ಶರದ್ ಪವಾರ್ ಬಣಕ್ಕೆ ಹೊಸ ಹೆಸರು ಸೂಚಿಸಿದ ಸುಪ್ರೀಂ ಕೋರ್ಟ್

Date:

ಸುಪ್ರೀಂ ಕೋರ್ಟ್ ಚುನಾವಣಾ ಆಯೋಗದ ವಿರುದ್ಧ ಮೇಲ್ಮನವಿ ಸಲ್ಲಿಸಿದ ಶರದ್‌ ಪವಾರ್ ನೇತೃತ್ವದ ಎನ್‌ಸಿಪಿ ಅರ್ಜಿಯನ್ನು ವಿಚಾರಣೆಗೊಳಪಡಿಸಲು ಒಪ್ಪಿಗೆ ಸೂಚಿಸಿದೆ. ಇತ್ತೀಚಿಗಷ್ಟೆ ಚುನಾವಣಾ ಆಯೋಗವು ಮಹಾರಾಷ್ಟ್ರದ ಅಜಿತ್ ಪವಾರ್ ನೇತೃತ್ವದ ಬಣವನ್ನು ನಿಜವಾದ ಎನ್‌ಸಿಪಿ ಎಂದು ಘೋಷಿಸಿತ್ತು.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಕೆ ವಿ ವಿಶ್ವನಾಥನ್ ಅವರಿದ್ದ ಪೀಠವು ಮುಂದಿನ ಆದೇಶ ಬರುವವರೆಗೂ ಚುನವಣಾ ಆಯೋಗ ನೀಡಿದ ಆದೇಶಕ್ಕೆ  ಮಧ್ಯಂತರ ಆದೇಶ ನೀಡಿ ಶರದ್‌ ಪವಾರ್ ಬಣದ ಎನ್‌ಸಿಪಿ ಬಣಕ್ಕೆ ಎನ್‌ಸಿಪಿ ಶರದ್‌ ಚಂದ್ರ ಪವಾರ್ ಎಂದು ಬಳಸಲು ಅನುಮತಿಸಿದೆ.

ಅರ್ಜಿದಾರರು ಪಕ್ಷದ ಚಿಹ್ನೆಯನ್ನು ಪಡೆಯಲು ಚುನಾವಣಾ ಆಯೋಗವನ್ನು ಕೋರಲು ಸೂಚಿಸಿತಲ್ಲದೆ, ಅರ್ಜಿ ಸಲ್ಲಿಸಿದ ಒಂದು ವಾರದೊಳಗಾಗಿ ನೀಡಲಾಗುತ್ತದೆ ಎಂಬುದನ್ನು ತಿಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತವನ್ನು ಗೆಲ್ಲಿಸಿದ ಬಡವರ ಮಕ್ಕಳ ಬೆರಗಿನ ಆಟ

ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವಾರಗಳ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಅಜಿತ್ ಪವಾರ್ ಬಣಕ್ಕೆ ನೋಟಿಸ್ ನೀಡಿತು. ಕೋರ್ಟ್ ಮುಂದಿನ ವಿಚಾರಣೆಯನ್ನು ಮೂರು ವಾರಗಳ ನಂತರದ ಅವಧಿಗೆ ಮುಂದೂಡಿದೆ.

ಅರ್ಜಿದಾರ ಶರದ್‌ ಪವಾರ್ ಪರವಾಗಿ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ಪಕ್ಷದ ಹೆಸರು ಹಾಗೂ ಚಿಹ್ನೆಯನ್ನು ಬಳಸುವಂತೆ ಕೋರ್ಟ್‌ಗೆ ಮನವಿ ಮಾಡಿದರು.

ಕಳೆದ ವರ್ಷದ ಜುಲೈನಲ್ಲಿ ಅಜಿತ್ ಪವಾರ್ ಹಾಗೂ ಎಂಟು ಇತರ ಶಾಸಕರು ಶರದ್‌ ಪವಾರ್ ಗುಂಪಿನಿಂದ ಬೇರ್ಪಟ್ಟು ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದರು. ಫೆ.15ರಂದು ಅಜಿತ್ ಪವಾರ್‌ ಅವರ ಬಣ ನಿಜವಾದ ಎಂದು ಮಹಾರಾಷ್ಟ್ರ ಸ್ಪೀಕರ್ ಘೋಷಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಿತ್ ಪವಾರ್ ಗುಂಪು ಕೂಡ ಈಗಾಗಲೇ ಕೇವಿಯೇಟ್ ಸಲ್ಲಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...