ಚುನಾವಣಾ ಬಾಂಡ್| ಸುಪ್ರೀಂ ಕೋರ್ಟ್‌ನಲ್ಲಿ ಇಂದು ಎಸ್‌ಬಿಐ ಅರ್ಜಿ ವಿಚಾರಣೆ

Date:

ಚುನಾವಣಾ ಬಾಂಡ್‌ನ ಸಂಪೂರ್ಣ ಮಾಹಿತಿಯನ್ನು ನೀಡಲು ಜೂನ್ ಅಂತ್ಯದವರೆಗೂ ಅಂದರೆ ನಾಲ್ಕು ತಿಂಗಳುಗಳ ಕಾಲಾವಕಾಶವನ್ನು ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ.

ಕಳೆದ ತಿಂಗಳು ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಅನ್ನು ಅಸಾಂವಿಧಾನಿಕ ಎಂದು ಘೋಷಿಸಿದ್ದು, ಎಸ್‌ಬಿಐಗೆ ಚುನಾವಣಾ ಬಾಂಡ್‌ ಖರೀದಿಸಿದವರ ಹೆಸರು, ಮೊತ್ತ, ಯಾವ ಪಕ್ಷಕ್ಕೆ ದೇಣಿಗೆ ನೀಡಲಾಗಿದೆ ಎಂಬ ಎಲ್ಲಾ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಲು ಮಾರ್ಚ್‌ 6ರವರೆಗೆ ಸಮಯ ನೀಡಿತ್ತು.

ಹಾಗೆಯೇ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಈ ವಿವರ ಪ್ರಕಟಿಸಲು ಮಾರ್ಚ್ 13ರವರೆಗೆ ಸಮಯ ನೀಡಿದೆ. ಆದರೆ ಎಸ್‌ಬಿಐ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಲು ಜೂನ್ 30ರವರೆಗೆ ಸಮಯವಕಾಶವನ್ನು ಕೋರಿದ್ದು, ಲೋಕಸಭೆ ಚುನಾವಣೆ ಮುಗಿಯುವವರೆಗೂ ಎಸ್‌ಬಿಐ ಅವಕಾಶ ಕೇಳಿರುವುದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ನೇತೃತ್ವದ ಐದು ನ್ಯಾಯಾಧೀಶರನ್ನೊಳಗೊಂಡ ಪೀಠವು ಈ ಅರ್ಜಿ ವಿಚಾರಣೆಯನ್ನು ಇಂದು 10:30ಕ್ಕೆ ನಡೆಸಲಿದೆ. ಈ ಪೀಠದಲ್ಲಿ ನ್ಯಾಯಮೂರ್ತಿ ಸಂಜೀವ್ ಖನ್ನಾ, ಬಿಆರ್‌ ಗವಾಯ್, ಜೆಬಿ ಪಾರ್ದಿವಾಲಾ, ಮನೋಜ್ ಮಿಶ್ರಾ ಇರಲಿದ್ದಾರೆ.

ಇನ್ನು ಆಸೋಸಿಷಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ (ಎಡಿಆರ್) ಎನ್‌ಜಿಒ ಮತ್ತು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಎಸ್‌ಬಿಐ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಿದ್ದು ಇದರ ವಿಚಾರಣೆಯೂ ನಡೆಯಲಿದೆ. ಮಾರ್ಚ್‌ 6ರವರೆಗೆ ಎಸ್‌ಬಿಐಗೆ ಸುಪ್ರೀಂ ಗಡುವು ನೀಡಿದ್ದು, ಇದನ್ನು ಎಸ್‌ಬಿಐ ಉಲ್ಲಂಘಿಸಿದೆ ಎಂದು ಸಿಪಿಐಎಂ ಮತ್ತು ಎಡಿಆರ್‌ ಆರೋಪಿಸಿದೆ.

ಪ್ರಸ್ತುತ ಎಲ್ಲವೂ ಕಂಪ್ಯೂಟರೀಕರಣವಾಗಿದ್ದು ಮಾಹಿತಿ ಶೀಘ್ರವೇ ಲಭ್ಯವಾಗುತ್ತದೆ. ಹಾಗಿರುವಾಗ ಎಸ್‌ಬಿಐ ನಾಲ್ಕು ತಿಂಗಳುಗಳ ಸಮಯ ಕೇಳಿರುವುದು ಚರ್ಚೆಗೆ ಗ್ರಾಸವಾಗಿದೆ. “ಎಸ್‌ಬಿಐ 48 ಕೋಟಿ ಬ್ಯಾಂಕ್ ಖಾತೆಗಳು, 66,000 ಎಟಿಎಂಗಳು ಮತ್ತು 23,000 ಬ್ರ್ಯಾಂಚ್‌ಗಳನ್ನು ನಿರ್ವಹಿಸುತ್ತದೆ. ಆದರೆ ಬರೀ 22,217 ಚುನಾವಣಾ ಬಾಂಡ್‌ಗಳ ಮಾಹಿತಿ ನೀಡಲು ಎಸ್‌ಬಿಐ ನಾಲ್ಕು ತಿಂಗಳು ಸಮಯ ಕೇಳುತ್ತದೆ” ಎಂದು ಕಾಂಗ್ರೆಸ್ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...