ಸ್ಯಾಮ್ ಪಿತ್ರೋಡಾ ಜನಾಂಗೀಯ ನಿಂದನೆ ಹೇಳಿಕೆ ಖಂಡಿಸಿದ ಕಾಂಗ್ರೆಸ್

Date:

ಭಾರತದ ವಿವಿಧ ಭಾಗದವರನ್ನು ಚೀನಿಯರು, ಆಫ್ರಿಕನ್ನರು, ಅರಬ್ಬರಿಗೆ ಹೋಲಿಸಿದ ಕಾಂಗ್ರೆಸ್ ಸಾಗರೋತ್ತರ ಭಾರತದ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ವಿರುದ್ಧ ಬಿಜೆಪಿ ಟೀಕಿಸಿದ ಬೆನ್ನಲ್ಲೆ ಕಾಂಗ್ರೆಸ್ ಅಂತರವನ್ನು ಕಾಯ್ದುಕೊಂಡಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್, ಭಾರತದ ವೈವಿದ್ಯತೆಯ ಬಗ್ಗೆ ಹೋಲಿಕೆ ಮಾಡಿರುವ ಸ್ಯಾಮ್‌ ಪಿತ್ರೋಡಾ ಅವರ ಹೇಳಿಕೆ ಅತ್ಯಂತ ದುರಾದೃಷ್ಟಕರ ಹಾಗೂ ಸ್ವೀಕಾರ್ಹವಲ್ಲ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಈ ಹೇಳಿಕೆಯಿಂದ ಸಂಪೂರ್ಣವಾಗಿ ಅಂತರ ಕಾಯ್ದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.

ಮಾಧ್ಯಮವೊಂದರಲ್ಲಿ ಸಂದರ್ಶನ ನೀಡಿದ್ದ ಸ್ಯಾಮ್‌ ಪಿತ್ರೋಡಾ, “ನಾವು ಭಾರತದಂತಹ ವೈವಿದ್ಯತೆ ದೇಶವನ್ನು ಒಟ್ಟಾಗಿ ಹಿಡಿದಿಟ್ಟುಕೊಳ್ಳಬಹುದು.ಈಶಾನ್ಯ ಭಾರತದಲ್ಲಿರುವವರು ಚೀನಿಗಳಂತೆ, ಪಶ್ಚಿಮ ಭಾಗದವರು ಅರಬ್ಬರಂತೆ,ಉತ್ತರದವರು ಶ್ವೇತ ವರ್ಣದವರಂತೆ ಹಾಗೂ ದಕ್ಷಿಣದವರು ಆಫ್ರಿಕಾದವರಂತೆ ಕಾಣುತ್ತಾರೆ. ಇದು ಅಂತಹ ದೊಡ್ಡ ವಿಷಯವಾಗುವುದಿಲ್ಲ. ನಾವೆಲ್ಲರು ಸೋದರ ಸೋದರಿಯರು” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

ದೇಶದ ಜನರು ವಿವಿಧ ಭಾಷೆಗಳು, ಉಡುಪುಗಳು ಹಾಗೂ ಆಹಾರವನ್ನು ಗೌರವಿಸುತ್ತಾರೆ. ಆ ಭಾರತದಲ್ಲಿ ನಂಬಿಕೆ ಹೊಂದಿದ್ದು, ಪ್ರತಿಯೊಬ್ಬರಿಗೂ ವಾಸಿಸಲು ಸ್ಥಳವಿದ್ದು, ಎಲ್ಲರೂ ರಾಜಿ ಮಾಡಿಕೊಂಡು ಬದುಕುತ್ತಾರೆ ಎಂದು ಸ್ಯಾಮ್‌ ಪಿತ್ರೋಡಾ ತಿಳಿಸಿದ್ದರು.

“ಭಾರತವು ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಭ್ರಾತೃತ್ವದೊಂದಿಗೆ ಬೇರೂರಿದೆ. ಆದರೆ ಈಗ ಸ್ವಾತಂತ್ರ್ಯವು ರಾಮ ನವಮಿ, ರಾಮ ದೇಗುಲದೊಂದಿಗೆ ಸವಾಲು ಎದುರಾಗಿದೆ. ಪ್ರಧಾನಿ ನರೇಂದ್ರ ಮೋದಿ ಎಲ್ಲ ಸಮಯದಲ್ಲೂ ದೇಗುಲಕ್ಕೆ ತೆರಳುತ್ತಾರೆ. ಅವರು ಭಾರತದ ನಾಯಕರಂತೆ ಮಾತನಾಡದೆ, ಬಿಜೆಪಿಯವರಂತೆ ಮಾತನಾಡುತ್ತಾರೆ” ಎಂದು ಪಿತ್ರೋಡಾ ಹೇಳಿದ್ದರು.

ಸ್ಯಾಮ್‌ ಪಿತ್ರೋಡಾ ಈ ಮೊದಲು ಪಿತ್ರಾರ್ಜಿತ ತೆರಿಗೆಯ ಬಗ್ಗೆ ಮಾತನಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿತ್ತು. ಬಿಜೆಪಿ ನಾಯಕರು ಪಿತ್ರೋಡಾ ಅವರ ಪಿತ್ರಾರ್ಜಿತ ತೆರಿಗೆಯ ಹೇಳಿಕೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...