ಡಿಡಿ ನ್ಯೂಸ್ ಲೋಗೊ ಬಣ್ಣ ಕೇಸರೀಕರಣ: ವ್ಯಾಪಕ ಆಕ್ರೋಶ

Date:

ಕೇಂದ್ರ ಸರ್ಕಾರ ಅಧೀನದ ವಿದ್ಯುನ್ಮಾನ ಮಾಧ್ಯಮ ಸಂಸ್ಥೆ ಡಿಡಿ ನ್ಯೂಸ್‌ ಲೋಗೊ ಬಣ್ಣವನ್ನು ಕೇಸರಿ ಬಣ್ಣದೊಂದಿಗೆ ಬದಲಾಯಿಸಲಾಗಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಣೆ ಹೊರಡಿಸಿರುವ ಡಿಡಿ ನ್ಯೂಸ್, ನಮ್ಮ ಮೌಲ್ಯಗಳು ಹಾಗೆ ಉಳಿದುಕೊಂಡಿದ್ದು,ಹೊಸ ಅವತಾರದೊಂದಿಗೆ ನಾವು ಈಗ ಲಭ್ಯವಿದ್ದೇವೆ. ಎಲ್ಲ ನೂತನ ಡಿಡಿ ನ್ಯೂಸ್‌ ಅನುಭವದೊಂದಿಗೆ ಹಿಂದೆಂದಿಗಿಂತಲೂ ಹೊಸ ಸುದ್ದಿಯ ಪಯಣಕ್ಕೆ ಸಿದ್ದರಾಗಿ ಎಂದು ತಿಳಿಸಿದೆ.

ಡಿಡಿ ನ್ಯೂಸ್‌ ಲೋಗೊಗೆ ಕೇಸರಿ ಬಣ್ಣ ಕೇಸರೀಕರಣಗೊಳಿಸಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ತನ್ನ ಕೇಸರಿ ಬಣ್ಣವನ್ನು ಸರ್ಕಾರಿ ಅಧೀನದ ಮಾಧ್ಯಮ ಸಂಸ್ಥೆಗೂ ಬಳಿದಿದೆ. ಕೇಸರಿ ಬಣ್ಣವು ಹಿಂದುತ್ವದೊಂದಿಗೆ ಸಂಬಂಧ ಹೊಂದದ್ದು, ಈ ಸಿದ್ದಾಂತವನ್ನು ಮಾಧ್ಯಮ ಸಂಸ್ಥೆಯ ಮೂಲಕ ಪ್ರತಿಪಾದಿಸಲು ಹೊರಟಿದೆ ಎಂದು ಹಲವರು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ವಿಷಯವಾದ ’ಸಂವಿಧಾನ’ ಮತ್ತು ಮೋದಿ ಮಾತಿನ ಬೂಟಾಟಿಕೆ

ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಸಾರ ಭಾರತಿಯ ಮಾಜಿ ಸಿಇಒ ಜವಾಹರ್ ಸರ್ಕಾರ್, ರಾಷ್ಟ್ರೀಯ ಪ್ರಸಾರ ಮಾಧ್ಯಮ ದೂರದರ್ಶನದ ಐತಿಹಾಸಿಕವಾದ ಪ್ರಮುಖ ಲೋಗೊ ಕೇಸರೀಕರಣಗೊಂಡಿದೆ. ಪ್ರಸಾರ ಭಾರತಿಯ ಮಾಜಿ ಸಿಇಒ ಆಗಿ ಕೇಸರಿಕರಣದ ಎಚ್ಚರಿಕೆ ಹಾಗೂ ಅನುಭವದೊಂದಿಗೆ ಕಾರ್ಯಕ್ರಮವನ್ನು ನೋಡುತ್ತಿದ್ದೇನೆ. ಇದು ಇನ್ನು ಪ್ರಸಾರ ಭಾರತಿಯಲ್ಲ, ಇದು ಪ್ರಚಾರ ಭಾರತಿಯಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ದೂರದರ್ಶನವು ಪ್ರಸಾರ ಭಾರತಿಯ ಅಂಗಸಂಸ್ಥೆಯಾಗಿದ್ದು, ಆಲ್‌ ಇಂಡಿಯಾ ರೇಡಿಯೋ ಸೇರಿದಂತೆ ಹಲವು ಅಂಗಸಂಸ್ಥೆಗಳಿವೆ.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...