20,000 ಕೋಟಿ ರೂ. ಟೆಂಡರ್ ರದ್ದುಗೊಳಿಸಲು ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಮನವಿ

Date:

ಮಾದರಿ ನೀತಿ ಸಂಹಿತೆಗೂ ಮುನ್ನ ಮಂಜೂರಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 20 ಸಾವಿರ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಟೆಂಡರ್‌ ಆದೇಶಕ್ಕೆ ತಡೆ ನೀಡಬೇಕೆಂದು ಹಿರಿಯ ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್ ನೇತೃತ್ವದ ಕಾಂಗ್ರೆಸ್ ನಿಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿದೆ.

20 ಸಾವಿರ ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳಿಗಾಗಿ ಟೆಂಡರ್‌ ಕರೆಯಲು ಅನುವು ಮಾಡಿಕೊಟ್ಟರೆ, ಮತದಾನದ ದಿನದಂದು ಮತದಾನದ ನಡವಳಿಕೆಯ ಮೇಲೆ ಪ್ರಭಾವ ಬೀರಲು ಅದನ್ನು ದುರುಪಯೋಗಪಡಿಸಿಕೊಳ್ಳಲಾಗುವುದು. ಅಲ್ಲದೆ ಆಡಳಿತಾರೂಢ ಪಕ್ಷದ ಶಾಸಕರು, ಸಂಸದರು ಶೇ 40ಕ್ಕಿಂತಲೂ ಅಧಿಕ ಮೊತ್ತದ ಕಿಕ್‌ ಬ್ಯಾಕ್‌ ಸಂಗ್ರಹಿಸಲಿದ್ದಾರೆ. ಈ ಕಿಕ್‌ಬ್ಯಾಕ್‌ ಹಣವನ್ನು ಮುಂಬರುವ ಚುನಾವಣಾ ಅಕ್ರಮಗಳಿಗೆ ಬಳಸಲಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅಧಿಕಾರಿಗಳು, ಸಚಿವರು, ಶಾಸಕರು, ಸಂಸದರು ಹಿಂದಿನ ದಿನಾಂಕ ಹಾಕಿ ಟೆಂಡರ್‌ ಕರೆದು, ಅವರಿಂದ ಕಿಕ್‌ಬ್ಯಾಕ್‌ ಪಡೆಯುತ್ತಿದ್ದಾರೆ. ಈ ಹಿನ್ನಲೆ ಸರ್ಕಾರದ ಈ ನಡೆಯನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿದೆ. ಹೀಗಾಗಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆಗಾಗಿ ಇತ್ತೀಚಿಗೆ ಹೊರಡಿಸಲಾದ ಟೆಂಡರ್‌ಗಳನ್ನು ರದ್ದುಗೊಳಿಸುವಂತೆ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...