ಷದ ಒಳಗಿನಿಂದಲೇ ಅವರಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈಗ ಆ ಪಟ್ಟಿಗೆ ಪುಟಿನ್‌ ಔತಣಕೂಟದ ಆಹ್ವಾನ ಸ್ವೀಕಾರವೂ ಸೇರಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...