ಸುಪ್ರೀಂ ತರಾಟೆ | ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ‘ಡೇಟಾ’ ಸಲ್ಲಿಸಿದ ಎಸ್‌ಬಿಐ

Date:

ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಿನ ಆದೇಶಕ್ಕೆ ಅನುಗುಣವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಚುನಾವಣಾ ಬಾಂಡ್‌ಗಳ ಬಗ್ಗೆ ‘ಡೇಟಾ’ವನ್ನು ಮಂಗಳವಾರ ಸಂಜೆ ಭಾರತೀಯ ಚುನಾವಣಾ ಆಯೋಗಕ್ಕೆ  ಸಲ್ಲಿಸಿದೆ. ನ್ಯಾಯಾಲಯದ ಆದೇಶದಂತೆ ಶುಕ್ರವಾರ ಸಂಜೆ 5 ಗಂಟೆಯೊಳಗೆ ಚುನಾವಣಾ ಆಯೋಗವು ಡೇಟಾವನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಿದೆ.

ಚುನಾವಣಾ ಬಾಂಡ್‌ಗಳ ಡೇಟಾವನ್ನು ಚುನಾವಣಾ ಆಯೋಗಕ್ಕೆ ಎಸ್‌ಬಿಐ ಸಲ್ಲಿಸಿದ್ದರೂ, ಅದರ, ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರು ನ್ಯಾಯಾಲಯದ ಆದೇಶವನ್ನು ದೃಢೀಕರಿಸುವ ಅಫಿಡವಿಟ್‌ಅನ್ನು ಇನ್ನೂ ಸಲ್ಲಿಸಿಲ್ಲ ಎಂದು ವರದಿಯಾಗಿದೆ.

ಎಸ್‌ಬಿಐ ಅಫಿಡವಿಟ್ಅನ್ನು ಸಿದ್ದಪಿಡಿಸದೆ. ಆದರೆ, ಇನ್ನೂ ನ್ಯಾಯಾಲಯಕ್ಕೆ ಸಲ್ಲಿಸಲಾಗಿಲ್ಲ ಎಂದು ಎಸ್‌ಬಿಐ ಮೂಲಗಳು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣಾ ಬಾಂಡ್‌ ಪ್ರಕರಣದ ತನಿಖೆ ನಡೆಸಿದ್ದ ಸುಪ್ರೀಂ ಕೋರ್ಟ್‌, ಮಾರ್ಚ್‌ 6ರೊಳಗೆ ಬಾಂಡ್‌ಗಳ ಅಂಕಿಅಂಶವನ್ನು ಚುನಾವಣಾ ಆಯೋಗಕ್ಕೆ ಎಸ್‌ಬಿಐ ಅಲ್ಲಿಸಬೇಕು. ಅವುಗಳನ್ನು ಪರಿಶೀಲಿಸಿ ಮಾರ್ಚ್‌ 13ರೊಳಗೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಮಾಹಿತಿಯನ್ನು ಪ್ರಕಟಿಸಬೇಕು ಎಂದು ಹೇಳಿತ್ತು.

ಆದರೆ, ಗಡುವನ್ನು ಜೂನ್ 30ವರೆಗೆ ವಿಸ್ತರಿಸುವಂತೆ ಮೇಲ್ಮನವಿ ಸಲ್ಲಿಸಿದ್ದ ಎಸ್‌ಬಿಐ, ಬಾಂಡ್‌ಗಳ ಎಲ್ಲ ಡೇಟಾವನ್ನು ಸಂಗ್ರಹಿಸಲು, ಕ್ರಾಸ್‌-ಚೆಕ್‌ ಮಾಡಲು ಮತ್ತು ಒಟ್ಟುಗೂಡಿಸಲು ಸಮಬೇಕೆಂದು ವಾದಿಸಿತ್ತು.

ಈ ಸುದ್ದಿ ಓದಿದ್ದೀರಾ?: ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸಿಎಎ ರದ್ದು: ಶಶಿ ತರೂರ್

ಮನವಿಯನ್ನು ತಿರಸ್ಕರಿಸಿದ್ದ ಸುಪ್ರೀಂ ಕೋರ್ಟ್‌ ಸೋಮವಾರ ಎಸ್‌ಬಿಐಅನ್ನು ತರಾಟೆಗೆ ತೆಗೆದುಕೊಂಡಿತ್ತು. “ಈಗಾಗಲೇ ಎಸ್‌ಬಿಐನ ಮುಂಬೈ ಶಾಖೆಯಲ್ಲಿ ದಾನಿಗಳ ವಿವರ ಲಭ್ಯವಿದೆ. ಆ ಮಾಹಿತಿಗಳ ಕವರ್‌ಅನ್ನು ಬ್ಯಾಂಕ್‌ ತೆರೆಯಬೇಕು. ಸಂಗ್ರಹಿಸಿ, ಮಾಹಿತಿ ನೀಡಬೇಕು. ನಾವು ಹೊಂದಾಣಿಕೆ ಕೆಲಸ ಮಾಡಲು ಹೇಳಿಲ್ಲ. ಸರಳವಾಗಿ ಮಾಹಿತಿಯನ್ನು ಬಹಿರಂಗಪಡಿಸಲು ಕೇಳಿದ್ದೇವೆ” ಎಂದು ಹೇಳಿತ್ತು.

ಮಂಗಳವಾರವೇ (ಮಾರ್ಚ್‌ 12) ಮಾಹಿತಿಯನ್ನು ನೀಡಬೇಕು. ಮಾರ್ಚ್‌ 15ರಂದು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ನ್ಯಾಯಪೀಠ ಸೂಚಿಸಿದ ಟೈಮ್‌ಲೈನ್‌ಗಳ ಮೂಲಕ ನಿರ್ದೇಶನಗಳನ್ನು ಅನುಸರಿಸದಿದ್ದರೆ, ನ್ಯಾಯಾಲಯವು ಎಸ್‌ಬಿಐ ವಿರುದ್ಧ ಕ್ರಮಕ್ಕೆ ಮುಂದಾಗುತ್ತದೆ” ಎಂದು ಖಡಕ್‌ ಎಚ್ಚರಿಕೆ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...