‘ಹಣಕ್ಕಾಗಿ ಪ್ರಶ್ನೆ’ ಪ್ರಕರಣ: ಮಹುವಾ ಮೊಯಿತ್ರಾ ವಿಚಾರಣೆಗೆ ಅನುಮತಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

Date:

ಹಣಕ್ಕಾಗಿ ಪ್ರಶ್ನೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಸಿಬಿಐಗೆ ಅನುಮತಿ ನೀಡುವಂತೆ ಲೋಕಪಾಲರಿಗೆ ನಿರ್ದೇಶಿಸಿದ್ದ ದೆಹಲಿ ಹೈಕೋರ್ಟ್‌ನ 2025ರ ಡಿಸೆಂಬರ್‌ನ ಆದೇಶದ ಒಂದು ಭಾಗಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ.

ಹೈಕೋರ್ಟ್ ಆದೇಶದ ವಿರುದ್ಧ ಲೋಕಪಾಲ ಸಲ್ಲಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿದ್ದು, ಸಿಬಿಐ, ಬಿಜೆಪಿ ಸಂಸದ ಮತ್ತು ದೂರುದಾರ ನಿಶಿಕಾಂತ್ ದುಬೆ ಅವರಿಗೆ ನೋಟಿಸ್ ಜಾರಿ ಮಾಡಿದೆ. ಹಾಗೆಯೇ ಸದ್ಯಕ್ಕೆ ಮೊಯಿತ್ರಾ ಅವರ ವಿರುದ್ಧದ ವಿಚಾರಣೆಯನ್ನು ಮುಂದುವರಿಸದಂತೆ ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇದನ್ನು ಓದಿದ್ದೀರಾ? ಮಹಿಳಾ ದಿನಾಚರಣೆ ವಿಶೇಷ | ನಾರಿಯರು ‘ಆಡಳಿತಗಾರ್ತಿ’ಯರಾಗಿ ಹೊರಹೊಮ್ಮಿದ ಕ್ರಾಂತಿಕಾರಿ ಹಾದಿಯ ಸ್ಮರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2025ರ ಡಿಸೆಂಬರ್‌ 19ರಂದು ಮೊಯಿತ್ರಾ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ ಲೋಕಪಾಲದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಆದರೆ ಲೋಕಪಾಲ ಕಾಯಿದೆಯ ಸೆಕ್ಷನ್ 20ರ ಅಡಿಯಲ್ಲಿ ತನಿಖಾ ಸಂಸ್ಥೆಗಳಿಗೆ ಅನುಮತಿ ನೀಡುವ ಅಧಿಕಾರದ ಕುರಿತು ಹೈಕೋರ್ಟ್ ನೀಡಿರುವ ವ್ಯಾಖ್ಯಾನವು ಸರಿಯಾಗಿಲ್ಲ ಎಂದೂ ನ್ಯಾಯಪೀಠ ಅಭಿಪ್ರಾಯಿಸಿದೆ. ಈ ಕುರಿತು ಕಾನೂನು ಸ್ಪಷ್ಟನೆ ನೀಡುವುದಾಗಿ ತಿಳಿಸಿದೆ.

ಏನಿದು ಹಣಕ್ಕಾಗಿ ಪ್ರಶ್ನೆ ಪ್ರಕರಣ?

ಮಹುವಾ ಮೊಯಿತ್ರಾ ಅವರು ಸಂಸತ್ತಿನಲ್ಲಿ ಅದಾನಿ ಸಮೂಹ ಮತ್ತು ಪ್ರಧಾನಿ ಮೋದಿಯವರನ್ನು ಗುರಿಯಾಗಿಸಿ ಪ್ರಶ್ನೆಗಳನ್ನು ಕೇಳಲು ದುಬೈ ಮೂಲದ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಹಣ ಮತ್ತು ದುಬಾರಿ ಉಡುಗೊರೆಗಳನ್ನು ಪಡೆದಿದ್ದಾರೆ ಎಂಬುದು ಪ್ರಮುಖ ಆರೋಪವಾಗಿದೆ. ಈ ವಿಚಾರದಲ್ಲಿ ಲೋಕಸಭೆಯಿಂದಲೇ ಮಹುವಾ ಅವರನ್ನು ಉಚ್ಚಾಟಿಸಲಾಗಿದೆ.

ಮಹುವಾ ಅವರು ತಮ್ಮ ಸಂಸತ್ತಿನ ಅಧಿಕೃತ ‘ಲಾಗಿನ್ ಐಡಿ’ ಮತ್ತು ‘ಪಾಸ್‌ವರ್ಡ್’ ಅನ್ನು ಹಿರಾನಂದನಿ ಅವರಿಗೆ ನೀಡಿದ್ದರು. ಹಿರಾನಂದನಿ ಅವರು ದುಬೈನಿಂದಲೇ ಲಾಗಿನ್ ಆಗಿ ಮಹುವಾ ಅವರ ಪರವಾಗಿ ಪ್ರಶ್ನೆಗಳನ್ನು ಪೋಸ್ಟ್ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇದನ್ನು ಮಹುವಾ ಅವರು ಒಪ್ಪಿಕೊಂಡಿದ್ದರೂ, ‘ಕೇವಲ ಟೈಪ್ ಮಾಡಲು ಮಾತ್ರ ಸಹಾಯ ಪಡೆದಿದ್ದೆ’ ಎಂದು ಸ್ಪಷ್ಟಪಡಿಸಿದ್ದಾರೆ. “ಅನೇಕ ಸಂಸದರು ತಮ್ಮ ಸಿಬ್ಬಂದಿ ಅಥವಾ ಪರಿಚಿತರ ಸಹಾಯದಿಂದ ಪ್ರಶ್ನೆಗಳನ್ನು ಟೈಪ್ ಮಾಡಿಸುತ್ತಾರೆ. ಇದರಲ್ಲಿ ಯಾವುದೇ ಭ್ರಷ್ಟಾಚಾರವಿಲ್ಲ” ಎಂದು ಮಹುವಾ ಹೇಳಿದ್ದಾರೆ.

ಹಾಗೆಯೇ ಅದಾನಿ ಸಮೂಹದ ವಿರುದ್ಧ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದಕ್ಕಾಗಿ ಸರ್ಕಾರವು ತನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಮಹುವಾ ದೂರಿದ್ದಾರೆ. ಲೋಕಸಭೆಯ ಎಥಿಕ್ಸ್ ಕಮಿಟಿ ತನಗೆ ಸರಿಯಾದ ವಿಚಾರಣೆಯ ಅವಕಾಶ ನೀಡದೆ, ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ಉಚ್ಚಾಟಿಸಿದೆ ಎಂದೂ ಆರೋಪಿಸಿದ್ದಾರೆ. ಆದರೆ 2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಅದೇ ಕೃಷ್ಣನಗರ ಕ್ಷೇತ್ರದಿಂದ ಭಾರಿ ಮತಗಳ ಅಂತರದಿಂದ ಗೆದ್ದು ಸಂಸತ್ತಿಗೆ ಮರಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...