ಸಲಿಂಗ ವಿವಾಹ ಮಾನ್ಯತೆ | ದೈಹಿಕ ಸಂಬಂಧ ಮಾತ್ರವಲ್ಲ ಭಾವನಾತ್ಮಕ ಸಂಬಂಧ ಹೊಂದಿದೆ : ಡಿ ವೈ ಚಂದ್ರಚೂಡ್

Date:

  • ಸಲಿಂಗ ವಿವಾಹ ವಿಚಾರವನ್ನು ಚರ್ಚಿಸಲು ಸಂಸತ್ ಸರಿಯಾದ ವೇದಿಕೆ ಎಂದ ಸುಪ್ರೀಂ ಕೋರ್ಟ್
  • ರಾಜ್ಯಗಳಿಗೆ ಪತ್ರ ಬರೆದಿರುವ ಕೇಂದ್ರ ಹತ್ತು ದಿನಗಳೊಳಗೆ ಕಾಯ್ದೆಯ ಬಗ್ಗೆ ಅಭಿಪ್ರಾಯ ತಿಳಿಸುವಂತೆ ಹೇಳಿದೆ

ನಾವು ಈ ಸಲಿಂಗ ಸಂಬಂಧಗಳನ್ನು ಕೇವಲ ದೈಹಿಕ ಸಂಬಂಧಗಳಾಗಿ ನೋಡುತ್ತೇವೆ, ಆದರೆ ಅಲ್ಲಿ ಹೆಚ್ಚು ಸ್ಥಿರವಾದ, ಭಾವನಾತ್ಮಕ ಸಂಬಂಧವೂ ಇರುತ್ತದೆ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ತಿಳಿಸಿದ್ದಾರೆ.

ಸಲಿಂಗ ವಿವಾಹ ಮಾನ್ಯತೆ ವಿಚಾರದಲ್ಲಿ ಐವರು ನ್ಯಾಯಾಧೀಶರ ಪೀಠ ನಡೆಸುತ್ತಿರುವ ಮೂರನೇ ದಿನದ ವಿಚಾರಣೆಯಲ್ಲಿ ಈ ರೀತಿ ಹೇಳಿದ್ದಾರೆ.

“ಸಲಿಂಗ ವಿವಾಹವನ್ನು ಕಾನೂನಾತ್ಮಕವಾಗಿ ಜಾರಿಗೊಳಿಸುವುದಕ್ಕೆ ನಾವು ಮದುವೆಯ ಕಲ್ಪನೆಯನ್ನು ಮರುವ್ಯಾಖ್ಯಾನಿಸಬೇಕು. ಮದುವೆಯಾಗುವುದಕ್ಕೆ ಎರಡು ಭಿನ್ನ ಲಿಂಗಕ್ಕೆ ಸೇರಿದವರು ಅಗತ್ಯವೇ” ಎಂದು ಮುಖ್ಯ ನ್ಯಾಯಮೂರ್ತಿ ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“1954 ರಲ್ಲಿ ವಿಶೇಷ ವಿವಾಹ ಕಾಯ್ದೆ ಜಾರಿಗೆ ಬಂದ ನಂತರ ಕಳೆದ 69 ವರ್ಷಗಳಲ್ಲಿ ಕಾನೂನು ಗಮನಾರ್ಹವಾಗಿ ವಿಕಸನಗೊಂಡಿದೆ. ಇದು ಅವರ ವೈಯಕ್ತಿಕ ಕಾನೂನುಗಳನ್ನು ಅನುಸರಿಸಲು ಇಷ್ಟಪಡದ ಜನರಿಗೆ ನಾಗರಿಕ ವಿವಾಹದ ರೂಪವನ್ನು ಒದಗಿಸಿದೆ. ಸಲಿಂಗಕಾಮವನ್ನು ಅಪರಾಧವಲ್ಲ ಎಂದು ಹೇಳುವ ಮೂಲಕ ನಾವು ಒಂದೇ ಲಿಂಗಕ್ಕೆ ಸೇರಿದ ಇಬ್ಬರು ವಯಸ್ಕರ ಸಂಬಂಧವನ್ನು ಗುರುತಿಸುವುದು ಮಾತ್ರವಲ್ಲದೆ, ಒಂದೇ ಲಿಂಗಕ್ಕೆ ಸೇರಿದವರ ನಡುವಿನ ಸಂಬಂಧವು ಸ್ಥಿರವಾಗಿಯೂ ಇರುತ್ತದೆ ಎಂಬುದನ್ನು ಕಂಡುಕೊಂಡಿದ್ದೇವೆ” ಎಂದು 2018ರ ಐತಿಹಾಸಿಕ ಆದೇಶವನ್ನು ಉಲ್ಲೇಖಿಸಿ ಚಂದ್ರಚೂಡ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಲಿಂಗ ವಿವಾಹ ಮಾನ್ಯತೆ; ಹತ್ತು ದಿನಗಳೊಳಗೆ ತಮ್ಮ ಅಭಿಪ್ರಾಯ ತಿಳಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡುವುದಕ್ಕಾಗಿ ಬೇಡಿಕೆ ಸಲ್ಲಿಸಿದ ಅರ್ಜಿಗಳನ್ನು ನಗರದ ಗಣ್ಯರ ದೃಷ್ಟಿಕೋನ ಎಂದು ಹೇಳಿದ್ದು, ಈ ವಿಚಾರವನ್ನು ಚರ್ಚಿಸಲು ಸಂಸತ್ ಸರಿಯಾದ ವೇದಿಕೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಕೇವಲ ನಗರ ಗಣ್ಯರ ದೃಷ್ಟಿಕೋನಗಳನ್ನು ಪ್ರತಿಬಿಂಬಿಸುವ ಅರ್ಜಿಗಳನ್ನು ಸೂಕ್ತ ಶಾಸಕಾಂಗದೊಂದಿಗೆ ಹೋಲಿಸಲಾಗುವುದಿಲ್ಲ. ಇದು ವಿಶಾಲ ವ್ಯಾಪ್ತಿಯ ದೃಷ್ಟಿಕೋನಗಳು ಮತ್ತು ಧ್ವನಿಗಳನ್ನು ಪ್ರತಿಬಿಂಬಿಸುತ್ತದೆ ಮತ್ತು ದೇಶಾದ್ಯಂತ ವಿಸ್ತರಿಸುತ್ತದೆ ಎಂದು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದೆ.

ಸಲಿಂಗ ವಿವಾಹ ಕಾಯ್ದೆಯನ್ನು ಜಾರಿ ತರುವ ಸಂಬಂಧ ಸುಪ್ರೀಂ ಕೋರ್ಟ್​​ನಲ್ಲಿ​ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರ ರಾಜ್ಯಗಳಿಗೆ ಹತ್ತು ದಿನಗಳೊಳಗೆ ಸಲಿಂಗ ವಿವಾಹ ಕಾಯ್ದೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ.

ಕೇಂದ್ರ ಕಾನೂನು ಸಚಿವಾಲಯವು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಹತ್ತು ದಿನಗಳ ಒಳಗೆ ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯ ಸಲ್ಲಿಸುವಂತೆ ಸೂಚಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿಲುವಿನಲ್ಲಿ ಯಾವುದೇ ವಿಳಂಬವಿಲ್ಲದೆ ಸರಿಯಾದ ನಿರ್ಧಾರ ತೆಗೆದುಕೊಳ್ಳ ತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...