ಆನ್‌ಲೈನ್ ಹೂಡಿಕೆ | ಅಧಿಕ ಬಡ್ಡಿ ಆಸೆಗೆ ಬಿದ್ದು 66 ಲಕ್ಷ ರೂ. ಕಳೆದುಕೊಂಡ ಶಾಲಾ ಶಿಕ್ಷಕ

Date:

ತಾನು ಹೂಡಿಕೆ ಮಾಡಿದ ಹಣಕ್ಕೆ ಅಧಿಕ ಬಡ್ಡಿ ಮೊತ್ತವನ್ನು ಪಡೆಯುವ ಆಸೆಯಲ್ಲಿ ಶಾಲಾ ಶಿಕ್ಷಕರೊಬ್ಬರು ಆನ್‌ಲೈನ್ ಹೂಡಿಕೆ ಮಾಡಿ ಬರೋಬ್ಬರಿ 66 ಲಕ್ಷ ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ 54 ವರ್ಷದ ಶಾಲಾ ಶಿಕ್ಷಕರು ಆನ್‌ಲೈನ್ ಹೂಡಿಕೆ ಹಗರಣಕ್ಕೆ ಬಲಿಯಾಗಿದ್ದಾರೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಸೈಬರ್ ವಂಚನೆ | ಆನ್​ಲೈನ್​ನಲ್ಲಿ ₹82 ಲಕ್ಷ ಕಳೆದುಕೊಂಡ ಟೆಕ್ಕಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುನೀತಾ ಚೌಧರಿ ಎಂದು ಗುರುತಿಸಿಕೊಂಡ ಮಹಿಳೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಪರಿಚಯವಾಗಿ ಸ್ನೇಹ ಬೆಳೆಸಿಕೊಂಡಿದ್ದರು. ಬಡ್ಡಿ ಮೂಲಕ ಅಧಿಕ ಆದಾಯವನ್ನು ಪಡೆಯುವ ಭರವಸೆ ನೀಡಿ ವೆಬ್‌ಸೈಟ್ ಒಂದರಲ್ಲಿ ಹೂಡಿಕೆ ಮಾಡುವಂತೆ ಒತ್ತಾಯಿಸಿದರು” ಎಂದು ಕಲ್ಯಾಣ್ ನಿವಾಸಿ ಶಿಕ್ಷಕ ಪೊಲೀಸರಿಗೆ ತಿಳಿಸಿದ್ದಾರೆ.

ಶಿಕ್ಷಕ 50 ದಿನಗಳಲ್ಲಿ ಈ ಯೋಜನೆಯಲ್ಲಿ ಸುಮಾರು 66 ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಕೊಲ್ಸೆವಾಡಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಆದರೆ ಯಾವುದೇ ಮೊತ್ತ ಬಾರದ ಕಾರಣ ಹೂಡಿಕೆಯ ಮೊತ್ತದ ಮರುಪಾವತಿ ಮಾಡುವಂತೆ ಕೇಳಲು ಆ ಮಹಿಳೆಯ ಎರಡು ಮೊಬೈಲ್ ನಂಬರ್‌ಗಳಿಗೂ ಕರೆ ಮಾಡಿದ್ದು ಸಂಪರ್ಕ ಲಭ್ಯವಾಗಿಲ್ಲ. ಇದಾದ ಬಳಿಕ ಶಿಕ್ಷಕ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿಯ ಪತ್ತೆ ಹಚ್ಚಲು ಪ್ರಯತ್ನಿಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ದೇಶದಲ್ಲಿ ಆನ್‌ಲೈನ್ ವಂಚನೆ, ಸೈಬರ್ ಕ್ರೈಮ್ ಪ್ರಕರಣಗಳು ಅಧಿಕವಾಗುತ್ತಿದೆ. ಅದರಲ್ಲೂ ಹೆಚ್ಚಾಗಿ ಶಿಕ್ಷಕರು, ಇಂಜಿನಿಯರ್‌ಗಳು, ಪತ್ರಕರ್ತರಂತಹ ವಿದ್ಯಾವಂತರೇ ಈ ಜಾಲದಲ್ಲಿ ಸಿಲುಕುತ್ತಿದ್ದಾರೆ. ಈ ಹಿಂದೆ ಹಿರಿಯ ನಾಯಕರನ್ನು ಗುರಿಯಾಗಿಸಿಕೊಂಡಿದ್ದ ವಂಚಕರು ಇದೀಗ ಹೆಚ್ಚಾಗಿ ಟೆಕ್ಕಿಗಳನ್ನು ಬಲೆಗೆ ಬೀಳಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...