30 ವಾರಗಳ ಗರ್ಭಿಣಿಯಾಗಿರುವ 14 ವರ್ಷದ ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂ ಅನುಮತಿ

Date:

ುಪ30 ವಾರಗಳ ಗರ್ಭಿಣಿಯಾಗಿರುವ 14 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ತಕ್ಷಣವೇ ಗರ್ಭಪಾತ ಮಾಡಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಬಾಲಕಿಯ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್ ಬಾಲಕಿಗೆ ಪ್ರತಿ ಗಂಟೆಯು ನಿರ್ಣಾಯಕವಾಗಿದೆ ಎಂದು ತೀರ್ಪು ನೀಡಿದೆ.

ಗರ್ಭಪಾತಕ್ಕೆ ವೈದ್ಯಕೀಯ ತಂಡ ನಿಯೋಜಿಸಲು ಮುಂಬೈನ ಸಿಯೋನ್ ಆಸ್ಪತ್ರೆಗೆ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ನೇತೃತ್ವದ ಪೀಠವು ಆದೇಶಿಸಿದೆ.

ಆಸ್ಪತ್ರೆಯು ವೈದ್ಯಕೀಯ ಸೌಲಭ್ಯದೊಂದಿಗೆ ಅಪ್ರಾಪ್ತೆಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಹಾಗೂ ಪ್ರಕ್ರಿಯೆಗಳ ವೆಚ್ಚಗಳನ್ನು ಮಹಾರಾಷ್ಟ್ರ ಸರ್ಕಾರ ವಹಿಸಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರೆದ ಹಂತವಾದ ಕಾರಣ ಗರ್ಭಾಪಾತಕ್ಕೆ ಅನುಮತಿ ನೀಡಲು 2023ರಲ್ಲಿ ನಿರಾಕರಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅತ್ಯಾಚಾರ ಸಂತ್ರಸ್ತೆಯ ತಾಯಿ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ಅತ್ಯಾಚಾರ ಸಂತ್ರಸ್ತೆಯ ಪ್ರಕಾರ ಆಕೆಯ ಪುತ್ರಿ ಫೆ.2023ರಲ್ಲಿ ಕಾಣೆಯಾಗಿ ಮೂರು ತಿಂಗಳ ನಂತರ ರಾಜಸ್ಥಾನದಲ್ಲಿ ಪತ್ತೆಯಾಗಿದ್ದರು. ವ್ಯಕ್ತಿಯೊಬ್ಬ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದಳು.

ಬಾಲಕಿ ಮನೆಗೆ ತೆರಳಿದ ನಂತರ ಪೋಕ್ಸೋ ಕಾಯ್ದೆಯಡಿ ಅತ್ಯಾಚಾರಿಯ ವಿರುದ್ಧ ದೂರು ದಾಖಲಿಸಲಾಗಿತ್ತು.

”ಇದೊಂದು ಅತ್ಯಾಚಾರ ಪ್ರಕರಣ ಹಾಗೂ ಇದೊಂದು ಅಪರೂಪದ ಪ್ರಕರಣವಾದ ಕಾರಣ ನಾವು 14 ವರ್ಷದ ಬಾಲಕಿಗೆ ಗರ್ಭಪಾತಕ್ಕೆ ಅನುಮತಿಸುತ್ತೇವೆ. ವೈದ್ಯಕೀಯ ಮಂಡಳಿ ಬಾಲಕಿಯ ಜೀವಕ್ಕೆ ಅಪಾಯವಿದೆ ಎಂದು ಅಭಿಪ್ರಾಯ ಪಟ್ಟಿದ್ದರೂ ಹೆರಿಗೆಯ ನಂತರ ಇದಕ್ಕಿಂತ ಹೆಚ್ಚಿನ ಅಪಾಯವಿದೆ. ಈ ಪ್ರಕರಣನ್ನು ಸಿಯೋನ್‌ ಆಸ್ಪತ್ರೆ ಇದನ್ನು ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು” ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನಿರ್ದೇಶಿಸಿದರು

ವೈದ್ಯಕೀಯ ಗರ್ಭಾಪಾತ ಕಾಯ್ದೆ ಪ್ರಕಾರ ಕೆಲವೊಂದು ವಿಶೇಷ ಸಂದರ್ಭಗಳಲ್ಲಿ ಅತ್ಯಾಚಾರ ಸಂತ್ರಸ್ತೆಯರು ಹಾಗೂ ವಿಕಲಾಂಗ ಚೇತನವುಳ್ಳ ಇತರ ದುರ್ಬಲ ಮಹಿಳೆಯರು ಒಳಗೊಂಡ ವಿವಾಹಿತೆಯರ ಗರ್ಭಾಪಾತದ ಅವಧಿ 24 ವಾರಗಳನ್ನು ಮೀರಿರಬಾರದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...