ಬಂಗಾಳ SIR ಪ್ರಕ್ರಿಯೆಗೆ ನ್ಯಾಯಾಂಗ ಅಧಿಕಾರಿಗಳನ್ನು ನಿಯೋಜಿಸಲು ಸುಪ್ರೀಂ ಕೋರ್ಟ್ ಆದೇಶ

Date:

ಚುನಾವಣಾ ವಸ್ತಿಲಿನಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು, ಹಾಲಿ ಮತ್ತು ನಿವೃತ್ತ ನ್ಯಾಯಾಧೀಶರು ಸೇರಿದಂತೆ ನ್ಯಾಯಾಂಗ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗದ (ECI) ನಡುವಿನ ಸ್ಪಷ್ಟ ಸಹಕಾರದ ಕೊರತೆಯಿಂದಾಗಿ ಬೇರೆ ಯಾವುದೇ ಆಯ್ಕೆ ಉಳಿದಿಲ್ಲ. ದುರದೃಷ್ಟಕರ ದೋಷಣೆಯ ಆಟವನ್ನು ತಡೆಯಲು ನ್ಯಾಯಾಂಗದ ಅಧಿಕಾರಿಗಳ ನಿಯೋಜನೆ ಅಗತ್ಯವಾಗಿದೆ ಎಂದು ಸಿಜೆಐ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಾಂಚೋಲಿ ಅವರಿದ್ದ ಪೀಠ ಹೇಳಿದೆ.

“ಆರೋಪಗಳು ಮತ್ತು ಪ್ರತಿ ಆರೋಪಗಳ ದುರದೃಷ್ಟಕರ ದೂಷಣೆಯ ಆಟ ನಡೆದಿದೆ. ಇದು ಎರಡು ಸಾಂವಿಧಾನಿಕ ಕಾರ್ಯನಿರ್ವಾಹಕರಾದ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವಿನ ನಂಬಿಕೆಯ ಕೊರತೆಯನ್ನು ತೋರಿಸುತ್ತದೆ. ಈಗ ಎಸ್‌ಐಆರ್‌ ಪ್ರಕ್ರಿಯೆಯು ತಾರ್ಕಿಕ ವ್ಯತ್ಯಾಸ ಪಟ್ಟಿಯಲ್ಲಿ ಸೇರಿಸಲಾದ ವ್ಯಕ್ತಿಗಳ ಹಕ್ಕು ಮತ್ತು ಆಕ್ಷೇಪಣೆಗಳ ಹಂತದಲ್ಲಿ ಸಿಲುಕಿಕೊಂಡಿದೆ. ಈ ಕಾರ್ಯವು ಸುಗಮವಾಗಿ ನಡೆಯಲು ನ್ಯಾಯಾಂಗ ಅಧಿಕಾರಿಗಳ ನೇಮಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ” ಎಂದು ಪೀಠ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಾರ್ಕಿಕ ವ್ಯತ್ಯಾಸ ಪಟ್ಟಿಯಲ್ಲಿನ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲು ಅಥವಾ ಮರುಪರಿಶೀಲಿಸಲು ಪ್ರತಿ ಜಿಲ್ಲೆಯಲ್ಲಿ ಸಹಾಯ ಮಾಡುವ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಅಥವಾ ಜಿಲ್ಲಾ ನ್ಯಾಯಾಧೀಶರ ಶ್ರೇಣಿಯಲ್ಲಿರುವ ಕೆಲವು ಮಾಜಿ ನ್ಯಾಯಾಂಗ ಅಧಿಕಾರಿಗಳು ಸೇರಿದಂತೆ ನ್ಯಾಯಾಂಗ ಅಧಿಕಾರಿಗಳನ್ನು ಎಸ್‌ಐಆರ್‌ ಪ್ರಕ್ರಿಯೆಗೆ ನೇಮಿಸುವಂತೆ ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಲ್ಲಿ ವಿನಂತಿ ಮಾಡುತ್ತೇವೆ” ಎಂದು ಪೀಠ ತಿಳಿಸಿದೆ.

ಫೆಬ್ರವರಿ 28ರೊಳಗೆ ಬಂಗಾಳದ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಗಮನಾರ್ಹವಾಗಿ, 2002ರ ಮತದಾರರ ಪಟ್ಟಿಯೊಂದಿಗೆ ಲಿಂಕ್ ಮಾಡುವಲ್ಲಿ ತಾರ್ಕಿಕ ವ್ಯತ್ಯಾಸಗಳು ಕಂಡುಬಂದಿವೆ. ಇವುಗಳಲ್ಲಿ, ಪೋಷಕರ ಹೆಸರಿನಲ್ಲಿ ಅಕ್ಷರ ದೋಷ, ಮತದಾರರು ಮತ್ತು ಅವರ ಪೋಷಕರ ನಡುವಿನ ವಯಸ್ಸಿನ ವ್ಯತ್ಯಾಸವು 15 ವರ್ಷಕ್ಕಿಂತ ಕಡಿಮೆ ಅಥವಾ 50 ವರ್ಷಗಳಿಗಿಂತ ಹೆಚ್ಚು ಇರುವುದು ಸೇರಿವೆ. ಈ ಕಾರಣಗಳಿಗಾಗಿ, ಮತದಾರರನ್ನು ಮತಪಟ್ಟಿಯಿಂದ ಹೊರಗಿಡಲು ಆಯೋಗ ಮುಂದಾಗಿದ್ದು, ಆಯೋಗದ ಧೋರಣೆಯನ್ನು ಪ್ರಶ್ನಿಸಿ ಬಂಗಾಳದ ಆಡಳಿತಾರೂಢ ಟಿಎಂಸಿ ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...