ಕಾರು ಬಾಂಬ್‌ ಸ್ಫೋಟಿಸಿ ಕೊಲ್ಲುತ್ತೇವೆ; ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ

Date:

ಬಾಲಿವುಡ್ ನಟ ಸಲ್ಮಾನ್ ಖಾನ್‌ ಅವರಿಗೆ ಸೋಮವಾರ ಮತ್ತೆ ಜೀವ ಬೆದರಿಕೆ ಸಂದೇಶ ಬಂದಿದೆ. ಮುಂಬೈನ ವರ್ಲಿಯಲ್ಲಿರುವ ಸಾರಿಗೆ ಇಲಾಖೆಗೆ ವಾಟ್ಸಾಪ್ ಸಂದೇಶದ ಮೂಲಕ ಈ ಕೊಲೆ ಬೆದರಿಕೆಯನ್ನು ಕಳುಹಿಸಲಾಗಿದೆ. ಕಾರು ಬಾಂಬ್‌ ಬಳಸಿ ಕೊಲ್ಲುವುದಾಗಿ ಎಚ್ಚರಿಕೆ ನೀಡಲಾಗಿದೆ.

ಬೆದರಿಕೆ ಸಂದೇಶದಲ್ಲಿ, ಆರೋಪಿಯು ಸಲ್ಮಾನ್ ಖಾನ್ ಅವರ ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗಳ ಮನೆಗೆ ನುಗ್ಗಿ ಅವರ ಕಾರನ್ನು ಬಾಂಬ್‌ನಿಂದ ಸ್ಫೋಟಿಸುವ ಮೂಲಕ ಕೊಲ್ಲುವುದಾಗಿ ಎಚ್ಚರಿಸಿದ್ದಾನೆ. ಸದ್ಯ ಸಂದೇಶ ಕಳುಹಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ವರ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿದ್ದೀರಾ? ಮನೆ, ಶೂಟಿಂಗ್ ಇಷ್ಟೇ ಬದುಕು: ಜೀವ ಬೆದರಿಕೆ ಬಗ್ಗೆ ಮೌನ ಮುರಿದ ಸಲ್ಮಾನ್ ಖಾನ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳ ಪತ್ತೆಗಾಗಿ ತನಿಖೆ ನಡೆಯುತ್ತಿದೆ. 1998ರ ಕೃಷ್ಣಮೃಗ ಗುಂಡಿನ ದಾಳಿ ಪ್ರಕರಣದಲ್ಲಿ ಸಲ್ಮಾನ್ ಖಾನ್ ಶಿಕ್ಷೆಗೊಳಗಾದ ಬಳಿಕ ನಟನಿಗೆ ಅನೇಕೆ ಕೊಲೆ ಬೆದರಿಕೆಗಳು ಬಂದಿವೆ. ಬಿಷ್ಣೋಯ್ ಸಮುದಾಯವು ಕೃಷ್ಣಮೃಗಗಳನ್ನು ಪವಿತ್ರವೆಂದು ಪರಿಗಣಿಸುತ್ತದೆ. ಆದ್ದರಿಂದ ಕೃಷ್ಣಮೃಗದ ಮೇಲೆ ಗುಂಡಿನ ದಾಳಿ ನಡೆಸಿದ ಸಲ್ಮಾನ್ ಖಾನ್ ಹತ್ಯೆಗೆ ಯತ್ನಿಸಲಾಗುತ್ತಿದೆ.

ಕಳೆದ ವರ್ಷ ಏಪ್ರಿಲ್ 14ರಂದು, ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಮೇಲೆ ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಇಂದು (ಏಪ್ರಿಲ್ 14) ಮತ್ತೆ ಕೊಲೆ ಬೆದರಿಕೆಯನ್ನು ಹಾಕಲಾಗಿದೆ. ಕಳೆದ ವರ್ಷ ಗುಂಡಿನ ದಾಳಿ ಬಳಿಕ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಫೇಸ್‌ಬುಕ್ ಪೋಸ್ಟ್‌ ಮಾಡಿ ಗುಂಡಿನ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಹಾಗೆಯೇ ಮಹಾರಾಷ್ಟ್ರ ಸಚಿವ ಬಾಬಾ ಸಿದ್ದಿಕ್ ಅವರ ಹತ್ಯೆಗೆ ತಾವೇ ಕಾರಣ ಎಂದು ಹೇಳಿಕೊಂಡಿತ್ತು.

ಜೈಲಿನಲ್ಲಿರುವ ಈ ಗ್ಯಾಂಗ್‌ಸ್ಟರ್, ಸಲ್ಮಾನ್ ಖಾನ್‌ ಮೇಲೆ ದೀರ್ಘಕಾಲದ ದ್ವೇಷವನ್ನು ಹೊಂದಿದ್ದು ಈ ಹಿಂದೆ ಹಲವು ಬಾರಿ ಬೆದರಿಕೆ ಹಾಕಿದ್ದಾನೆ. ಈಗಾಗಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ 18 ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸದ್ಯ ಸಲ್ಮಾನ್ ಖಾನ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...