ಸನಾತನ ಧರ್ಮ ವಿವಾದ: ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ನೋಟಿಸ್

Date:

ಸನಾತನ ಧರ್ಮದ ನಿರ್ಮೂಲನೆ ಕುರಿತು ವಿವಾದಿತ ಹೇಳಿಕೆ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ತಮಿಳುನಾಡಿನ ಸರ್ಕಾರ ಮತ್ತು ಸಚಿವ ಉದಯನಿಧಿ ಸ್ಟಾಲಿನ್‌ ಅವರಿಗೆ ಸುಪ್ರೀಂ ಕೋರ್ಟ್ ಇಂದು(ಸೆ.22) ನೋಟಿಸ್ ಜಾರಿಮಾಡಿದೆ.

ಸನಾತನ ಧರ್ಮದ ಹೇಳಿಕೆ ಕುರಿತು ಈ ಹಿಂದೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಕೇಂದ್ರದ ಮಾಜಿ ಸಚಿವ ಎ ರಾಜಾ ನೀಡಿದ್ದ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ದಾಖಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರ ಪೀಠವು ಅರ್ಜಿದಾರ ಬಿ ಜಗನ್ನಾಥ್ ಅವರನ್ನು ಹೈಕೋರ್ಟ್‌ ಅನ್ನು ಏಕೆ ಸಂಪರ್ಕಿಸಲಿಲ್ಲ ಎಂದು ಪ್ರಶ್ನಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಬ್ಬ ವ್ಯಕ್ತಿ ನಿರ್ದಿಷ್ಟ ಧರ್ಮದ ವಿರುದ್ಧ ಹರಿಹಾಯ್ದ ಪ್ರಕರಣವಾಗಿದ್ದರೆ ಅದನ್ನು ಅರ್ಥಮಾಡಿಕೊಳ್ಳಬಹುದು. ಆದರೆ ಇಲ್ಲಿ ಒಂದು ನಿರ್ದಿಷ್ಟ ಧರ್ಮದ ವಿರುದ್ಧ ಮಂತ್ರಿ ಮತ್ತು ರಾಜ್ಯದ ವ್ಯವಸ್ಥೆಯು ಧರ್ಮದ ವಿರುದ್ಧ ಮಾತನಾಡುತ್ತಿದ್ದಾರೆ” ಎಂದು ಅರ್ಜಿದಾರರ ಪರ ವಕೀಲರು ಹೇಳಿದರು.

ಆಗ ಪೀಠವು, “ನೀವು ನಮ್ಮನ್ನು ಪೊಲೀಸ್ ಠಾಣೆಯನ್ನಾಗಿ ಪರಿವರ್ತಿಸುತ್ತಿದ್ದೀರಿ” ಎಂದು ಹೇಳಿತು. ಆದಾಗ್ಯೂ, ವಕೀಲರು ದ್ವೇಷದ ಭಾಷಣಕ್ಕೆ ಸಂಬಂಧಿಸಿದಂತೆ ಇದೇ ರೀತಿಯ ಅರ್ಜಿಗಳನ್ನು ಸಲ್ಲಿಸಿದ ಕಾರಣ, ನ್ಯಾಯಾಲಯವು ಸರ್ಕಾರ ಹಾಗೂ ಸಚಿವರಿಗೆ ನೋಟಿಸ್ ಜಾರಿಗೊಳಿಸಿತು.

ಈ ಸುದ್ದಿ ಓದಿದ್ದೀರಾ? ಭಾರತೀಯ ವೈದ್ಯಕೀಯ ಪದವೀಧರರು ಇನ್ನು ಮುಂದೆ ಅಮೆರಿಕದಲ್ಲಿ ಪ್ರಾಕ್ಟೀಸ್‌ ಮಾಡಬಹುದು

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್‌, ಡಿಎಂಕೆ ನಾಯಕರಾದ ಪೀಟರ್ ಅಲ್ಫೋನ್ಸ್, ಎ ರಾಜಾ ಮತ್ತು ತೋಲ್ ತಿರುಮಾವಲವನ್ ಮತ್ತು ಅವರ ಅನುಯಾಯಿಗಳು ಸನಾತನ ಧರ್ಮ ಅಥವಾ ಹಿಂದೂ ಧರ್ಮದ ವಿರುದ್ಧ ಯಾವುದೇ ದ್ವೇಷದ ಭಾಷಣ ಮಾಡದಂತೆ ತಡೆಯಾಜ್ಞೆ ನೀಡುವಂತೆ ಜಗನ್ನಾಥ್ ಅವರು ತಮ್ಮ ಮನವಿಯಲ್ಲಿ ಕೋರಿದ್ದಾರೆ.

ಜಗನ್ನಾಥ್ ಅವರು ತಮ್ಮ ಮನವಿಯಲ್ಲಿ, 2023 ರ ಸೆಪ್ಟೆಂಬರ್ 2 ರಂದು ನಡೆದ ‘ಸನಾತನ ಧರ್ಮ ನಿರ್ಮೂಲನೆ’ ಸಮಾವೇಶದಲ್ಲಿ ರಾಜ್ಯ ಸಚಿವರು ಭಾಗವಹಿಸುವುದು ಅಸಂವಿಧಾನಿಕ ಮತ್ತು ಸಂವಿಧಾನದ 25 ಮತ್ತು 26 ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಘೋಷಿಸಲು ನ್ಯಾಯಾಲಯವನ್ನು ಕೋರಿದ್ದಾರೆ.

ಈ ಹಿಂದೆ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಪಾಲ್ಗೊಂಡು, ‘‘ಕೆಲವು ವಿಷಯಗಳನ್ನು ನಾವು ವಿರೋಧಿಸುವ ಬದಲು ಅವುಗಳನ್ನು ನಿರ್ಮೂಲನೆ ಮಾಡುವುದೇ ಸರಿ. ನಾವು ಕೊರೊನಾ, ಡೆಂಗ್ಯೂ, ಮಲೇರಿಯಾದಂಥ ಸೋಂಕುಗಳನ್ನು ವಿರೋಧಿಸಬಾರದು. ಆರೋಗ್ಯ ಜಾಗೃತಿಯ ಮೂಲಕ ಅವುಗಳನ್ನು ನಿರ್ಮೂಲನೆ ಮಾಡಬೇಕು. ಹಾಗೆಯೇ ಸನಾತನ ಧರ್ಮವನ್ನೂ ನಾವು ವಿರೋಧಿಸುವ ಬದಲು ಸಾಮಾಜಿಕ ಜಾಗೃತಿಯ ಮೂಲಕ ನಿರ್ಮೂಲನೆ ಮಾಡಬೇಕು’’ ಎಂದು ಕರೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...