ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ | ರಾಯಚೂರು ಯುವಕನ ಬಂಧನ!

Date:

ಬಿಷ್ಣೋಯ್ ಹೆಸರು ಇರುವ ಹಾಡಿನ ವಿಚಾರದಲ್ಲಿ ಸಲ್ಮಾನ್‌ ಖಾನ್‌ ಅವರಿಗೆ ಬಂದ ಜೀವ ಬೆದರಿಕೆ ಪ್ರಕರಣಕ್ಕೆ ತಿರುವು ಲಭಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನ ಮುಂಬರುವ ಸಿನಿಮಾದ ಗೀತರಚನೆಕಾರ, ರಾಯಚೂರು ಯುವಕನನ್ನು ಬಂಧಿಸಲಾಗಿದೆ.

ಬಿಷ್ಣೋಯ್ ಹೆಸರು ಇರುವ ಗೀತ ರಚನೆಕಾರ ಮತ್ತು ನಟ ಸಲ್ಮಾನ್ ಖಾನ್ ಉಳಿಯಬೇಕಾದರೆ ಐದು ಕೋಟಿ ರೂಪಾಯಿ ಪಾವತಿ ಮಾಡುವಂತೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ನಟ ಮತ್ತು ಗೀತೆರಚನೆಕಾರ 24 ವರ್ಷದ ಸೊಹೈಲ್ ಪಾಷಾಗೆ ಕೊಲೆ ಬೆದರಿಕೆ ಬಂದಿತ್ತು. ಆದರೆ ತನಿಖೆ ನಡೆಸಿದ ಪೊಲೀಸರು ಸೊಹೈಲ್ ಪಾಷಾ ಅವರನ್ನು ಬಂಧಿಸಿದ್ದಾರೆ.

ಗೀತ ರಚನೆಕಾರ ಬಿಷ್ಣೋಯ್ ಹೆಸರು ಉಲ್ಲೇಖಿಸಿರುವ ತನ್ನ ಹಾಡಿಗೆ ಪ್ರಚಾರ ಸಿಗಬೇಕು ಮತ್ತು ತಾನು ಪ್ರಸಿದ್ಧಿ ಪಡೆಯಬೇಕು ಎಂಬ ಕಾರಣಕ್ಕೆ ಮುಂಬೈ ಸಂಚಾರ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಲಾರೆನ್ಸ್ ಗ್ಯಾಂಗ್‌ನಿಂದ​ ಮತ್ತೊಮ್ಮೆ ಕೊಲೆ ಬೆದರಿಕೆ

ನವೆಂಬರ್ 7ರಂದು ನಗರದ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಸಂದೇಶ ಬಂದಿದೆ. 5 ಕೋಟಿ ರೂಪಾಯಿ ನೀಡದಿದ್ದರೆ ‘ಮೈನ್ ಸಿಕಂದರ್ ಹನ್’ ಹಾಡಿನಲ್ಲಿರುವ ಸಲ್ಮಾನ್ ಖಾನ್ ಮತ್ತು ಆ ಹಾಡಿನ ಗೀತರಚನೆಕಾರನನ್ನು ಕೊಲೆ ಮಾಡುವುದಾಗಿ ಉಲ್ಲೇಖಿಸಲಾಗಿತ್ತು. ಈ ಸಂದೇಶ ಬಂದ ಕೆಲವೇ ದಿನಗಳಲ್ಲಿ ಪೊಲೀಸರು ರಾಯಚೂರಿನಲ್ಲಿ ಸೊಹೈಲ್ ಪಾಷಾ ಅವರನ್ನು ಬಂಧಿಸಿದ್ದಾರೆ.

ರಾಯಚುರು

“ಇನ್ನು ಮುಂದೆ ಹಾಡು ಬರೆಯಲಾಗದ ಸ್ಥಿತಿಗೆ ಗೀತರಚನೆಕಾರ ತಲುಪುತ್ತಾರೆ. ಸಲ್ಮಾನ್ ಖಾನ್ ಅವರಿಗೆ ಧೈರ್ಯವಿದ್ದರೆ ಅವರನ್ನು ಉಳಿಸಿ” ಎಂದು ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

ಆರಂಭದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಾಪ್ ಸಂಖ್ಯೆಯ ನೋಂದಾವಣಿ ಪರಿಶೀಲಿಸಿ ವೆಂಕಟೇಶ್ ನಾರಾಯಣ್ ಎಂಬ ವ್ಯಕ್ತಿಯ ವಿಚಾರಣೆ ನಡೆಸಲಾಗಿತ್ತು. ಅದಾದ ಬಳಿಕ ಆ ವ್ಯಕ್ತಿಯ ಬಳಿ ವಾಟ್ಸಾಪ್ ಇಲ್ಲದಿರುವುದು ಗಮನಕ್ಕೆ ಬಂದಿದೆ. ತನಿಖೆ ಮುಂದುವರಿಸಿದ ಪೊಲೀಸರು ಗೀತರಚನೆಕಾರನ ಬಂಧಿಸಿದ್ದಾರೆ.

1998ರ ಕೃಷ್ಣಮೃಗ ಬೇಟೆ ಪ್ರಕರಣದ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ತಂಡದಿಂದ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಬರುತ್ತಿದೆ. ಏಪ್ರಿಲ್‌ನಲ್ಲಿ ಮುಂಬೈನಲ್ಲಿರುವ ಅವರ ಮನೆಯ ಹೊರಗೆ ಗುಂಡು ಹಾರಿಸಲಾಗಿದೆ. ಇದಾದ ಬಳಿಕ ನಟನ ಭದ್ರತೆಯನ್ನು ಹೆಚ್ಚಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...