ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣ; ಶಂಕಿತ ಆರೋಪಿ ಮಧ್ಯಪ್ರದೇಶದಲ್ಲಿ ಬಂಧನ

Date:

ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಮಧ್ಯಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. 54 ವರ್ಷದ ನಟನ ಮೇಲೆ ಮುಂಬೈನಲ್ಲಿರುವ ನಿವಾಸದಲ್ಲಿ ವ್ಯಕ್ತಿಯೋರ್ವ ಚಾಕುವಿನಿಂದ ಇರಿದಿದ್ದ. ಸದ್ಯ ಸೈಫ್ ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.

ಮುಂಬೈನಿಂದ ಹೌರಾಕ್ಕೆ ತೆರಳುವ ಜ್ಞಾನೇಶ್ವರಿ ಎಕ್ಸ್‌ಪ್ರೆಸ್‌ನಲ್ಲಿ ತೆರಳುತ್ತಿದ್ದ ಶಂಕಿತ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ರೈಲ್ವೆ ತಂಡ (ಆರ್‌ಪಿಎಫ್) ತಿಳಿಸಿದರುವುದಾಗಿ ವರದಿಯಾಗಿದೆ. ಇನ್ನು ಆರೋಪಿಯನ್ನು ಆಕಾಶ್ ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ? ಸೈಫ್ ಅಲಿ ಖಾನ್ ಚೇತರಿಕೆ, ಮೂರು ದಿನಗಳಲ್ಲಿ ಡಿಸ್ಚಾರ್ಜ್: ವೈದ್ಯರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಂಬೈ ಪೊಲೀಸರು ಶಂಕಿತ ಆರೋಪಿಯ ಚಿತ್ರ, ರೈಲು ಸಂಖ್ಯೆ, ಸ್ಥಳದ ವಿವರವನ್ನು ಆರ್‌ಪಿಎಫ್‌ಗೆ ಕಳುಹಿಸಿದ್ದರು. ಪ್ರಸ್ತುತ ಆರೋಪಿ ಆಕಾಶ್ ಆರ್‌ಪಿಎಫ್‌ ವಶದಲ್ಲಿದ್ದಾನೆ. ಮುಂಬೈ ಪೊಲೀಸರು ಬಂದು ಆತನೇ ಆರೋಪಿಯೇ ಎಂಬುದನ್ನು ವಿಚಾರಣೆ ನಡೆಸಿ ಖಚಿತಪಡಿಸಲಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಟ ಸೈಫ್ ಆರೋಗ್ಯ ಸುಧಾರಿಸುತ್ತಿದ್ದು, ಇನ್ನೆರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು ಎಂದು ವೈದ್ಯರು ಶನಿವಾರ ತಿಳಿಸಿದ್ದಾರೆ.

ಸೈಫ್ ಪತ್ನಿ ನಟಿ ಕರೀನಾ ಕಪೂರ್ ವಿಚಾರಣೆಯನ್ನು ಪೊಲೀಸರು ಮಾಡಿದ್ದು, “ಆರೋಪಿ ಸೈಫ್ ಮೇಲೆ ಹಲವು ಬಾರಿ ಚಾಕುವಿನಿಂದ ಇರಿದನು. ಆತ ಆಕ್ರೋಶದಲ್ಲಿದ್ದ. ಸೈಫ್ ಅನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವುದೇ ನಮ್ಮ ಆದ್ಯತೆಯಾಗಿತ್ತು” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...