ಸಚಿನ್‌ ಪೈಲಟ್‌ ಸಂತ್ರಸ್ತ ಕುಟುಂಬ ಭೇಟಿ | ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಅಸಮಾಧಾನ

Date:

  • ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ ಸಮಾಧಾನ ಹೇಳಿದ ಸಚಿನ್‌ ಪೈಲಟ್‌
  • ಸಂತ್ರಸ್ತ ಕುಟುಂಬದ ಧರಣಿಯಲ್ಲಿ ಭಾಗವಹಿಸಿದ್ದ ಬಿಜೆಪಿಯ ಸಂಸದ ಕಿರೋಡಿ

ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್ ಅವರು ಇತ್ತೀಚೆಗೆ ಸಂಪುಟ ಸಚಿವ ಮಹೇಶ್‌ ಜೋಷಿ ಅವರನ್ನು ದೂಷಿಸಿ ಆತ್ಮಹತ್ಯೆ ಮಾಡಿಕೊಂಡ ಸಂತ್ರಸ್ತನ ಕುಟುಂಬ ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಗುರುವಾರ (ಏಪ್ರಿಲ್‌ 20) ತೆರಳಿದ್ದರು.

ಮೃತ ವ್ಯಕ್ತಿ ರಾಮ್‌ಪ್ರಸಾದ್‌ ತಂದೆಯನ್ನು ಸಚಿನ್‌ ಪೈಲಟ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಕುಟುಂಬದ ಇತರರನ್ನೂ ಪೈಲಟ್‌ ಮಾತನಾಡಿಸಿದ್ದಾರೆ. ಸಚಿನ್ ಪೈಲಟ್‌ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, “ಸಂತ್ರಸ್ತನ ಆತ್ಮಹತ್ಯೆಯ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು. ಸತ್ಯಾಂಶ ಬೆಳಕಿಗೆ ಬಂದು ಸಂತ್ರಸ್ತರಿಗೆ ನ್ಯಾಯ ದೊರೆಯಬೇಕು” ಎಂದು ಹೇಳಿದ್ದಾರೆ.

ಸಂತ್ರಸ್ತ ರಾಮ್‌ಪ್ರಸಾದ್‌ ಆತ್ಮಹತ್ಯೆಗೂ ಮುನ್ನ ಹಂಚಿಕೊಂಡ ವಿಡಿಯೋ ಒಂದನ್ನು ಪೈಲಟ್‌ ಉಲ್ಲೇಖಿಸಿದ್ದಾರೆ. 38 ವರ್ಷದ ರಾಮ್‌ಪ್ರಸಾದ್‌ ಮೀನಾ ಅವರು ಭೂ ವಿವಾದಕ್ಕೆ ಸಂಬಂಧಿಸಿದ ಆರೋಪದಲ್ಲಿ ಸೋಮವಾರ (ಏಪ್ರಿಲ್‌ 17) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆತ್ಮಹತ್ಯೆಗೂ ಮುನ್ನ ರಾಮ್‌ಪ್ರಸಾದ್‌ ವಿಡಿಯೋ ಮಾಡಿ, “ಭೂ ವಿವಾದಕ್ಕೆ ಸಂಬಂಧಿಸಿ ತಮ್ಮ ಕುಟುಂಬಕ್ಕೆ ಮಹೇಶ್‌ ಜೋಷಿ ಮತ್ತು ಇತರರು ಸಮಸ್ಯೆಗಳನ್ನು ಉಂಟು ಮಾಡಿದ್ದರು. ಆತ್ಮಹತ್ಯೆಗೆ ಅವರೇ ಕಾರಣ” ಎಂದು ಆರೋಪಿಸಿದ್ದರು.

ಆದರೆ ಈ ಆರೋಪಗಳನ್ನು ಮಹೇಶ್‌ ಜೋಷಿ ತಳ್ಳಿಹಾಕಿದ್ದಾರೆ. ಸಚಿನ್‌ ಪೈಲಟ್‌, “ಎಲ್ಲ ಆರೋಪಿಗಳ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಲಿಂಗ ವಿವಾಹ ಮಾನ್ಯತೆ | ದೈಹಿಕ ಸಂಬಂಧ ಮಾತ್ರವಲ್ಲ ಭಾವನಾತ್ಮಕ ಸಂಬಂಧ ಹೊಂದಿದೆ : ಡಿ ವೈ ಚಂದ್ರಚೂಡ್

ಇದಕ್ಕೂ ಮುನ್ನ ಪೈಲಟ್‌ ಅವರ ಆಪ್ತ, ಕಾಂಗ್ರೆಸ್‌ ಶಾಸಕ ಹರೀಶ್‌ ಮೀನಾ ಅವರೂ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದರು. ಬಿಜೆಪಿಯ ಸಂಸದ ಕಿರೋಡಿ ಲಾಲ್‌ ಮೀನಾ ಸಹ ಪ್ರತಿಭಟನೆಯಲ್ಲಿ ಸೇರಿದ್ದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಲವು ನೀತಿಗಳನ್ನು ವಿರೋಧಿಸಿ ಬಹಿರಂಗವಾಗಿ ಧ್ವನಿ ಎತ್ತುತ್ತಿರುವ ಸಚಿನ್‌ ಪೈಲಟ್‌ ಅವರ ಇತ್ತೀಚಿನ ನಡೆಗಳು ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಅಸಮಾಧಾನವನ್ನುಂಟು ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...