ಸಚಿನ್ ಹೊಗಳಿದ ಬಡ ಹುಡುಗಿಯ ಬೌಲಿಂಗ್ ಶೈಲಿ: ವಿಡಿಯೋ ವೈರಲ್, ಅರಸಿ ಬಂದ ಅದೃಷ್ಟ

Date:

ಭಾರತದ ಕ್ರಿಕೆಟ್ ಪ್ರೇಮಿಗಳ ಪಾಲಿಗೆ ದೇವರು ಎಂದೇ ಖ್ಯಾತಿ ಪಡೆದ ಸಚಿನ್ ತೆಂಡೂಲ್ಕರ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ರಾಜಸ್ಥಾನದ 12 ವರ್ಷದ ಬಾಲಕಿ ಬೌಲಿಂಗ್ ಮಾಡುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

ಸಚಿನ್ ಅವರು ‘ಎಕ್ಸ್‌’ನಲ್ಲಿ ಹಂಚಿಕೊಂಡಿರುವ ಈ ವಿಡಿಯೊವನ್ನು ಇಲ್ಲಿಯವರೆಗೆ 26 ಲಕ್ಷ ಮಂದಿ ವೀಕ್ಷಿಸಿದ್ದು, 73 ಸಾವಿರ ಮಂದಿ ಲೈಕ್ ಮಾಡಿದ್ದಾರೆ, ಹಂಚಿಕೊಂಡಿದ್ದಾರೆ.

https://twitter.com/i/status/1870079347341812053

ಪುಟ್ಟ ಬಾಲಕಿ ಸುಶೀಲಾ ಮೀನಾ ಅವರು ರಾಜಸ್ಥಾನದ ಪ್ರತಾಪ್‌ಗಢ ಮೂಲದವರು ಎಂದು ತಿಳಿದುಬಂದಿದೆ. ಸುಶೀಲಾ ಬೌಲಿಂಗ್ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಗಮನ ಸೆಳೆದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಶೀಲಾ ಮೀನಾ ಬೌಲಿಂಗ್‌ ಮಾಡುತ್ತಿರುವ ವಿಡಿಯೊ ‘ಎಕ್ಸ್‌’ನಲ್ಲಿ ಹಂಚಿಕೊಂಡಿರುವ ಸಚಿನ್‌ ತೆಂಡೂಲ್ಕರ್‌, ‘ನಯವಾದ, ಶ್ರಮವಿಲ್ಲದ ಮತ್ತು ವೀಕ್ಷಿಸಲು ಸುಂದರವಾಗಿದೆ. ಸುಶೀಲಾ ಅವರ ಬೌಲಿಂಗ್ ನಿಮ್ಮದೇ (ಝಹೀರ್) ಶೈಲಿಯಿಂದ ಕೂಡಿದೆ. ನೀವು ಈ ವಿಡಿಯೊವನ್ನು ನೋಡುತ್ತೀರಾ?’ ಎಂದು ಝಹೀರ್ ಖಾನ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ಇತ್ತ ಈ ವಿಡಿಯೋವನ್ನು ಗಮನಿಸಿದ ಝಹೀರ್ ಖಾನ್ ಕೂಡ ಸುಶೀಲಾ ಮೀನಾ ಬೌಲಿಂಗ್ ಗಮನಿಸಿದ್ದು, ಆಕೆಯ ಬೌಲಿಂಗ್ ತನಗಿಂತ ತುಂಬಾ ಪರಿಣಾಮಕಾರಿಯಾಗಿದೆ. ಅವಳು ತನ್ನ ಚಿಕ್ಕ ವಯಸ್ಸಿನಲ್ಲಿ ತುಂಬಾ ಬಲಶಾಲಿಯಾಗಿ ಕಾಣುತ್ತಿದ್ದಾಳೆ ಎಂದು ಝಹೀರ್ ಖಾನ್ ಹೊಗಳಿದ್ದಾರೆ.

ಇದನ್ನು ಓದಿದ್ದೀರಾ?: ಸಿಡಿಲಬ್ಬರದ ಬ್ಯಾಟಿಂಗ್‌: ಹೊಸ ದಾಖಲೆ ಬರೆದ ಸ್ಮೃತಿ ಮಂಧಾನ

ಬಡ ಹುಡುಗಿಯ ಪರಿಶ್ರಮ, ಬೌಲಿಂಗ್ ಶೈಲಿ, ಆ ಸ್ಲೋ ಮೋಷನ್ ಬೌಲಿಂಗ್ ನೆಟ್ಟಿಗರ ಮನಸೂರೆಗೊಂಡಿದೆ. ನೋಡಿದವರೆಲ್ಲರೂ ಬಾಯ್ತುಂಬ ಹೊಗಳಿದ್ದಾರೆ. ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಪರಿಣಾಮವಾಗಿ ಕೆಲವೇ ಗಂಟೆಗಳ ಅಂತರದಲ್ಲಿ ಸಾಮಾಜಿಕ ಜಾಣತಾಣದಲ್ಲಿ ಸುಶೀಲಾ ಫೋಟೋ ಮತ್ತು ವಿಡಿಯೋ ತುಂಬಿಹೋಗಿವೆ. ಒಬ್ಬರಿಂದ ಒಬ್ಬರಿಗೆ ಹಂಚಿಕೆಯಾಗಿ, ವೈರಲ್ ಆಗಿದೆ.

ಆ ವೈರಲ್ ವಿಡಿಯೋ ಗಮನಿಸಿ ‘ಎಕ್ಸ್’​ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಆದಿತ್ಯ ಬಿರ್ಲಾ ಗ್ರೂಪ್, ‘ಫೋರ್ಸ್ ಫಾರ್ ಗುಡ್’ ಯೋಜನೆಯ ಅಡಿಯಲ್ಲಿ, ಸುಶೀಲಾಗೆ ಕ್ರಿಕೆಟ್ ತರಬೇತಿ ನೀಡುತ್ತೇವೆ. ನಾವೆಲ್ಲರೂ ಸುಶೀಲಾ ಅವರಿಗಾಗಿ ಒಂದಾಗೋಣ… ಅವಳು ಮಿಂಚುವಂತೆ ಮಾಡೋಣ ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ಸುಶೀಲಾ ಮೀನಾ ಅವರ ಕ್ರಿಕೆಟರ್ ಆಗಬೇಕೆಂಬ ಕನಸನ್ನು ನನಸಾಗಿಸಲು ಇದೀಗ ಆದಿತ್ಯ ಬಿರ್ಲಾ ಗ್ರೂಪ್ ಮುಂದಾಗಿದೆ.

susheela1

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಯಾವುದೇ ಕ್ರಿಕೆಟಿಗರನ್ನು ಹೊಗಳಿದರೆ ಅದರಲ್ಲಿ ವಿಶೇಷತೆ ಇರಲೇಬೇಕು. ಯಾವುದೇ ಉದಯೋನ್ಮುಖ ಕ್ರಿಕೆಟಿಗನ ಬಗ್ಗೆ ಮಾತನಾಡಿದರೆ, ಎಲ್ಲರೂ ಅವರತ್ತ ಗಮನ ಹರಿಸುತ್ತಾರೆ. ಅವರ ಅದೃಷ್ಟ ಬದಲಾಗುವ ಸಾಧ್ಯತೆ ಕೂಡ ಇರುತ್ತದೆ. ಈಗ 12 ವರ್ಷದ ಪುಟ್ಟ ಬಾಲಕಿಗೆ ಅಂತಹದೊಂದು ಅದೃಷ್ಟ ಒಲಿದಿದೆ.

ಒಟ್ಟಿನಲ್ಲಿ ಸಚಿನ್ ತೆಂಡೂಲ್ಕರ್ ಹಂಚಿಕೊಂಡ ಒಂದೇ ಒಂದು ವಿಡಿಯೋ ಇದೀಗ 12 ವರ್ಷದ ಪುಟ್ಟ ಬಾಲಕಿ ಸುಶೀಲಾ ಮೀನಾ ಅವರ ಭವಿಷ್ಯಕ್ಕೆ ಹೊಸ ದಾರಿ ತೋರಿಸಿಕೊಟ್ಟಿದೆ.

ಸಾಧಕರು ಎನಿಸಿಕೊಂಡವರು, ಹೀಗೆ ಗ್ರಾಮೀಣ ಯುವ ಜನತೆಯತ್ತ ಗಮನ ಹರಿಸಿ, ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿದರೆ, ಪ್ರೋತ್ಸಾಹಿಸಿದರೆ, ಏನಾಗಬಹುದು ಎಂಬುದಕ್ಕೆ ಈ ಪ್ರಕರಣವೊಂದು ಸಾಕ್ಷಿಯಾಗಿ ನಿಲ್ಲುತ್ತದೆ. ಅದು ದುಪ್ಪಟ್ಟಾಗಲಿ ಎಂದು ಆಶಿಸೋಣ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...