ಸಂಕ್ರಾಂತಿ | ಗಾಜುಲೇಪಿತ ಗಾಳಿಪಟದ ದಾರಕ್ಕೆ ನಾಲ್ವರು ಬಲಿ

Date:

ದೇಶಾದ್ಯಂತ ಸಂಕ್ರಾಂತಿ ಸಡಗರ ಮನೆ ಮಾಡಿದೆ. ಹಲವಾರು ಭಾಗಗಳಲ್ಲಿ ಗಾಳಿಪಟ ಹಾರಿಸಿ ಹಬ್ಬವನ್ನು ಸಂಭ್ರಮಿಸಲಾಗುತ್ತಿದೆ. ಇದೇ ಸಮಯದಲ್ಲಿ ಕೆಲವೆಡೆ ಗಾಳಿಪಟದ ದಾರದಿಂದಾಗಿ ಸೂತಕದ ಛಾಯೆ ಆವರಿಸಿದೆ. ಗಾಜುಲೇಪಿತ ಗಾಳಿಪಟ ದಾರದಿಂದ ಕತ್ತು ಸೀಳಿ ಈವರೆಗೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ಜೌನಪುರ ಮತ್ತು ಲಖೀಂಪುರ ಹಾಗೂ ಕರ್ನಾಟಕದಲ್ಲಿ ಬೀದರ್‌ ಜಿಲ್ಲೆಗಳಲ್ಲಿ ಸಾವಿನ ಘಟನೆಗಳು ಸಂಭವಿಸಿವೆ. ಅಲ್ಲದೆ, ಗಾಳಿಪಟ ಹಾರಿಸುವ ವೇಳೆ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದೂ ತಿಳಿದುಬಂದಿದೆ.

ರಸ್ತೆ ಮತ್ತು ಸೇತುವೆಗಳ ಮೇಲೆ ಅಡ್ಡವಾಗಿ ತೂಗುವ ಗಾಳಿಪಟದ ದಾರಗಳು ದ್ವಿಚಕ್ರ ವಾಹನ ಸವಾರರ ಕತ್ತಿಗೆ ಸುತ್ತಿಕೊಂಡು, ಕುತ್ತು ಸೀಳಿಕೊಂಡು ದುರ್ಘಟನೆಗಳು ಸಂಭವಿಸಿವೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರಪ್ರದೇಶದಲ್ಲಿ ಜೌನಪುರ ಜಿಲ್ಲೆಯ ಶಾಲಾ ಕ್ಯಾಂಪಸ್‌ನಲ್ಲಿ ಸಮೀರ್ ಹಂಶಿ (28) ಮೃತಪಟ್ಟಿದ್ದಾರೆ. ಬೈಕಿನಲ್ಲಿ ಪ್ರಯಾಣಿಸುತ್ತಿದ್ದಾಗ ಗಾಳಿಪಟದ ದಾರ ಕುತ್ತಿಗೆಗೆ ಸುತ್ತಿಕೊಂಡು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅಂತೆಯೇ, ಕೆಲ ದಿನಗಳ ಹಿಂದೆ, ಅದೇ ಜಿಲ್ಲೆಯ ಶಾಲಾ ಶಿಕ್ಷಕ ಸಂದೀಪ್ ತ್ರಿಪಾಠಿ (45) ಗಾಜುಲೇಪಿತ ದಾರದಿಂದ ಕತ್ತು ಸೀಳಿ ಮೃತಪಟ್ಟಿದ್ದರು.

ಬುಧವಾರ ಉತ್ತರಪ್ರದೇಶದ ಲಕೀಂಪುರ ಜಿಲ್ಲೆಯಲ್ಲಿ ತಲೆಂಗಾಣ ಮೂಲದ ವಲಸೆ ಕಾರ್ಮಿಕ ಅವಧೀಶ್ ಕುಮಾರ್ (38) ಕೂಡ ಮೃತಪಟ್ಟಿದ್ದಾರೆ.

ಕರ್ನಾಟಕದ ಬೀದರ್ ಜಿಲ್ಲೆಯ ಬಂಬುಳಗಿ ಗ್ರಾಮದಲ್ಲಿ ಸಂಜೀವ ಕುಮಾರ್ (48) ಎಂಬವರು ಕೂಡ ಗಾಳಿಪಟ ದಾರುವ ಕತ್ತಿಗೆ ಸುತ್ತಿಕೊಂಡು, ಕತ್ತು ಸೀಳಿ ಸಾವನ್ನಪ್ಪಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...