ದೆಹಲಿ ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾ ಜಾಮೀನು ಅರ್ಜಿ ವಜಾ

Date:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ, ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕಲ್ವಕುಂಟ್ಲ ಕವಿತಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕಲ್ವಕುಂಟ್ಲ ಕವಿತಾ ಅವರನ್ನು ಜಾರಿ ನಿರ್ದೇಶನಾಲಯವು (ಇಡಿ) ಮಾರ್ಚ್ 15ರಂದು ಬಂಧಿಸಿದೆ. ಕವಿತಾ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅರ್ಜಿಯನ್ನು ವಜಾಗೊಳಿಸಿದೆ. ಜಾಮೀನು ನೀಡಲು ನಿರಾಕರಿಸಿದೆ.

ಇದನ್ನು ಓದಿದ್ದೀರಾ?  ದೆಹಲಿ ಅಬಕಾರಿ ನೀತಿ ಪ್ರಕರಣ: ನಿರ್ದೇಶಕರ ಬಂಧನದ ಬಳಿಕ ಬಿಜೆಪಿಗೆ 30 ಕೋಟಿ ರೂ. ಚುನಾವಣಾ ಬಾಂಡ್‌ ನೀಡಿದ್ದ ಅರಬಿಂದೋ ಫಾರ್ಮಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಚ್ 15ರಿಂದ ಮಾರ್ಚ್ 23ರವರೆಗೆ ಜಾರಿ ನಿರ್ದೇಶನಾಲಯವು 46 ವರ್ಷದ ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. “ಈ ಬಂಧನವು ಅಕ್ರಮ, ಅಸಾಂವಿಧಾನಿಕ” ಎಂದು ವಾದಿಸಿರುವ ಕವಿತಾ, “ಇದು ಮನಿ ಲಾಂಡರಿಂಗ್ ತಡೆ ಕಾಯ್ದೆಯ ಸೆಕ್ಷನ್ 19 ಅನ್ನು ಉಲ್ಲಂಘಿಸುತ್ತದೆ” ಎಂದು ಅರ್ಜಿಯಲ್ಲಿ ತಿಳಿಸಿದ್ದರು.

ಇನ್ನು ಜಾರಿ ನಿರ್ದೇಶನಾಲಯವು ಈ ಪ್ರಕರಣದಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಗುರುವಾರ ಬಂಧಿಸಿದೆ. ಈ ನಡುವೆ ಚುನಾವಣಾ ಆಯೋಗ ಚುನಾವಣಾ ಬಾಂಡ್ ಮಾಹಿತಿಯನ್ನು ಬಹಿರಂಗಪಡಿಸಿದ್ದು, ಇದೇ ಪ್ರಕರಣದಲ್ಲಿ ತನ್ನ ನಿರ್ದೇಶಕ ಶರತ್ ಚಂದ್ರ ರೆಡ್ಡಿ ಬಂಧನಕ್ಕೊಳಗಾದ ಬಳಿಕ ಬಿಜೆಪಿಗೆ ಅರಬಿಂದೋ ಫಾರ್ಮಾ 30 ಕೋಟಿ ರೂಪಾಯಿ ದೇಣಿಗೆ ನೀಡಿರುವುದು ತಿಳಿದುಬಂದಿದೆ. ಇನ್ನು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇದೇ ಪ್ರಕರಣದಲ್ಲಿ 2023ರ ಫೆಬ್ರವರಿಯಿಂದ ಜೈಲಿನಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...