ಸಹಾರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ ನಿಧನ

Date:

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಹಾರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ (75) ಮಂಗಳವಾರ ಮುಂಬೈನಲ್ಲಿ ವಿಧಿವಶರಾಗಿದ್ದಾರೆ.

ಭಾನುವಾರ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಮಂಗಳವಾರ ರಾತ್ರಿ 10:30ರ ಸುಮಾರಿಗೆ ಹೃದಯಾಘಾತದಿಂದ  ಮೃತಪಟ್ಟಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು ಎಂದು ಸಹಾರಾ ಗ್ರೂಪ್ ಪ್ರಕಟಿಸಿದೆ.

ಅವರು ದೀರ್ಘಕಾಲದಿಂದ ಮೆಟಾಸ್ಟಾಟಿಕ್ ಕ್ಯಾನ್ಸರ್, ಅಧಿಕ ಬಿಪಿ ಮತ್ತು ಮಧುಮೇಹದಿಂದ ಬಳಲುತ್ತಿದ್ದರು ಎಂದು ಕಂಪನಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಬ್ರತಾ ರಾಯ್ ಅವರ ಜೀವನ

ಸುಬ್ರತಾ ರಾಯ್ ಅವರು ಜೂನ್ 10, 1948 ರಂದು ಬಿಹಾರದ ಅರಾರಿಯಾದಲ್ಲಿ ಜನಿಸಿದರು. ಗೋರಖ್‌ಪುರದ ಸರ್ಕಾರಿ ತಾಂತ್ರಿಕ ಸಂಸ್ಥೆಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದರು. 1976 ರಲ್ಲಿ, ರಾಯ್ ಅವರು ಆರ್ಥಿಕ ಒತ್ತಡದಲ್ಲಿದ್ದ ಸಹಾರಾ ಫೈನಾನ್ಸ್ ಎಂಬ ಚಿಟ್ ಫಂಡ್ ಕಂಪನಿಯನ್ನು ಖರೀದಿಸಿದರು.

1978ರ ಹೊತ್ತಿಗೆ ಅದು ಸಹಾರಾ ಇಂಡಿಯಾ ಪರಿವಾರ್ ಆಗಿ ಸುಧಾರಣೆಯಾಯಿತು. ಅದರ ನಂತರ ಅವರು ವ್ಯವಹಾರವನ್ನು ಹಣಕಾಸು, ರಿಯಲ್ ಎಸ್ಟೇಟ್, ಮಾಧ್ಯಮ ಹೀಗೆ ಹಲವು ಕ್ಷೇತ್ರಗಳಿಗೆ ವಿಸ್ತರಿಸಿದರು. 1992 ರಲ್ಲಿ ರಾಷ್ಟ್ರೀಯ ಸಹಾರಾ ಮತ್ತು ಸಹಾರಾ ಟಿವಿ ಚಾನೆಲ್ ಎಂಬ ಮಾಧ್ಯಮಗಳನ್ನು ಪ್ರಾರಂಭಿಸಿದರು. ಕೆಲವು ವರ್ಷಗಳಿಂದ ಸಹಾರಾ ಟಿವಿಯನ್ನು ಸಹಾರಾ ಒನ್ ಎಂದು ಬದಲಾಯಿಸಲಾಯಿತು.

2010ರಲ್ಲಿ ರಾಯ್ ಲಂಡನ್‌ನ ಗ್ರೋಸ್ವೆನರ್ ಹೌಸ್ ಹೋಟೆಲ್ ಮತ್ತು 2012 ರಲ್ಲಿ ನ್ಯೂಯಾರ್ಕ್‌ನ ಪ್ಲಾಜಾ ಹೋಟೆಲ್ ಅನ್ನು ಖರೀದಿಸಿದರು. 2000ರ ದಶಕದಲ್ಲಿ ಸಹಾರಾ ಇಂಡಿಯಾ ಪರಿವಾರ್ 1.2 ಮಿಲಿಯನ್ ಉದ್ಯೋಗಿಗಳನ್ನು ಹೊಂದಿತ್ತು. ಸಹಾರಾ ಗ್ರೂಪ್ ದೇಶದಲ್ಲಿ ರೈಲ್ವೆ ನಂತರ ಅತಿ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಕಂಪನಿ ಎಂದು ಗುರುತಿಸಲ್ಪಟ್ಟಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರತಿ ಮನೆಯ ಕಸ ಸಂಗ್ರಹಣೆಗೆ ತಿಂಗಳಿಗೆ ₹30 ನಿಗದಿ; ಬಿಬಿಎಂಪಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ

ಸಹಾರಾ ಗ್ರೂಪ್ 2014 ರಿಂದ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಹೂಡಿಕೆದಾರರಿಗೆ ಸಾವಿರಾರು ಕೋಟಿ ರೂಪಾಯಿ ಹಿಂದಿರುಗಿಸಲು ವಿಫಲವಾಗಿದ್ದ ಹಿನ್ನೆಲೆಯಲ್ಲಿ ಸುಬ್ರತಾ ರಾಯ್ ಅವರು ಹಲವು ವರ್ಷ ಜೈಲಿನಲ್ಲಿದ್ದರು. ಸದ್ಯ ಅವರು ಪೆರೋಲ್‌ನಲ್ಲಿದ್ದರು ಎಂದು ಸಹಾರಾ ಗ್ರೂಪ್ ಪ್ರಕಟಿಸಿದೆ.

ಸುಬ್ರತಾ ರಾಯ್ ಅವರ ಪರಂಪರೆ ಹಾಗೂ ಉದ್ಯಮದಲ್ಲಿ ಹೊಂದಿದ್ದ ಅವರ ದೃಷ್ಟಿಕೋನವನ್ನು ಮುಂದುವರೆಸಿಕೊಂಡು ಹೋಗಲಾಗವುದು ಎಂದು ಸಹಾರಾ ಗ್ರೂಪ್ ತಿಳಿಸಿದೆ.

ಸಹಾರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ ಅವರಿಗೆ ಪತ್ನಿ ಸ್ವಪ್ನಾ ರಾಯ್ ಮತ್ತು ಸುಶಾಂತೋ ರಾಯ್ ಮತ್ತು ಸೀಮಂತೋ ರಾಯ್ ಎಂಬಿಬ್ಬರು ಪುತ್ರರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...