ಸಂಗಮದ ನೀರು ಸ್ನಾನಕ್ಕೆ ಮಾತ್ರವಲ್ಲ ಕುಡಿಯಲು ಯೋಗ್ಯ; ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

Date:

ಸಂಗಮ ಹಾಗೂ ಕುಂಭಮೇಳ ನಡೆಯುವ ಸ್ಥಳಗಳಲ್ಲಿನ ನೀರಿನಲ್ಲಿ ಮಲ ಬ್ಯಾಕ್ಟೀರಿಯವಿದೆ ಎಂಬ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯನ್ನು ತಳ್ಳಿಹಾಕಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಗಮದ ನೀರು ಸ್ನಾನಕ್ಕೆ ಮಾತ್ರವಲ್ಲ ಕುಡಿಯಲು ಕೂಡ ಯೋಗ್ಯವಾಗಿದೆ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳ, ಸನಾತನ ಧರ್ಮ, ಗಂಗಾ ನದಿ, ಭಾರತದ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಪವಿತ್ರ ನದಿಯಲ್ಲಿ ಸ್ನಾನ ಮಾಡುತ್ತಿರುವ ಕೋಟ್ಯಂತರ ಜನರ ನಂಬಿಕೆಗಳ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ನೀರಿನಲ್ಲಿ ಮಲದ ಬ್ಯಾಕ್ಟೀರಿಯಾ ಎನ್ನುವುದು ಅಪಪ್ರಚಾರವಾಗಿದೆ ಎಂದು ತಿಳಿಸಿದರು.

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭದಲ್ಲಿ ಕೋಟ್ಯಂತರ ಜನರು ಪವಿತ್ರ ಸ್ನಾನ ಮಾಡಿದ್ದಾರೆ. ಪ್ರಯಾಗರಾಜ್‌ನಲ್ಲಿ ಗಂಗಾ ಮತ್ತು ಯಮುನಾ ನದಿಗಳಲ್ಲಿ ಸಂಸ್ಕರಿಸದ ಕೊಳಚೆ ನೀರನ್ನು ಬಿಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಗೆ ವರದಿ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಂತು ಬೇಸಿಗೆ, ತತ್ವಾರ ತಂತು ನೀರಿಗೆ, ಅನುಕೂಲ ಅವಕಾಶವಾದಿಗಳಿಗೆ!

ಪ್ರಾಣಿ ಹಾಗೂ ಮನುಷ್ಯರಿಂದ ಹೊರ ಹಾಕಲ್ಪಡುವ ಮಲದಲ್ಲಿ ಹಾನಿಕಾರಿಕ ಬ್ಯಾಕ್ಟೀರಿಯಾಗಳಿರುತ್ತವೆ. ಇಂತಹ ಬ್ಯಾಕ್ಟೀರಿಯಾ ಕುಂಭಮೇಳ ನಡೆಯುವ ಹಲವು ಸ್ಥಳಗಳ ನೀರಿನಲ್ಲಿ ಕಂಡುಬಂದಿವೆ. ಈ ಬ್ಯಾಕ್ಟೀರಿಯಾಗಳಿಂದ ಹಲವು ರೀತಿಯ ರೋಗಗಳಿಗೆ ಕಾರಣವಾಗುತ್ತವೆ ಎಂದು ವರದಿಯಲ್ಲಿ ತಿಳಿಸಲಾಗಿತ್ತು.

ಮಹಾಕುಂಭ ಮೇಳ ಮುಕ್ತಾಯಗೊಳ್ಳಲು ಕೇಲವ 7 ದಿನಗಳು ಮಾತ್ರ ಬಾಕಿಯುಳಿದಿದೆ. ಅಂಕಿಅಂಶಗಳ ಪ್ರಕಾರ 56 ಕೋಟಿಗೂ ಹೆಚ್ಚು ಭಕ್ತರು ಪವಿತ್ರ ನದಿಯಲ್ಲಿ ಸ್ನಾನ ಮಾಡಿದ್ದಾರೆ. ಕುಂಭಮೇಳವನ್ನು ಯಾವುದೇ ಪಕ್ಷ ಅಥವಾ ಸಂಘಟನೆ ಆಯೋಜಿಸಿಲ್ಲ. ಇದು ಸಮಾಜದ ಕಾರ್ಯಕ್ರಮ. ಸರ್ಕಾರವು ಸೇವಕನ ರೀತಿಯಲ್ಲಿ ಎಲ್ಲ ಜವಾಬ್ದಾರಿಯನ್ನು ತೆಗೆದುಕೊಂಡಿದೆ. ದೇಶ ಹಾಗೂ ವಿಶ್ವವು ಈ ಮೇಳದಲ್ಲಿ ಭಾಗವಹಿಸಿ ಉನ್ನತವಾಗಿ ಯಶಸ್ವಿಗೊಳಿಸಿದೆ. ಕುಂಭ ಮೇಳದಲ್ಲಿ ಕಾಲ್ತುಳಿತಕ್ಕೊಳಗಾಗಿ ಹಾಗೂ ಅಪಘಾತದಿಂದ ಮೃತಪಟ್ಟ ಜನರ ಕುಟುಂಬದೊಂದಿಗೆ ನಮ್ಮ ಸರ್ಕಾರ ಸದಾ ಬೆನ್ನೆಲುಭಾಗಿ ನಿಲ್ಲುತ್ತದೆ. ಸುಳ್ಳು ಪ್ರಚಾರವನ್ನು ನಿರ್ಲಕ್ಷಿಸಿ ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...