ಉತ್ತರ ಪ್ರದೇಶ ಸಂಭಲ್‌ ಹಿಂಸಾಚಾರ | ನಾಲ್ವರು ಸಾವು; ನಿರ್ಬಂಧ, ಸಂಸದರ ವಿರುದ್ಧ ಪ್ರಕರಣ

Date:

ಉತ್ತರ ಪ್ರದೇಶದ ಸಂಭಲ್‌ನ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವಿರೋಧಿಸಿ ಪ್ರತಿಭಟನಕಾರರು ನಡೆಸಿದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟಿದ್ದು, ಭದ್ರತಾ ಸಿಬ್ಬಂದಿ ಸೇರಿ ಹಲವರು ಗಾಯಗೊಂಡಿದ್ದಾರೆ. ಹೀಗಾಗಿ ಜಿಲ್ಲಾಡಳಿತ ನಿಷೇಧಾಜ್ಞೆ ವಿಧಿಸಿದ್ದು, ನ.30ರವರೆಗೆ ಹೊರಗಿನ ಜನರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶಿಸಿದೆ.

‘ತಕ್ಷಣದಿಂದ ಜಾರಿಯಾಗುವಂತೆ, ಸಕ್ಷಮ ಅಧಿಕಾರಿಯ ಅನುಮತಿಯಿಲ್ಲದೆ ಹೊರಗಿನವರು, ಇತರ ಸಾಮಾಜಿಕ ಸಂಘಟನೆಗಳು ಅಥವಾ ಜನಪ್ರತಿನಿಧಿಗಳು ಜಿಲ್ಲೆಯ ಗಡಿಯನ್ನು ಪ್ರವೇಶಿಸುವಂತಿಲ್ಲ’ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

ಹಾಗೆಯೇ ಪ್ರದೇಶದಲ್ಲಿ ಇಂಟರ್‌ನೆಟ್‌ ಸ್ಥಗಿತಗೊಳಿಸಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಲೋಕಸಭಾ ಸದಸ್ಯ ಜಯಾವುರ್‌ ರೆಹಮಾನ್‌ ಬಾರ್ಕ್‌ ಹಾಗೂ ಸ್ಥಳೀಯ ಶಾಸಕ ಇಕ್ಬಾಲ್‌ ಮೆಹಮೊದ್‌ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇವರ ವಿರುದ್ಧ ಹಿಂಸಾಚಾರ ಪ್ರಚೋದನೆ,ಜನರನ್ನು ಗುಂಪು ಸೇರಿಸುವಿಕೆ ಹಾಗೂ ಅಶಾಂತಿ ಉಂಟು ಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?

ಜಾಮಾ ಮಸೀದಿಯಿದ್ದ ಜಾಗದಲ್ಲಿ ಪುರಾತನ ಹಿಂದೂ ದೇವಾಲಯವಿತ್ತು, ಮೊಘಲ್ ದೊರೆ ಬಾಬರ್ ಆಳ್ವಿಕೆ ಅವಧಿಯಲ್ಲಿ ದೇಗುಲ ಕೆಡವಿ ಮಸೀದಿ ಕಟ್ಟಲಾಗಿದೆ. ದೇಗುಲಕ್ಕೆ ಸೇರಿದ ಅನೇಕ ಗುರುತುಗಳೂ ಅಲ್ಲಿವೆ ಎಂದು ಸುಪ್ರೀಂ ಕೋರ್ಟ್‌ ವಕೀಲ ವಿಷ್ಣು ಶಂಕರ್ ಜೈನ್ ಅವರು ಸ್ಥಳೀಯ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌, ವಿಡಿಯೋ ಚಿತ್ರೀಕರಣ ಮತ್ತು ಛಾಯಾಗ್ರಹಣ ಸಮೇತ ಸಮೀಕ್ಷೆ ನಡೆಸಿ, ವರದಿ ಸಲ್ಲಿಸುವಂತೆ ಆದೇಶಿಸಿತ್ತು.

“ಸಮೀಕ್ಷೆಯು ಶಾಂತಿಯುತವಾಗಿಯೇ ನಡೆಯುತ್ತಿತ್ತು. ಮಸೀದಿ ಸಮೀಪ ಜಮಾಯಿಸಿದ್ದ ಜನರು ಘೋಷಣೆಗಳನ್ನು ಕೂಗಲು ಆರಂಭಿಸಿದರು. ಅವರನ್ನು ಚದುರಿಸಲು ಪೊಲೀಸರು ಮುಂದಾದಾಗ, ದುಷ್ಕರ್ಮಿಗಳ ಗುಂಪೊಂದು ಪೊಲೀಸರತ್ತ ಕಲ್ಲುಗಳನ್ನು ತೂರಲು ಆರಂಭಿಸಿತು. ನಂತರ ಘರ್ಷಣೆ ಹಿಂಸಾರೂಪ ಪಡೆಯಿತು’ ಎಂದು ಮೊರಾದಾಬಾದ್ ವಿಭಾಗೀಯ ಆಯುಕ್ತ ಆಂಜನೇಯ ಸಿಂಗ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...