ಸಲಿಂಗ ವಿವಾಹ | ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಸಂಜೀವ್ ಖನ್ನಾ

Date:

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದ 2023ರ ಅಕ್ಟೋಬರ್ 17ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯಿಂದ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಿಂದೆ ಸರಿದಿದ್ದಾರೆ.

ಸಲಿಂಗ ವಿವಾಹಕ್ಕೆ ಸಂಬಂಧಿಸಿದ ಈ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಬುಧವಾರ ನಡೆಸಬೇಕಾಗಿತ್ತು. ಆದರೆ ಬುಧವಾರ ಅರ್ಜಿ ವಿಚಾರ ನಡೆದಿರಲಿಲ್ಲ. ಐವರು ನ್ಯಾಯಾಧೀಶರ ಪೀಠದ ನ್ಯಾಯಾಧೀಶರಲ್ಲಿ ಒಬ್ಬರಾದ ಸಂಜೀವ್ ಖನ್ನಾ ವಿಚಾರಣೆಯಿಂದ ಹಿಂದೆ ಸರಿದಿರುವುದೇ ಅರ್ಜಿ ವಿಚಾರಣೆ ನಡೆಯದಿರಲು ಕಾರಣ ಎಂದು ವರದಿಯಾಗಿದೆ.

ಐವರು ನ್ಯಾಯಾಧೀಶರ ಪೀಠದಲ್ಲಿದ್ದ ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ವೈಯಕ್ತಿಕ ಕಾರಣವನ್ನು ಉಲ್ಲೇಖಿಸಿ ಸಲಿಂಗ ವಿವಾಹದ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಸಲಿಂಗ ವಿವಾಹ | ಬಹಿರಂಗ ವಿಚಾರಣೆಗಾಗಿ ಸುಪ್ರೀಂಗೆ ಅರ್ಜಿದಾರರ ಮನವಿ

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠವು 2023ರ ಅಕ್ಟೋಬರ್‌ನಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿ ಆದೇಶ ನೀಡಿತ್ತು.

ನ್ಯಾಯಮೂರ್ತಿಗಳಾದ ಕೌಲ್ ಮತ್ತು ಭಟ್ ಅವರ ನಿವೃತ್ತಿಯ ನಂತರ, ನ್ಯಾಯಮೂರ್ತಿಗಳಾದ ಖನ್ನಾ ಮತ್ತು ಬಿವಿ ನಾಗರತ್ನ ಅವರನ್ನು ಒಳಗೊಂಡ ಐವರು ನ್ಯಾಯಾಧೀಶರ ಪೀಠವನ್ನು ಪುನರ್ರಚಿಸಲಾಗಿದೆ. ಪೀಠವು ಜುಲೈ 10ರಂದು ಮರುಪರಿಶೀಲನಾ ಅರ್ಜಿ ವಿಚಾರಣೆ ನಡೆಸಬೇಕಾಗಿತ್ತು.

ನ್ಯಾಯಮೂರ್ತಿ ಖನ್ನಾ ಅರ್ಜಿ ಪರಿಶೀಲನೆಯಿಂದ ಹಿಂದೆ ಸರಿದ ಕಾರಣ ಮುಖ್ಯ ನ್ಯಾಯಾಧೀಶರು ಮತ್ತೆ ಪೀಠವನ್ನು ಪುನರ್ರಚಿಸಬೇಕಾಗುತ್ತದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...