ಯಾವುದೇ ಪಕ್ಷಕ್ಕೆ ಸೇರಲ್ಲ, ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ವದಂತಿಗೆ ತೆರೆ ಎಳೆದ ಸಂಜಯ್ ದತ್

Date:

“ನಾನು ಯಾವುದೇ ಪಕ್ಷಕ್ಕೂ ಸೇರುವುದಿಲ್ಲ ಅಥವಾ ಚುನಾವಣೆಯಲ್ಲಿಯೂ ಸ್ಪರ್ಧಿಸುವುದಿಲ್ಲ” ಎಂದು ಹೇಳುವ ಮೂಲಕ ನಟ ಸಂಜಯ್ ದತ್ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಹಾಗೆಯೇ ತಾನು ಯಾವುದಾದರೂ ಪಕ್ಷಕ್ಕೆ ಸೇರುವ ನಿರ್ಧಾರ ಮಾಡಿದರೆ ತಾನೇ ತಿಳಿಸುತ್ತೇನೆ ಎಂದಿದ್ದಾರೆ.

“ನಾನು ರಾಜಕೀಯಕ್ಕೆ ಸೇರುತ್ತೇನೆ ಎಂಬ ಎಲ್ಲಾ ವದಂತಿಗಳಿಗೆ ನಾನು ವಿರಾಮ ಹಾಕಲು ಬಯಸುತ್ತೇನೆ. ನಾನು ಯಾವುದೇ ಪಕ್ಷಕ್ಕೆ ಸೇರುವುದಿಲ್ಲ ಅಥವಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನಾನು ರಾಜಕೀಯ ಕ್ಷೇತ್ರಕ್ಕೆ ಕಾಲಿಡಲು ನಿರ್ಧರಿಸಿದರೆ ಅದನ್ನು ಘೋಷಿಸುವ ಮೊದಲ ವ್ಯಕ್ತಿ ನಾನೇ ಆಗಿರುತ್ತೇನೆ” ಎಂದು ಸಂಜಯ್ ದತ್ ಎಕ್ಸ್ (ಟ್ವಿಟ್ಟರ್) ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ “ಇಂತಹ ಸುಳ್ಳು ಸುದ್ದಿಗಳನ್ನು ನೀವು ದಯವಿಟ್ಟು ನಂಬಬೇಡಿ. ಸದ್ಯಕ್ಕೆ ನನ್ನ ಬಗ್ಗೆ ಏನೆಲ್ಲಾ ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ” ಎಂದು ಪೋಸ್ಟ್‌ನಲ್ಲಿ ಮನವಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ?   ಸ್ಪಷ್ಟನೆಯ ಬದಲು ಗೊಂದಲ ಸೃಷ್ಟಿಸಿದ ಪ್ರೇಮ್‌, ಸಂಜಯ್‌ ದತ್‌

ಸಂಜಯ್ ದತ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹರಿಯಾಣದ ಕರ್ನಾಲ್‌ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗಳು ಹರಡಿತ್ತು. ಈ ಕ್ಷೇತ್ರದಲ್ಲಿ ಪ್ರಬಲ ನಾಯಕ, ಹರಿಯಾಣದ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಆದ್ದರಿಂದ ಕಾಂಗ್ರೆಸ್ ಸಂಜಯ್ ದತ್ ಅವರನ್ನು ಕಣಕ್ಕಿಳಿಸಲು ಮುಂದಾಗಿದೆ ಎಂದು ಕೆಲವು ವರದಿಗಳು ಆಗಿದ್ದವು.

2014 ಮತ್ತು 2019ರ ಚುನಾವಣೆಯಲ್ಲಿ ಕರ್ನಾಲ್ ಕ್ಷೇತ್ರವನ್ನು ಬಿಜೆಪಿ ಪಾಲಾಗಿದೆ. ಅದಕ್ಕೂ ಮೊದಲು ಎರಡು ಅವಧಿಗೆ ಕಾಂಗ್ರೆಸ್‌ ಇಲ್ಲಿ ಗೆಲುವು ಸಾಧಿಸಿತ್ತು.

ದತ್ ಅವರ ಪೂರ್ವಜರ ಗ್ರಾಮವು ಯಮುನಾನಗರ ಜಿಲ್ಲೆಯಲ್ಲಿದೆ. ಇದಕ್ಕೂ ಮುನ್ನ ಅವರು ಭಾರತೀಯ ರಾಷ್ಟ್ರೀಯ ಲೋಕದಳದ ನಾಯಕ ಅಭಯ್ ಸಿಂಗ್ ಚೌತಾಲಾ ಪರ ಪ್ರಚಾರ ಮಾಡಿದ್ದರು.

ಸಂಜಯ್ ದತ್ ಅವರ ತಂದೆ ಮತ್ತು ನಟ, ದಿವಂಗತ ಸುನೀಲ್ ದತ್ ಅವರು ಕಾಂಗ್ರೆಸ್ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಹಾಗೆಯೇ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಸಚಿವರಾಗಿದ್ದರು. ಅವರ ಸಹೋದರಿ ಪ್ರಿಯಾ ದತ್ ಕೂಡ ಕಾಂಗ್ರೆಸ್ ಸಂಸದೆಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...